Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ಹಿರೇಅಳ್ಳಗಿಯಲ್ಲಿ ಶ್ರೀ...

Afzalpur | ಹಿರೇಅಳ್ಳಗಿಯಲ್ಲಿ ಶ್ರೀ ಶಾಂತಲಿಂಗೇಶ್ವರ ಹಿರೇಮಠದ ಧಾರ್ಮಿಕ ಮಹೋತ್ಸವ ವಿಜೃಂಭಣೆ

ವಾರ್ತಾಭಾರತಿವಾರ್ತಾಭಾರತಿ18 Sept 2026 8:21 PM IST
share
Afzalpur | ಹಿರೇಅಳ್ಳಗಿಯಲ್ಲಿ ಶ್ರೀ ಶಾಂತಲಿಂಗೇಶ್ವರ ಹಿರೇಮಠದ ಧಾರ್ಮಿಕ ಮಹೋತ್ಸವ ವಿಜೃಂಭಣೆ

ಅಫಜಲಪುರ : ತಾಲೂಕಿನ ಹಿರೇಅಳ್ಳಗಿ ಗ್ರಾಮದ ಶ್ರೀ ಶಾಂತಲಿಂಗೇಶ್ವರ ಹಿರೇಮಠದಲ್ಲಿ ನಡೆಯುತ್ತಿರುವ ಧಾರ್ಮಿಕ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಜರುಗಿದವು.

ಮಹೋತ್ಸವದ ಅಂಗವಾಗಿ ಶ್ರೀಮದ್ ಗಿರಿರಾಜ ಸೂರ್ಯಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 1008 ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರ ಶ್ರೀಶೈಲ ಮಹಾಪೀಠದ ಅಡ್ಡಪಲ್ಲಕ್ಕಿ ಮಹೋತ್ಸವವನ್ನು ಶ್ರೀ ಷ.ಬ್ರ. ಶಾಂತಲಿಂಗ ಶಿವಾಚಾರ್ಯರ ನೇತೃತ್ವದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿಸಲಾಯಿತು.

ಇದೇ ಸಂದರ್ಭದಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿದ್ದ ಸೊನ್ನಲಾಪುರದ ಶ್ರೀ ಸಿದ್ಧರಾಮೇಶ್ವರ ಮಹಾಪುರಾಣದ ಮಹಾಮಂಗಲ ಕಾರ್ಯಕ್ರಮವೂ ಅಚ್ಚುಕಟ್ಟಾಗಿ ನಡೆಯಿತು. ರಾತ್ರಿ ಶ್ರೀ ಷ.ಬ್ರ. ಶಾಂತಲಿಂಗ ಶಿವಾಚಾರ್ಯರಿಗೆ ಭಕ್ತರಿಂದ ನಾಣ್ಯ ತುಲಾಭಾರ ಹಾಗೂ ಕಲ್ಲುಸಕ್ಕರೆ ತುಲಾಭಾರೋತ್ಸವ ನೆರವೇರಿಸಲಾಯಿತು.

ಮಂಗಳವಾರ ವಿವಿಧ ಮಠಾಧೀಶರು ಹಾಗೂ ಪೂಜ್ಯರ ದಿವ್ಯ ಸಾನ್ನಿಧ್ಯದಲ್ಲಿ ಬೃಹತ್ ಧರ್ಮಸಭೆ ನಡೆಯಿತು. ಆಶೀರ್ವಚನ ನೀಡಿದ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು, ಭಕ್ತಿ, ಸೇವೆ ಹಾಗೂ ಸತ್ಸಂಗದ ಮೂಲಕವೇ ದೇವರ ಅನುಗ್ರಹವನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಧಾರ್ಮಿಕ ಮಹೋತ್ಸವದಲ್ಲಿ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು ಪೂಜೆ, ಪ್ರವಚನ, ಧರ್ಮಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಆಶೀರ್ವಾದ ಪಡೆದರು.

ಕಾರ್ಯಕ್ರಮದಲ್ಲಿ, ಅಂಕಲಗಾ - ಅತನೂರಿನ ಶ್ರೀ ಗುರುಬಸವ ಶಿವಾಚಾರ್ಯರು, ಜೈನಾಪುರದ ರೇಣುಕ ಶಿವಾಚಾರ್ಯರು, ಮಲ್ಲಬಾದ ಗ್ರಾಮದ ರೇವಣಸಿದ್ಧ ಶಿವಾಚಾರ್ಯರು, ಮರತುರ ಗ್ರಾಮದ ಶ್ರೀಶೈಲ್ ಮಹಾಸ್ವಾಮಿಜಿ, ಚಿಂಚೋಳಿಯ ಗದ್ದುಗೆಶ್ವರ ಮಲ್ಲಿಕಾರ್ಜುನ ಶಿವಾಚಾರ್ಯರು, ಮುಗಳಿ ಗ್ರಾಮದ ಭೋಗೆಶ್ವರ ಶಿವಾಚಾರ್ಯರು, ಗೌರ ಬಿ ಯ ಕೈಲಾಸಲಿಂಗ ಶಿವಾಚಾರ್ಯರು, ಸೇರಿದಂತೆ ನಾಡಿನ ವಿವಿಧ ಮಠಾಧೀಶರು, ಹರಗುರುಚರ ಮೂರ್ತಿಗಳು ಹಾಗೂ ಮುಖಂಡರಾದ ಸಾಹೇಬ್ ಗೌಡ ಪಾಟೀಲ್, ಅರವಿಂದ್ ಹಾಳಕಿ, ನಾನಗೌಡ ಪಾಟೀಲ್, ಭೀಮರಾಯ ಬುಜರಿ, ಶಂಕರಗೌಡ ಪಾಟೀಲ್, ಕಲ್ಲಪ್ಪ ಚಿಕ್ಕಳಗಿ, ರಾಜಸಾಹುಕಾರ ಜಾಮಗೊಂಡ, ಕಲ್ಲಪ್ಪ ಬುಜರಿ, ಶಿವಶರಣಪ್ಪ ಬುಜರಿ, ದತ್ತು ಸಾಲೋಟಗಿ, ಶೇಕಣ್ಣ ತೆಗ್ಗೆಳ್ಳಿ, ರಮೇಶ್ ಸುರಗೊಂಡ, ಶರಣಬಸು ಹರಳಯ್ಯ ಮಹಾಂತಪ್ಪ ಕಂಬಾರ,ಪರಮಾನಂದ ಖೇಳಗಿ ಹಾಗೂ ಬಿಳಿವಸ್ತ್ರದಾರಿ ಹಣಮಂತ ಸೂರಗೊಂಡ ಸೇರಿದಂತೆ ಗ್ರಾಮದ ಅಪಾರ ಸಂಖ್ಯೆಯ ಭಕ್ತರು ಉಪಸ್ಥಿತರಿದ್ದರು.

Tags

Afzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X