Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ಬೈರಾಮಡಗಿ ಶಾಖಾ ಮಠದ...

Afzalpur | ಬೈರಾಮಡಗಿ ಶಾಖಾ ಮಠದ ಪೀಠಾಧಿಪತಿ ನೇಮಕ ಕಾನೂನುಬಾಹಿರ: ಶಾಂತಲಿಂಗ ಮಹಾಸ್ವಾಮೀಜಿ ಆರೋಪ

ವಾರ್ತಾಭಾರತಿವಾರ್ತಾಭಾರತಿ4 Nov 2026 5:19 PM IST
share
Afzalpur | ಬೈರಾಮಡಗಿ ಶಾಖಾ ಮಠದ ಪೀಠಾಧಿಪತಿ ನೇಮಕ ಕಾನೂನುಬಾಹಿರ: ಶಾಂತಲಿಂಗ ಮಹಾಸ್ವಾಮೀಜಿ ಆರೋಪ

ಅಫಜಲಪುರ: ತಾಲೂಕಿನ ಬೈರಾಮಡಗಿ ಶಾಖಾ ಮಠಕ್ಕೆ ಇತ್ತೀಚೆಗೆ ನಡೆದ ಪೀಠಾಧಿಪತಿ ನೇಮಕ ಸಂಪೂರ್ಣ ಕಾನೂನುಬಾಹಿರವಾಗಿದೆ. ಮೂಲ ಪೀಠದ ಅಧಿಕಾರವನ್ನು ಉಲ್ಲಂಘಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ದುಧನಿಯ ಶ್ರೀ ಗುರುಶಾಂತಲಿಂಗೇಶ್ವರ ವಿರಕ್ತ ಮಠದ ಪೀಠಾಧಿಪತಿ ಶಾಂತಲಿಂಗ ಮಹಾಸ್ವಾಮೀಜಿ ಆರೋಪಿಸಿದ್ದಾರೆ.

ದುಧನಿ ಗ್ರಾಮದಲ್ಲಿ ಬುಧವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ದುಧನಿಯ ಶ್ರೀ ಗುರುಶಾಂತಲಿಂಗೇಶ್ವರ ವಿರಕ್ತ ಮಠದ ಅಧೀನದಲ್ಲಿ ನಿಂಬಾಳ, ಕೌಲಗಿ, ಬಳರ್ಗಿ, ಸಿನ್ನೂರ, ಕಾರ್ತಾಬಾದ, ಲಾಡ್ ಚೊಂಚೋಳಿ ಹಾಗೂ ಬೈರಾಮಡಗಿ ಸೇರಿದಂತೆ ಹಲವು ಶಾಖಾ ಮಠಗಳು ಕಾರ್ಯನಿರ್ವಹಿಸುತ್ತಿವೆ. ಈ ಎಲ್ಲ ಮಠಗಳಿಗೂ ದುಧನಿಯ ಮಠವೇ ಮೂಲ ಪೀಠವಾಗಿದೆ ಎಂದು ತಿಳಿಸಿದ್ದಾರೆ.

ಬೈರಾಮಡಗಿ ಶಾಖಾ ಮಠದ ಗುರುಗಳು 2015ರಲ್ಲಿ ಲಿಂಗೈಕ್ಯರಾದ ಬಳಿಕ ಆ ಮಠಕ್ಕೆ ಹೊಸ ಪೀಠಾಧಿಪತಿಯನ್ನು ನೇಮಕ ಮಾಡುವ ಅಧಿಕಾರ ಮೂಲ ಪೀಠಕ್ಕೇ ಸೇರಿದೆ. ಆದರೆ, ಕೆಲವರು ಮಠದ ಆಸ್ತಿಯ ಮೇಲೆ ಹಿಡಿತ ಸಾಧಿಸುವ ಉದ್ದೇಶದಿಂದ ಮೂಲ ಪೀಠದ ಅನುಮತಿ ಇಲ್ಲದೆ ಬೇರೊಬ್ಬ ವ್ಯಕ್ತಿಯನ್ನು ಪೀಠಾಧಿಪತಿಯಾಗಿ ನೇಮಕ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಸಂಬಂಧ ಅಫಜಲಪುರದ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಕೆಲವರ ವಿರುದ್ಧ ನ್ಯಾಯಾಲಯವು ತಾತ್ಕಾಲಿಕ ತಡೆಯಾಜ್ಞೆಯನ್ನೂ ನೀಡಿದೆ. ಆದಾಗ್ಯೂ, ಕಳೆದ ನವೆಂಬರ್ 1ರಂದು ಷಟಕ್ಷರಿ ಎಂಬ ವ್ಯಕ್ತಿಯನ್ನು ಬೈರಾಮಡಗಿ ಶಾಖಾ ಮಠದ ಪೀಠಾಧಿಪತಿಯಾಗಿ ನೇಮಕ ಮಾಡಿರುವುದು ನ್ಯಾಯಾಲಯದ ಆದೇಶ ಹಾಗೂ ಮಠದ ಸಂಪ್ರದಾಯಗಳಿಗೆ ವಿರುದ್ಧವಾಗಿದೆ ಎಂದು ತಿಳಿಸಿದ್ದಾರೆ.

ಈ ನೇಮಕವನ್ನು ಮೂಲ ಪೀಠದ ಅಧೀನದಲ್ಲಿರುವ ಎಲ್ಲ ಶಾಖಾ ಮಠಗಳ ಶ್ರೀಗಳು ಖಂಡಿಸಿದ್ದು, ಷಟಕ್ಷರಿ ಅವರಿಗೆ ಬೈರಾಮಡಗಿ ಶಾಖಾ ಮಠದೊಂದಿಗೆ ಯಾವುದೇ ಅಧಿಕೃತ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸಂದರ್ಭದಲ್ಲಿ ದುಧನಿ ಹಾಗೂ ಬೈರಾಮಡಗಿ ಭಕ್ತಾದಿ ಮಂಡಳಿಯ ಮುಖಂಡರಾದ ಮಹಾಂತೇಶ ಪಾಟೀಲ, ಸುಭಾಷ್ ಪರಮಶೆಟ್ಟಿ, ಯಶ್ವಂತ್ರಾಯ ಬಿರಾದಾರ, ಬಸಣ್ಣ ಹಿರೇಗೌಡರ, ಪ್ರೇಮನಾಥ ಜಗದಿ ಹಾಗೂ ಬಸವರಾಜ ಅಂಕಲಗಿ ಉಪಸ್ಥಿತರಿದ್ದರು.

Tags

Afzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X