Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ದೇವರಾಜ ಅರಸು ವಸತಿ ಯೋಜನೆಯ...

Afzalpur | ದೇವರಾಜ ಅರಸು ವಸತಿ ಯೋಜನೆಯ ಫಲಾನುಭವಿಗಳಿಗೆ ತಕ್ಷಣ ಕಾರ್ಯದೇಶ ನೀಡುವಂತೆ ಬಿಜೆಪಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ15 Sept 2026 7:35 PM IST
share
Afzalpur | ದೇವರಾಜ ಅರಸು ವಸತಿ ಯೋಜನೆಯ ಫಲಾನುಭವಿಗಳಿಗೆ ತಕ್ಷಣ ಕಾರ್ಯದೇಶ ನೀಡುವಂತೆ ಬಿಜೆಪಿ ಆಗ್ರಹ

ಅಫಜಲಪುರ: ದೇವರಾಜ ಅರಸು ವಸತಿ ಯೋಜನೆಯಡಿ ಮಂಜೂರಾದ 500 ಮನೆಗಳ ಫಲಾನುಭವಿಗಳಿಗೆ ತಕ್ಷಣ ಕಾರ್ಯದೇಶ ನೀಡಬೇಕು, ಇಲ್ಲವಾದರೆ ರಾಜ್ಯ ಹೆದ್ದಾರಿಯಲ್ಲೇ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ್ ಎಚ್ಚರಿಕೆ ನೀಡಿದರು.

ತಾಲೂಕಿನ ಗೊಬ್ಬುರ (ಬಿ) ಗ್ರಾಮದ ಬಳಿ ಕಲಬುರಗಿ–ಅಫಜಲಪುರ ರಾಜ್ಯ ಹೆದ್ದಾರಿಯನ್ನು ತಡೆದು ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಸ್ಥಳೀಯ ಶಾಸಕರು ಹಾಗೂ ಅವರ ಪುತ್ರರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಭೀಮಾ–ಸೊನ್ನ ಬ್ಯಾರೇಜ್‌ನಿಂದ 54 ಕಿ.ಮೀ. ಉದ್ದದ ಕಾಲುವೆ ಇದ್ದರೂ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ತಲುಪುತ್ತಿಲ್ಲ. ಕಾಲುವೆಯಲ್ಲಿ ಹೂಳು ತುಂಬಿಕೊಂಡಿದ್ದು, ಮೊದಲು ಅಫಜಲಪುರ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪಕ್ಕದ ಆಳಂದ ತಾಲೂಕಿಗೆ ನೀರು ಹರಿಸಲು ಪ್ರಯತ್ನಿಸಲಾಗುತ್ತಿದೆ. ಆದರೆ ಅಫಜಲಪುರ ತಾಲೂಕಿನ ರೈತರು ಹಾಗೂ ಬಡಜನರ ಸಮಸ್ಯೆಗಳಿಗೂ ಆದ್ಯತೆ ನೀಡಬೇಕು. ರೈತರ ಜಮೀನುಗಳಿಗೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ ಮಂಜೂರಾದ ಅನುದಾನ ದುರ್ಬಳಕೆಯಾಗಿದೆ ಎಂದು ನಿತಿನ್ ಗುತ್ತೇದಾರ್ ಆರೋಪಿಸಿದರು.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಮಧುಮತಿ ಪ್ರತಿಭಟನಾಕಾರರ ಅಹವಾಲು ಆಲಿಸಿ, 15 ದಿನಗಳೊಳಗೆ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಾಣದ ಕಾರ್ಯದೇಶ ನೀಡಲಾಗುವುದು ಎಂದು ಭರವಸೆ ನೀಡಿದರು. ಅಧಿಕಾರಿಗಳ ಭರವಸೆಯ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

ಪ್ರತಿಭಟನೆಯಲ್ಲಿ ತಾಪಂ ಇಒ ಶಂಕರ ರಾಠೋಡ, ಡಿವೈಎಸ್ಪಿ ತಮ್ಮರಾಯ ಪಾಟೀಲ್, ಸಿಪಿಐ ಲಖನ್ ಮಸಗುಪ್ಪಿ, ಪಿಎಸ್ಐ ಸಂಗೀತಾ ಸಿಂಧೆ, ಸಂಗಮೇಶ, ಬಿಜೆಪಿ ತಾಲೂಕು ಅಧ್ಯಕ್ಷ ವಿದ್ಯಾಧರ ಮಂಗಳೂರೆ ಹಾಗೂ ಬಸವರಾಜ ಸಪ್ಪನಗೋಳ ಮಾತನಾಡಿದರು.

ಬಿಜೆಪಿ ಮುಖಂಡರಾದ ಸಿದ್ದು ದೇವತ್ಕಲ್, ಸುಭಾಷ್ ಚಂದ್ರ ರಾಠೋಡ, ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ಅವಣ್ಣ ಮ್ಯಾಕೇರಿ, ಪ್ರಭು ದೇವತ್ಕಲ್, ಬಸಲಿಂಗಪ್ಪ ದೇವತ್ಕಲ್, ಪ್ರವೀಣ್ ದೇವತ್ಕಲ್, ಗುರು ಸಾಲಿಮಠ, ಜ್ಯೋತಿ ಪ್ರಕಾಶ್ ಪಾಟೀಲ್, ಧಾನು ಪತಾಟೆ, ಶರಣು ಪದಕಿ, ಶಿವು ಪಡಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Devaraj UrsBJPAfzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X