Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ವಿದ್ಯುತ್ ತಂತಿ ತಗುಲಿ ರೈತ...

Afzalpur | ವಿದ್ಯುತ್ ತಂತಿ ತಗುಲಿ ರೈತ ಮೃತ್ಯು : ಲೈನ್‌ಮ್ಯಾನ್ ನಿರ್ಲಕ್ಷ್ಯ ಆರೋಪಿಸಿ ರಸ್ತೆ ತಡೆದು ಗ್ರಾಮಸ್ಥರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ26 Jun 2026 10:50 PM IST
share
Afzalpur | ವಿದ್ಯುತ್ ತಂತಿ ತಗುಲಿ ರೈತ ಮೃತ್ಯು : ಲೈನ್‌ಮ್ಯಾನ್ ನಿರ್ಲಕ್ಷ್ಯ ಆರೋಪಿಸಿ ರಸ್ತೆ ತಡೆದು ಗ್ರಾಮಸ್ಥರ ಪ್ರತಿಭಟನೆ

ಅಫಜಲಪುರ: ತಾಲೂಕಿನ ಅಳ್ಳಗಿ (ಕೆ) ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ರೈತನೊಬ್ಬ ಮೃತಪಟ್ಟಿರುವ ದುರ್ಘಟನೆ ಸಂಭವಿಸಿದ್ದು, ಈ ಪ್ರಕರಣದಲ್ಲಿ ಲೈನ್‌ಮ್ಯಾನ್ ನಿರ್ಲಕ್ಷ್ಯ ಆರೋಪ ಕೇಳಿಬಂದಿದೆ. ಘಟನೆಯ ನಂತರ ಆಕ್ರೋಶಗೊಂಡ ಗ್ರಾಮಸ್ಥರು ಅಫಜಲಪುರ ಪಟ್ಟಣದ ಬಸವೇಶ್ವರ ವೃತ್ತದ ಬಳಿ ಕಲಬುರಗಿ–ವಿಜಯಪುರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಘಟನೆ ಅಫಜಲಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ರೈತನನ್ನು ಬಸಪ್ಪ ಮಹದೇವಪ್ಪ ಪೂಜಾರಿ (42) ಎಂದು ಗುರುತಿಸಲಾಗಿದೆ. ಅವರು ಪತ್ನಿ, ಇಬ್ಬರು ಪುತ್ರರು, ಒಬ್ಬ ಪುತ್ರಿ ಹಾಗೂ ಮೂವರು ಸಹೋದರರನ್ನು ಅಗಲಿದ್ದಾರೆ.

ಲಭ್ಯ ಮಾಹಿತಿಯ ಪ್ರಕಾರ, ಶುಕ್ರವಾರ ಬೆಳಿಗ್ಗೆ ಸುಮಾರು 10 ಗಂಟೆ ವೇಳೆಗೆ ಗ್ರಾಮದ ಲೈನ್‌ಮ್ಯಾನ್ ಗುಂಡುಜಿ ಚವ್ಹಾಣ ಅವರ ಸೂಚನೆಯ ಮೇರೆಗೆ ಬಸಪ್ಪ ಪೂಜಾರಿ ವಿದ್ಯುತ್ ಕಂಬ ಹತ್ತಿದ್ದರು ಎನ್ನಲಾಗಿದೆ. ಈ ವೇಳೆ ವಿದ್ಯುತ್ ಸರಬರಾಜನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತೇ ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸಲಾಗಿತ್ತೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಕಂಬ ಹತ್ತಿದ ಕೆಲವೇ ಕ್ಷಣಗಳಲ್ಲಿ ವಿದ್ಯುತ್ ತಂತಿ ತಗುಲಿ ಬಸಪ್ಪ ಪೂಜಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿದ್ದ ಸಾರ್ವಜನಿಕರು ಅವರನ್ನು ತಕ್ಷಣ ಅಫಜಲಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಿಂದ ಗ್ರಾಮದಲ್ಲಿ ಆಕ್ರೋಶದ ವಾತಾವರಣ ನಿರ್ಮಾಣವಾಗಿದ್ದು, ಲೈನ್‌ಮ್ಯಾನ್ ಕರ್ತವ್ಯಲೋಪ ಮತ್ತು ನಿರ್ಲಕ್ಷ್ಯವೇ ರೈತನ ಸಾವಿಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ರಸ್ತೆ ತಡೆದು ಪ್ರತಿಭಟನೆ ನಡೆಸಿದ ಅವರು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವಿದ್ಯುತ್ ಇಲಾಖೆಯ ನಿಯಮಾನುಸಾರ ಯಾವುದೇ ವ್ಯಕ್ತಿಯನ್ನು ವಿದ್ಯುತ್ ಕಂಬ ಹತ್ತಿಸುವ ಮುನ್ನ ವಿದ್ಯುತ್ ಸರಬರಾಜನ್ನು ಸಂಪೂರ್ಣ ಸ್ಥಗಿತಗೊಳಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆದರೆ ಈ ಪ್ರಕರಣದಲ್ಲಿ ಆ ನಿಯಮಗಳನ್ನು ಪಾಲಿಸಲಾಗಿಲ್ಲ ಎಂಬ ಅನುಮಾನ ವ್ಯಕ್ತವಾಗಿದೆ.

ಘಟನೆ ಕುರಿತು ಪೊಲೀಸರು ಹಾಗೂ ವಿದ್ಯುತ್ ಇಲಾಖೆಯ ಹಿರಿಯ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ನಿರ್ಲಕ್ಷ್ಯ ಸಾಬೀತಾದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿದುಬಂದಿದೆ. ಅಲ್ಲದೆ, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದರ ಜೊತೆಗೆ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದ್ದಾರೆ.

Tags

Afzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X