Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ಅನಿರ್ದಿಷ್ಟಾವಧಿ ಧರಣಿ...

Afzalpur | ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಬಿಜೆಪಿ-ಜೆಡಿಎಸ್ ಬೆಂಬಲ; ಪಕ್ಷಾತೀತ ಹೋರಾಟಕ್ಕೆ ಕರೆ

ವಾರ್ತಾಭಾರತಿವಾರ್ತಾಭಾರತಿ18 July 2026 6:24 PM IST
share
Afzalpur | ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಬಿಜೆಪಿ-ಜೆಡಿಎಸ್ ಬೆಂಬಲ; ಪಕ್ಷಾತೀತ ಹೋರಾಟಕ್ಕೆ ಕರೆ

ಅಫಜಲಪುರ: ಭೀಮಾ ನದಿಗೆ ಉಜನಿ ಜಲಾಶಯದಿಂದ ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ ಅಫಜಲಪುರ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಭೇಟಿ ನೀಡಿ ಬೆಂಬಲ ಸೂಚಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ್, ಬರಗಾಲದಿಂದ ಅಫಜಲಪುರ ಭಾಗದ ರೈತರು ತೀವ್ರ ಸಂಕಷ್ಟದಲ್ಲಿದ್ದು, ರಾಜ್ಯ ಸರ್ಕಾರ ಕೂಡಲೇ ಭೀಮಾ ನದಿಗೆ ನೀರು ಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

“ರೈತರ ಹೋರಾಟಕ್ಕೆ ನಮ್ಮ ಬೆಂಬಲ ಸದಾ ಇರುತ್ತದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲರೂ ಒಂದಾಗಿ ಹೋರಾಟ ನಡೆಸಿದಾಗ ಮಾತ್ರ ಭೀಮಾ ನದಿಗೆ ಶಾಶ್ವತವಾಗಿ ನೀರು ಹರಿಸುವಲ್ಲಿ ಯಶಸ್ಸು ಸಾಧಿಸಬಹುದು. ಇದು ಯಾವುದೇ ಪಕ್ಷದ ಹೋರಾಟವಲ್ಲ, ರೈತರ ಬದುಕಿನ ಹೋರಾಟವಾಗಿದೆ,” ಎಂದು ಹೇಳಿದರು.

ಜೆಡಿಎಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಶಿವಕುಮಾರ ನಾಟೀಕಾರ ಮಾತನಾಡಿ, “ಭೀಮಾ ನದಿ ಉಳಿದರೆ ಮಾತ್ರ ಅಫಜಲಪುರದ ರೈತರು ಉಳಿಯಲು ಸಾಧ್ಯ. ರಾಜ್ಯ ಸರ್ಕಾರ ತಕ್ಷಣ 5 ಟಿಎಂಸಿ ನೀರು ಬಿಡುಗಡೆ ಮಾಡಬೇಕು. ಅಲ್ಲದೆ, ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರಬೇಕಿರುವ 15 ಟಿಎಂಸಿ ನೀರನ್ನು ಪಡೆಯಲು ಸರ್ವಪಕ್ಷ ನಿಯೋಗದೊಂದಿಗೆ ಮಹಾರಾಷ್ಟ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು,” ಎಂದು ಒತ್ತಾಯಿಸಿದರು.

ಅಗತ್ಯವಿದ್ದರೆ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಜಲ ಆಯೋಗದ ಮಧ್ಯಸ್ಥಿಕೆ ಪಡೆಯಬೇಕು. ನ್ಯಾಯ ದೊರೆಯದಿದ್ದರೆ ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ದಾವೆ ಹೂಡಿ ಕರ್ನಾಟಕದ ಪಾಲಿನ ನೀರನ್ನು ಬಿಡುಗಡೆ ಮಾಡಿಸಬೇಕು. ಈ ಹೋರಾಟ ಪಕ್ಷಾತೀತವಾಗಿ ಸಾಗಿದರೆ ಮಾತ್ರ ಯಶಸ್ವಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಮುಖಂಡರಾದ ರಮೇಶ ಪಾಟೀಲ, ಲತೀಫ್ ಪಟೇಲ್, ಪ್ರಭಾವತಿ ಮೇತ್ರಿ, ನಾಮದೇವ ,ಶ್ರೀಮಂತ ಬಿರಾದಾರ, ರಮೇಶ ಶೆಟ್ಟಿ, ಭೀಮರಾಯ ತಳವಾರ, ರಾಜಕುಮಾರ ಉಕ್ಕಲಿ, ಮಹಾಂತಗೌಡ ಪಾಟೀಲ, ಮರೆಪ್ಪ ಜಮಾದಾರ, ಗುರು ಚಾಂದಕವಟೆ, ದುಂಡು ಘಾಣೂರ, ಸಿದ್ದಪ್ಪ ಜೇವರ್ಗಿ, ಸಿದ್ದಣಗೌಡ ಮಾಲಿ ಪಾಟೀಲ ಸೇರಿದಂತೆ ತಾಲೂಕಿನ ವಿವಿಧ ಹಳ್ಳಿಗಳಿಂದ ನೂರಾರು ರೈತರು ಧರಣಿಯಲ್ಲಿ ಪಾಲ್ಗೊಂಡು ಬೆಂಬಲಿಸಿದರು.

Tags

protestJDSBJPAfzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X