Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ಶಾಶ್ವತ ನೀರಾವರಿಗಾಗಿ ರೈತರು...

Afzalpur | ಶಾಶ್ವತ ನೀರಾವರಿಗಾಗಿ ರೈತರು ಪಕ್ಷಾತೀತವಾಗಿ ಹೋರಾಟ ನಡೆಸಬೇಕು : ಶ್ರೀಮಂತ ಬಿರಾದಾರ

ವಾರ್ತಾಭಾರತಿವಾರ್ತಾಭಾರತಿ2 Aug 2026 6:26 PM IST
share
Afzalpur | ಶಾಶ್ವತ ನೀರಾವರಿಗಾಗಿ ರೈತರು ಪಕ್ಷಾತೀತವಾಗಿ ಹೋರಾಟ ನಡೆಸಬೇಕು : ಶ್ರೀಮಂತ ಬಿರಾದಾರ

ಅಫಜಲಪುರ: ತಾಲೂಕಿನ ಸಮಗ್ರ ಹಾಗೂ ಶಾಶ್ವತ ನೀರಾವರಿ ವ್ಯವಸ್ಥೆ ಜಾರಿಗೊಳಿಸಲು ರೈತರು ಪಕ್ಷಾತೀತವಾಗಿ ಸಂಘಟಿತರಾಗಿ ನಿರಂತರ ಹೋರಾಟ ನಡೆಸಬೇಕಾಗಿದೆ ಎಂದು ರೈತ ಮುಖಂಡ ಶ್ರೀಮಂತ ಬಿರಾದಾರ ಹೇಳಿದರು.

ಪಟ್ಟಣದ ಅಳ್ಳಗಿ ಕ್ರಾಸ್‌ನಲ್ಲಿರುವ ಸ್ಪೂರ್ತಿ ಕಾಲೇಜಿನಲ್ಲಿ ಅಫಜಲಪುರ ತಾಲೂಕು ಸಮಗ್ರ ಶಾಶ್ವತ ನೀರಾವರಿ ಹೋರಾಟ ಸಮಿತಿ (ಕರ್ನಾಟಕ ಪ್ರಾಂತ ರೈತ ಸಂಘ ಸಂಯೋಜಿತ) ವತಿಯಿಂದ ಆಯೋಜಿಸಿದ್ದ ರೈತರ ಸಭೆಯಲ್ಲಿ ಅವರು ಮಾತನಾಡಿದರು.

ಅಫಜಲಪುರ ತಾಲೂಕು ಪ್ರತಿವರ್ಷ ಬರಗಾಲದ ಸಂಕಷ್ಟ ಎದುರಿಸುತ್ತಿದೆ. ಸುಮಾರು 30 ವರ್ಷಗಳ ಹಿಂದೆ ಆರಂಭವಾದ ಭೀಮಾ ಏತ ನೀರಾವರಿ ಯೋಜನೆಯ ನೀರು ಇನ್ನೂ ರೈತರ ಜಮೀನುಗಳಿಗೆ ತಲುಪಿಲ್ಲ. ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಸಮರ್ಪಕ ಪರಿಹಾರವೂ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಹಾರಾಷ್ಟ್ರದ ಉಜ್ಜನಿ ಜಲಾಶಯದಿಂದ ಬಚಾವತ್ ತೀರ್ಪಿನ ಅನ್ವಯ ಭೀಮಾ ನದಿಗೆ 15 ಟಿಎಂಸಿ ನೀರನ್ನು ಹರಿಸುವಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರೈತ ಮುಖಂಡ ಗುರು ಚಾಂದಕವಟೆ ಮಾತನಾಡಿ, ತಾಲೂಕಿನ ಕೆರೆಗಳನ್ನು ಹೂಳೆತ್ತಿ ನೀರು ಸಂಗ್ರಹಿಸುವ ವ್ಯವಸ್ಥೆ ಕಲ್ಪಿಸಬೇಕು. ಶಾಶ್ವತ ನೀರಾವರಿಯೇ ರೈತರ ಬದುಕಿಗೆ ಶಾಶ್ವತ ಪರಿಹಾರವಾಗಿದ್ದು, ಈ ಕುರಿತು ಜನಾಂದೋಲನ ರೂಪಿಸುವ ಅಗತ್ಯವಿದೆ ಎಂದರು.

