Afzalpur | ಮಹಿಳಾ ದೌರ್ಜನ್ಯ ತಡೆಗೆ ಜಾಗೃತಿ ಅಗತ್ಯ: ಬಸೀರಾ ಗೊಟ್ಯಾಳ

ಅಫಜಲಪುರ: ತಾಲೂಕಿನ ಮಲ್ಲಾಬಾದ್ ಗ್ರಾಮದಲ್ಲಿ ವಿ.ಕೆ.ಜಿ. ಸಾಂತ್ವನ ಸಹಾಯವಾಣಿ ಕೇಂದ್ರ, ಅಫಜಲಪುರ ವತಿಯಿಂದ ಮಹಿಳಾ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಸಾಂತ್ವನ ಕೇಂದ್ರದ ಆಪ್ತ ಸಮಾಲೋಚಕರಾದ ಬಸೀರಾ ಗೊಟ್ಯಾಳ ಅವರು ಮಹಿಳಾ ದೌರ್ಜನ್ಯ, ಲೈಂಗಿಕ ಕಿರುಕುಳ, ವರದಕ್ಷಿಣೆ ಕಿರುಕುಳ ಹಾಗೂ ಬಾಲ್ಯ ವಿವಾಹದಂತಹ ಸಾಮಾಜಿಕ ಪಿಡುಗುಗಳ ಕುರಿತು ಮಹಿಳೆಯರಿಗೆ ಸರಳವಾಗಿ ಮಾಹಿತಿ ನೀಡಿದರು.
ಮಹಿಳಾ ದೌರ್ಜನ್ಯ ತಡೆಗಟ್ಟಲು ಜಾಗೃತಿ ಅತ್ಯಗತ್ಯವಾಗಿದ್ದು, ಮಹಿಳೆಯರು ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದಿರಬೇಕು ಎಂದು ತಿಳಿಸಿದರು. ಅಲ್ಲದೆ, ಇಂತಹ ಕೃತ್ಯಗಳಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಮುಖ್ಯಸ್ಥರು, ಸಮಿತಿ ಅಧ್ಯಕ್ಷರು ಹಾಗೂ ಹಿರಿಯ ಮುಖಂಡರು ಭಾಗವಹಿಸಿ ಮಹಿಳೆಯರ ಸಮಸ್ಯೆಗಳು, ಅವರ ಹಕ್ಕುಗಳು ಮತ್ತು ಸಮಾಜದಲ್ಲಿ ಮಹಿಳೆಯರ ಸುರಕ್ಷತೆಯ ಮಹತ್ವದ ಕುರಿತು ಮಾತನಾಡಿದರು.
ಗ್ರಾಮದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.
Next Story




