Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ಗ್ಯಾರಂಟಿ ಯೋಜನೆಗಳು...

Afzalpur | ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ: ಅರುಣಕುಮಾರ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ31 Jan 2026 6:44 PM IST
share
Afzalpur | ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ: ಅರುಣಕುಮಾರ್ ಪಾಟೀಲ್
ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಅಫಜಲಪುರ: ಚುನಾವಣೆಗೆ ಮುನ್ನ ನೀಡಿದ ಭರವಸೆಗಳನ್ನು ಯಶಸ್ವಿಯಾಗಿ ಈಡೇರಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಕೆಕೆಆರ್‌ಟಿಸಿ ಅಧ್ಯಕ್ಷ ಅರುಣಕುಮಾರ್ ಎಂ.ವೈ.ಪಾಟೀಲ್ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ಹೊರಗುಳಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಲಾಭ ತಲುಪಿಸುವಂತೆ ಅಧಿಕಾರಿಗಳು ಮತ್ತು ಸದಸ್ಯರು ಶ್ರಮಿಸಬೇಕು ಎಂದರು.

ಅಫಜಲಪುರದಿಂದ ಬೆಂಗಳೂರಿಗೆ ಹೆಚ್ಚಿನ ಜನ ಸಂಚಾರವಿರುವ ಹಿನ್ನೆಲೆಯಲ್ಲಿ ಅಫಜಲಪುರ ಬಸ್ ಘಟಕದಿಂದ ಶೀಘ್ರದಲ್ಲೇ ಎರಡು ಸ್ಲೀಪರ್ ಕೋಚ್ ಬಸ್‌ಗಳನ್ನು ಪ್ರಾರಂಭಿಸಲಾಗುವುದು ಎಂದ ಅವರು, ಹೊಸ ಪ್ರಜಾಸೌಧದಿಂದ ದೂರವಿರುವುದರಿಂದ ಎಲ್ಲ ಬಸ್‌ಗಳು ಅಲ್ಲಿಗೆ ನಿಲ್ಲಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಪ್ರಕಾಶ ಜಮಾದಾರ ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರ ಬದುಕಿಗೆ ಆರ್ಥಿಕ ಶಕ್ತಿ ದೊರೆತಿದ್ದು, ತಲಾ ಆದಾಯದಲ್ಲಿ ಸ್ಪಷ್ಟವಾದ ಹೆಚ್ಚಳವಾಗಿದೆ ಎಂದರು.

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸದಸ್ಯರು ಹಾಗೂ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ತಾಲ್ಲೂಕಿನಲ್ಲಿ ಒಟ್ಟು 44,759 ಪಡಿತರ ಕಾರ್ಡ್‌ಗಳಿದ್ದು, ಪ್ರತಿ ತಿಂಗಳು ಸುಮಾರು 18,645.85 ಮೆಟ್ರಿಕ್ ಟನ್ ಆಹಾರ ಧಾನ್ಯ ವಿತರಿಸಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ 51,727 ಫಲಾನುಭವಿಗಳಿಗೆ ಪ್ರತಿ ತಿಂಗಳು ಒಟ್ಟು 10,34,54,000 ರೂ. ಜಮೆಯಾಗುತ್ತಿದೆ. ಶಕ್ತಿ ಯೋಜನೆಯಡಿ 1,45,07,668 ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದು, 59,10,25,695 ರೂ. ಮೊತ್ತದ ಲಾಭ ದೊರೆತಿದೆ. ಗೃಹಜ್ಯೋತಿ ಯೋಜನೆಯಡಿ 42,998 ಫಲಾನುಭವಿಗಳಿಗೆ 49,29,18,174 ರೂ. ಲಾಭ ಸಿಕ್ಕಿದೆ. ಯುವನಿಧಿ ಯೋಜನೆಯಡಿ 2,829 ಫಲಾನುಭವಿಗಳಿಗೆ ಒಟ್ಟು 5,31,88,500 ರೂ. ಹಣ ಜಮೆಯಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ತಾಲ್ಲೂಕು ಪಂಚಾಯತ್ ಇಒ ವೀರಣ್ಣ ಕೌಲಗಿ, ಜೆಸ್ಕಾಂ ಎಇಇ ನಾಗರಾಜ ಕೆ., ಸಿಡಿಪಿಒ ಪ್ರವೀಣ್ ಹೇರೂರ, ಆಹಾರ ಇಲಾಖೆ ನಿರ್ದೇಶಕಿ ಸಾವಿತ್ರಿ, ಡಿಪೋ ಮ್ಯಾನೇಜರ್ ಅಮೀನಪ್ಪ ಭೋವಿ, ಎಇಇ ಮೈನುದ್ದೀನ್, ವಿಠ್ಠಲ್ ಸಾಹುಕಾರ ಜಾಮಗೊಂಡ, ಗಾಲಿಬ್ ಮುಜಾವರ್, ಅಂಬರೀಶ ಬುರಲಿ, ಪ್ರವೀಣ್ ಕಲ್ಲೂರ, ದತ್ತು ಘಾಣೂರ, ಅನುಸುಯಾ ಸುಲೇಕರ, ಬಿಸ್ಮಿಲ್ಲಾ ಖೇಡ, ಚಂದ್ರಕಾಂತ ತೆಲ್ಕರ ಹಾಗೂ ಇತರರು ಉಪಸ್ಥಿತರಿದ್ದರು.

Tags

guarantee schemeAfzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X