ನಾಮದೇವ ಕಡಕೋಳ ಹಾಗೂ ಭೀಮರಾವ ಗೌರ ಮಾತನಾಡಿ, ರೈತರ ಸಮಸ್ಯೆಗಳ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ. ತಾಲೂಕಿಗೆ ಸಮಗ್ರ ನೀರಾವರಿ ಯೋಜನೆ ಜಾರಿಗೊಳಿಸಲು ರೈತರು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕಿದೆ ಎಂದು ತಿಳಿಸಿದರು.

ಶಾಂತು ಅಂಜುಟಗಿ ಮಾತನಾಡಿ, ಭೀಮಾ ಏತ ನೀರಾವರಿ ಯೋಜನೆ, ಬಚಾವತ್ ತೀರ್ಪಿನನ್ವಯ ನೀರಿನ ಹಂಚಿಕೆ ಹಾಗೂ ರೈತರ ನ್ಯಾಯಸಮ್ಮತ ಬೇಡಿಕೆಗಳು ಈಡೇರುವವರೆಗೆ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು ಹೇಳಿದರು.

ಸಭೆಯಲ್ಲಿ ಮುಂದಿನ ಹೋರಾಟದ ರೂಪುರೇಷೆಗಳ ಕುರಿತು ಚರ್ಚಿಸಿ, ತಾಲೂಕಿನಲ್ಲಿ ಸಮಗ್ರ ಹಾಗೂ ಶಾಶ್ವತ ನೀರಾವರಿಗಾಗಿ ಹೋರಾಟ ಸಮಿತಿಯನ್ನು ಮತ್ತಷ್ಟು ಬಲಪಡಿಸುವ ನಿರ್ಧಾರ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಅಫಜಲಪುರ ತಾಲೂಕು ಶಾಶ್ವತ ನೀರಾವರಿ ಹೋರಾಟ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಭೀಮರಾವ ಗೌರ, ಅಧ್ಯಕ್ಷರಾಗಿ ರಮೇಶ ಪಾಟೀಲ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮಂತ ಬಿರಾದಾರ, ಖಜಾಂಚಿಯಾಗಿ ಮುರುಗೇಂದ್ರ ಮಸಳಿ ಅವರನ್ನು ಆಯ್ಕೆ ಮಾಡಲಾಗಿದ್ದು, 51 ಸದಸ್ಯರ ಸಮಿತಿಯನ್ನೂ ರಚಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ನೂರ್ ಅಹ್ಮದ್ ಭಾಗವಾನ್ ವಹಿಸಿದ್ದರು. ಶಿವಶರಣಪ್ಪ ಬುಜರಿ ಕಾರ್ಯಕ್ರಮ ಉದ್ಘಾಟಿಸಿದರು.

ಸಭೆಯಲ್ಲಿ ಬಸವರಾಜ ಘಾಣೂರ, ರಮೇಶ ಶೆಟ್ಟಿ, ನೂರ್ ಅಹ್ಮದ್ ಭಾಗವಾನ್, ನಾಮದೇವ ಕಡಕೋಳ, ಚಂದು ಕರಜಗಿ, ಲತೀಫ್ ಪಟೇಲ್, ಬಸಯ್ಯ ಆಕಾಶಮಠ, ಬಸವರಾಜ ಶಿರ್, ಆನಂದ ಪಾಟೀಲ, ಅಣ್ಣಾರಾವ ಪಾಟೀಲ, ಯಶವಂತ ಪಟ್ಟೇದಾರ, ಮಹಿಬೂಬ್ ನದಾಫ್, ಬಸವರಾಜ ವಾಳಿ, ಗುರುದತ್ತ ಪೂಜಾರಿ, ಕೆ.ಜಿ. ಪೂಜಾರಿ, ಚಂದು ಬನ್ನೆಟ್ಟಿ, ಶಿವಪುತ್ರಪ್ಪ ಬುರಲಿ, ದೌಲತ್ ಗೌಡ ಪಾಟೀಲ, ಶಾಂತಮಲ್ಲಪ್ಪ ಹೊನುಂಗರ, ಶಿವಾನಂದ ಹೊಟ್ಕರ್ ಸೇರಿದಂತೆ ರೈತ ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.

Tags

farmersAfzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X