Afzalpur | ಕನ್ನಡ ಮಾಧ್ಯಮ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಉಪಾಧ್ಯಕ್ಷರಾಗಿ ಎನ್.ಆರ್.ಸಾಸನೂರ ಆಯ್ಕೆ

ಅಫಜಲಪುರ: ಕಲ್ಯಾಣ ಕರ್ನಾಟಕ ವಿಭಾಗದ ಏಳು ಜಿಲ್ಲೆಗಳ ಕನ್ನಡ ಮಾಧ್ಯಮ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ನೂತನ ಉಪಾಧ್ಯಕ್ಷರಾಗಿ ಎನ್.ಆರ್. ಸಾಸನೂರ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ತಾಂಡವ ಕೃಷ್ಣ ಹಾಗೂ ಅಧ್ಯಕ್ಷ ಚಾಂದ್ ಬಾಷ ಅವರು ನೂತನ ಉಪಾಧ್ಯಕ್ಷ ಎನ್.ಆರ್. ಸಾಸನೂರ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿದರು.
ಈ ಆಯ್ಕೆಯಿಂದ ಕಲ್ಯಾಣ ಕರ್ನಾಟಕ ಭಾಗದ ಕನ್ನಡ ಮಾಧ್ಯಮ ಶಾಲೆಗಳ ಅಭಿವೃದ್ಧಿ, ಆಡಳಿತ ವ್ಯವಸ್ಥೆಯ ಬಲವರ್ಧನೆ ಹಾಗೂ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಮತ್ತಷ್ಟು ಪರಿಣಾಮಕಾರಿ ಕಾರ್ಯಗಳು ನಡೆಯಲಿವೆ ಎಂದು ಮುಖಂಡರು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ಶಾಲಾ ಆಡಳಿತ ಮಂಡಳಿಗಳ ಸದಸ್ಯರು ಹಾಗೂ ಶಿಕ್ಷಣಾಭಿಮಾನಿಗಳು ನೂತನ ಉಪಾಧ್ಯಕ್ಷರಿಗೆ ಶುಭಾಶಯಗಳನ್ನು ಸಲ್ಲಿಸಿದರು.
Next Story




