Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ವಿದ್ಯುತ್ ಕಡಿತಕ್ಕೆ ರೈತ...

Afzalpur | ವಿದ್ಯುತ್ ಕಡಿತಕ್ಕೆ ರೈತ ಸಂಘಗಳ ತೀವ್ರ ವಿರೋಧ

ವಾರ್ತಾಭಾರತಿವಾರ್ತಾಭಾರತಿ12 April 2026 6:26 PM IST
share
Afzalpur | ವಿದ್ಯುತ್ ಕಡಿತಕ್ಕೆ ರೈತ ಸಂಘಗಳ ತೀವ್ರ ವಿರೋಧ

ಅಫಜಲಪುರ: ಮಾ.26ರಂದು ಕಾರ್ಯಪಾಲಕ ಅಭಿಯಂತರರು ಭೀಮಾ ಏತನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಹೊರಡಿಸಿದ ವಿದ್ಯುತ್ ಕಡಿತ ಆದೇಶಕ್ಕೆ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಸ್ವಾಭಿಮಾನಿ ಕಬ್ಬು ಬೆಳೆಗಾರರ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದೆ ಎಂದು ರೈತ ಹೋರಾಟಗಾರ ಶ್ರೀಮಂತ ಬಿರಾದಾರ ತಿಳಿಸಿದ್ದಾರೆ.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಸುಮಾರು 25 ವರ್ಷಗಳಿಂದ ಭೀಮಾ ಏತನೀರಾವರಿ ಯೋಜನೆ ಜಾರಿಯಲ್ಲಿದ್ದರೂ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಯದೇ ರೈತರು ನಿರಂತರವಾಗಿ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದರು.

ಯೋಜನೆಗೆ ಬಂದ ಅನುದಾನ ಗುತ್ತಿಗೆದಾರರ ಪಾಲಾಗಿದ್ದು, ವೈಜ್ಞಾನಿಕ ರೀತಿಯಲ್ಲಿ ನೀರು ಸಂಗ್ರಹಿಸುವ ಕಾರ್ಯ ನಡೆಯುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದರು.

ಮಳೆಗಾಲದಲ್ಲಿ 3.16 ಟಿಎಂಸಿ ಮಟ್ಟದ ನೀರು ಸಂಗ್ರಹಿಸಬೇಕಾದರೂ ಆ ಪ್ರಮಾಣದಲ್ಲಿ ಸಂಗ್ರಹವಾಗುತ್ತಿಲ್ಲ. ನದಿಯಲ್ಲಿ ನೀರು ಹರಿದು ಹೋದ ಬಳಿಕ ಸಂಗ್ರಹಿಸಲು ಪ್ರಯತ್ನಿಸುವುದರಿಂದ ಗರಿಷ್ಠ ಪ್ರಮಾಣದ ನೀರನ್ನು ತಡೆಹಿಡಿಯಲು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಟೀಕಿಸಿದರು.

ಹಿನ್ನೀರಿನ ಆಧಾರದಲ್ಲಿ ರೈತರು ಬೆಳೆದ ಬೆಳೆಗಳಿಗೆ ನೀರು ಬಿಡಬೇಕಾದ ಸಂದರ್ಭದಲ್ಲಿ ವಿದ್ಯುತ್ ಕಡಿತ ಮಾಡುವುದು ಪ್ರತಿವರ್ಷವೂ ನಡೆಯುತ್ತಿರುವ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಕ್ರಮವನ್ನು ತಕ್ಷಣವೇ ನಿಲ್ಲಿಸಬೇಕು. ಇಲ್ಲವಾದರೆ ರೈತ ಸಂಘಟನೆಗಳು ಬೃಹತ್ ಪ್ರಮಾಣದ ಪ್ರತಿಭಟನೆ ನಡೆಸಲು ಸಜ್ಜಾಗಿವೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯದರ್ಶಿ ಗುರು ಚಾಂದಕವಟೆ, ಸ್ವಾಭಿಮಾನಿ ಕಬ್ಬು ಬೆಳೆಗಾರರ ಸಂಘದ ಸಂಚಾಲಕ ಶಾಂತಪ್ಪ ಅಂಜುಟಗಿ, ರಮೇಶ ಪಾಟೀಲ, ಭೀಮರಾವ ಗೌರ, ನೂರ ಅಹ್ಮದ ಭಾಗವಾನ, ಶಿವ ಪ್ರಸಾದ್ ನೂಲಾ, ಚಂದ್ರಶೇಖರ ಕರಜಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags

Afzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X