Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ಯುವಜನರಲ್ಲಿ ಪುಸ್ತಕ ಓದುವ...

Afzalpur | ಯುವಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವುದು ಇಂದಿನ ಅಗತ್ಯ: ಬಿ.ಎಚ್.ನಿರಗುಡಿ

‘ಮನೆಗೊಂದು ಗ್ರಂಥಾಲಯ’ ಅನುಷ್ಠಾನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ9 Nov 2026 6:48 PM IST
share
Afzalpur | ಯುವಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವುದು ಇಂದಿನ ಅಗತ್ಯ: ಬಿ.ಎಚ್.ನಿರಗುಡಿ

ಅಫಜಲಪುರ: ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಪ್ರಭಾವದ ನಡುವೆ ಯುವಜನರು ಹಾಗೂ ವಿದ್ಯಾರ್ಥಿಗಳಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವುದು ಇಂದಿನ ಅಗತ್ಯವಾಗಿದೆ. ಪುಸ್ತಕಗಳ ಅಧ್ಯಯನದಿಂದ ಜ್ಞಾನ, ಚಿಂತನಾ ಶಕ್ತಿ ಮತ್ತು ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ರಾಜ್ಯ ಸದಸ್ಯ ಬಿ.ಎಚ್. ನಿರಗುಡಿ ಹೇಳಿದರು.

ಪಟ್ಟಣದ ಮಳೇಂದ್ರ ಮಠದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಹಾಗೂ ಜಿಲ್ಲಾ ಜಾಗೃತ ಸಮಿತಿ, ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ‘ಮನೆಗೊಂದು ಗ್ರಂಥಾಲಯ’ ಅನುಷ್ಠಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪುಸ್ತಕಗಳನ್ನು ಆಳವಾಗಿ ಅಧ್ಯಯನ ಮಾಡಿ ಜ್ಞಾನ ಸಂಪಾದಿಸುವವರು ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ಪುಸ್ತಕ ಪ್ರಾಧಿಕಾರವು ಓದುವ ಸಂಸ್ಕೃತಿಯನ್ನು ಜನಸಾಮಾನ್ಯರಿಗೆ ತಲುಪಿಸಲು ವಿವಿಧ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗಾಗಿ ‘ನನ್ನ ನೆಚ್ಚಿನ ಪುಸ್ತಕ’, ರಸಪ್ರಶ್ನೆ, ಪ್ರಬಂಧ ಸ್ಪರ್ಧೆ ಸೇರಿದಂತೆ ಪುಸ್ತಕ ಪ್ರದರ್ಶನ, ವಿಚಾರ ಸಂಕಿರಣ ಹಾಗೂ ತಿಂಗಳ ಪುಸ್ತಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಮಾತನಾಡಿ, ಪುಸ್ತಕಗಳನ್ನು ಓದುವ ಮೂಲಕ ಪಡೆದ ಜ್ಞಾನವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಬದುಕು ಉಜ್ವಲವಾಗುತ್ತದೆ. ಪ್ರತಿಯೊಬ್ಬರೂ ಮನೆಯಲ್ಲಿ ಪುಸ್ತಕಗಳನ್ನು ಸಂಗ್ರಹಿಸುವುದರ ಜೊತೆಗೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು.

ಪತ್ರಕರ್ತ ಮಲ್ಲಿಕಾರ್ಜುನ ಹಿರೇಮಠ ಮಾತನಾಡಿ, ಮನೆಗಳಲ್ಲಿ ಪುಸ್ತಕಗಳ ಸಂಗ್ರಹ ಹೊಂದಿ ಓದುವ ಹವ್ಯಾಸ ಬೆಳೆಸಿಕೊಳ್ಳುವುದು ಸಂತಸದ ಸಂಗತಿ. ‘ಮನೆಗೊಂದು ಗ್ರಂಥಾಲಯ’ ಅಭಿಯಾನವು ಪ್ರತಿಯೊಬ್ಬರಲ್ಲೂ ಓದುವ ಆಸಕ್ತಿ ಮೂಡಿಸುವಲ್ಲಿ ಸಹಕಾರಿಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ಬಸಣ್ಣ ಗುಣಾರಿ, ಮುರುಗೇಂದ್ರ ಮಸಳಿ, ಬಸವರಾಜ ಕಲಶೆಟ್ಟಿ, ಅಬ್ಬಾಸಲಿ ನದಾಫ್, ಬಿ.ಎಂ. ರಾವ್, ಬಸವರಾಜ ನಿಂಬರ್ಗಿ, ರೇವಣಸಿದ್ದಯ್ಯ ಹಿರೇಮಠ ಹಾಗೂ ರೇವಣಸಿದ್ದಪ್ಪ ದುಕಾನ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags

BooksAfzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X