Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅಫಜಲಪುರ | ಮಾತೋಳಿ ಗ್ರಾಮದಲ್ಲಿ ಹನುಮಾನ...

ಅಫಜಲಪುರ | ಮಾತೋಳಿ ಗ್ರಾಮದಲ್ಲಿ ಹನುಮಾನ ಜಾತ್ರಾ ಮಹೋತ್ಸವ

ವಾರ್ತಾಭಾರತಿವಾರ್ತಾಭಾರತಿ4 April 2026 10:15 PM IST
share
ಅಫಜಲಪುರ | ಮಾತೋಳಿ ಗ್ರಾಮದಲ್ಲಿ ಹನುಮಾನ ಜಾತ್ರಾ ಮಹೋತ್ಸವ

ಅಫಜಲಪುರ: ತಾಲೂಕಿನ ಮಾತೋಳಿ ಗ್ರಾಮದಲ್ಲಿ ಗ್ರಾಮದೇವತೆ ಶ್ರೀ ಹನುಮಾನ ಜಾತ್ರಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು.

ಮಾ.24ರಿಂದ ಎ.4ರವರೆಗೆ ನಡೆದ ಈ ಜಾತ್ರಾ ಮಹೋತ್ಸವದ ಅಂಗವಾಗಿ ಮುಗಳಖೋಡ ಯಲ್ಲಾಲಿಂಗ ಮಹಾರಾಜರ ಮಹಾಪುರಾಣವನ್ನು ಪ್ರತಿದಿನ ಪ್ರವಚನಕಾರರಾದ ಶಿವಬಸಯ್ಯ ಶಾಸ್ತ್ರಿಗಳು ಕಳ್ಳಿಮಠ ಅವರು ನಡೆಸಿಕೊಟ್ಟರು. ಈ ಕಾರ್ಯಕ್ರಮಕ್ಕೆ ಭಾಗಣ್ಣ ಗವಾಯಿ ಅವರಳ್ಳಿ ಹಾಗೂ ಈರಣ್ಣ ಅತನೂರ ಸಂಗೀತ ಸಹಕಾರ ನೀಡಿದರು.

ಜಾತ್ರೆಯ ಪ್ರಮುಖ ದಿನಗಳಾದ ಏಪ್ರಿಲ್ 2ರಂದು ಹನುಮಾನ ಮೂರ್ತಿಗೆ ರುದ್ರಾಭಿಷೇಕ, ನಂದಿಕೋಲು ಮೆರವಣಿಗೆ ಹಾಗೂ ಸಂಜೆ ತೊಟ್ಟಿಲ ಕಾರ್ಯಕ್ರಮ ನೆರವೇರಿತು. ಏಪ್ರಿಲ್ 3ರಂದು ಮದ್ದು ಸುಡುವ ಕಾರ್ಯಕ್ರಮ ಮತ್ತು ಮಹಾರಥೋತ್ಸವ ಜರುಗಿದ್ದು, ಅಕ್ಕಪಕ್ಕದ ಗ್ರಾಮಗಳಿಂದ ಸಾವಿರಾರು ಭಕ್ತರು ಭಾಗವಹಿಸಿ ಬಜರಂಗಬಲಿಯ ದರ್ಶನ ಪಡೆದು ಭಕ್ತಿ ಭಾವದಲ್ಲಿ ತೇಲಿದರು. ರಥೋತ್ಸವದ ಬಳಿಕ ಪುರಾಣಮಂಗಲ ಮತ್ತು ಧರ್ಮಸಭೆ ನಡೆಯಿತು.

ಏಪ್ರಿಲ್ 4ರಂದು ಈ ಭಾಗದ ಪ್ರಸಿದ್ಧ ಜಂಗಿ ಪೈಲ್ವಾನ್‌ರ ಕುಸ್ತಿ ಪಂದ್ಯ ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಜಾತ್ರಾ ಮಹೋತ್ಸವಕ್ಕೆ ವಿವಿಧ ಮಠಗಳ ಪೂಜ್ಯರು ಹಾಗೂ ಧಾರ್ಮಿಕ ಮುಖಂಡರು ದಿವ್ಯ ಸಾನಿಧ್ಯ ವಹಿಸಿದ್ದರು. ರಥೋತ್ಸವವನ್ನು ನೆರವೇರಿಸಿದ ಮಹಾಂತ ಮಠದ ವೀರಮಹಂತ ಶಿವಾಚಾರ್ಯರು ಭಕ್ತರಿಗೆ ಆಶೀರ್ವಚನ ನೀಡಿದರು.

ಈ ವೇಳೆ ಸುಮಂಗಲೆಯರು ಪೂರ್ಣಕುಂಭ ಕಳಸಗಳೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿದ್ದು, ಅನೇಕ ಪುರವಂತರು ತಮ್ಮ ಕಲೆಗಳನ್ನು ಪ್ರದರ್ಶಿಸಿದರು. ಮದ್ದು ಸುಡುವ ಕಾರ್ಯಕ್ರಮವೂ ಗಮನಸೆಳೆದಿತು.

ಪ್ರತಿವರ್ಷದಂತೆ ಹನುಮಾನ ಜಯಂತಿ ಅಂಗವಾಗಿ ಆರಂಭವಾಗುವ ಈ ಜಾತ್ರೆ, ಇಂದು ರಾತ್ರಿ ನಡೆಯುವ ಮನೋರಂಜನಾ ಕಾರ್ಯಕ್ರಮಗಳೊಂದಿಗೆ ಭವ್ಯವಾಗಿ ಮುಕ್ತಾಯಗೊಳ್ಳಲಿದೆ ಎಂದು ಜಾತ್ರಾ ಸಮಿತಿ ಹಾಗೂ ಗ್ರಾಮಸ್ಥರು ತಿಳಿಸಿದ್ದಾರೆ.

Tags

Afzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X