Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅಫಜಲಪುರ | ರೈತನ ಮೇಲಿನ ಹಲ್ಲೆ...

ಅಫಜಲಪುರ | ರೈತನ ಮೇಲಿನ ಹಲ್ಲೆ ಪ್ರಕರಣಕ್ಕೆ ಎಫ್‌ಐಆರ್ ದಾಖಲಿಸಿ : ರೈತ ಸಂಘಗಳ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ10 Jun 2026 10:53 PM IST
share
ಅಫಜಲಪುರ |  ರೈತನ ಮೇಲಿನ ಹಲ್ಲೆ ಪ್ರಕರಣಕ್ಕೆ ಎಫ್‌ಐಆರ್ ದಾಖಲಿಸಿ : ರೈತ ಸಂಘಗಳ ಆಗ್ರಹ
ಜೂ.15ರಂದು ರಸ್ತೆ ತಡೆ ಹೋರಾಟದ ಎಚ್ಚರಿಕೆ

ಅಫಜಲಪುರ: ತಾಲೂಕಿನ ಗೊಲ್ಲಾಳೇಶ್ವರ ಆಗ್ರೋ ಸಂಸ್ಥೆಯ ಮಾಲೀಕರು ರೈತನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣ ಎಫ್‌ಐಆರ್ ದಾಖಲಿಸಿ, ಸಂಸ್ಥೆಯ ಪರವಾನಗಿಯನ್ನು ರದ್ದುಪಡಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೈತಪರ ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

ಈ ಕುರಿತು ತಹಸೀಲ್ದಾರ್, ಕೃಷಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಕಲಬುರಗಿ ಜಿಲ್ಲಾಧ್ಯಕ್ಷ ಮಹಾಂತೇಶ್ ಜಮಾದಾರ್ ಮಾತನಾಡಿ, ಜೂನ್ 4ರಂದು ಅಫಜಲಪುರ ತಾಲೂಕಿನ ರೈತರೊಬ್ಬರು ಗೊಲ್ಲಾಳೇಶ್ವರ ಆಗ್ರೋ ಕೇಂದ್ರಕ್ಕೆ ರಸಗೊಬ್ಬರ ಖರೀದಿಸಲು ತೆರಳಿದ್ದ ವೇಳೆ ಯೂರಿಯಾ ಗೊಬ್ಬರದೊಂದಿಗೆ ಇತರೆ ಉತ್ಪನ್ನಗಳನ್ನು ಕಡ್ಡಾಯವಾಗಿ ಖರೀದಿಸುವಂತೆ ಒತ್ತಾಯಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ ಎಂದು ಹೇಳಿದರು.

ರೈತರು ಇದನ್ನು ವಿರೋಧಿಸಿದ ಸಂದರ್ಭದಲ್ಲಿ ಸಂಸ್ಥೆಯ ಮಾಲೀಕರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ಕುರಿತು ವಿವಿಧ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ಘಟನೆ ನಡೆದ ಆರು ದಿನಗಳಾದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಎಫ್‌ಐಆರ್ ದಾಖಲಿಸಿಲ್ಲ ಹಾಗೂ ಸಂಸ್ಥೆಯ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತ ಸಮುದಾಯದಲ್ಲಿ ಅನುಮಾನಗಳು ಮೂಡಿದ್ದು, ಇದು ರೈತರ ಆತ್ಮಗೌರವಕ್ಕೆ ಧಕ್ಕೆ ಉಂಟುಮಾಡಿದಂತಾಗಿದೆ ಎಂದು ಸಂಘಟನೆಗಳ ಮುಖಂಡರು ಆರೋಪಿಸಿದರು. ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಬೇಡಿಕೆಗಳನ್ನು ನಿರ್ಲಕ್ಷಿಸಿದಲ್ಲಿ ಜೂನ್ 15ರಂದು ಅಫಜಲಪುರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ವಿವಿಧ ರೈತ, ಕನ್ನಡಪರ ಹಾಗೂ ಸಾಮಾಜಿಕ ಸಂಘಟನೆಗಳ ಸಹಭಾಗಿತ್ವದಲ್ಲಿ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಉದ್ದೇಶಿತ ಪ್ರತಿಭಟನೆಗೆ ಪೊಲೀಸ್ ಇಲಾಖೆ ಹಾಗೂ ತಾಲೂಕು ಆಡಳಿತ ಅಗತ್ಯ ಬಂದೋಬಸ್ತ್ ಮತ್ತು ಅನುಮತಿ ಕಲ್ಪಿಸಬೇಕು ಎಂದು ಸಂಘಟನೆಗಳ ಮುಖಂಡರು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ ನಾಯ್ಕೋಡಿ, ಕರವೇ ತಾಲೂಕು ಅಧ್ಯಕ್ಷ ಶ್ರೀಕಾಂತ ದೇವಣಜಿ, ಕರ್ನಾಟಕ ಜನಸೈನ್ಯ ತಾಲೂಕು ಅಧ್ಯಕ್ಷ ಉಮೇಶ್ ಅಂದೋಡ್ಗಿ, ವಿಜಯ ಸೇನೆ ತಾಲೂಕು ಅಧ್ಯಕ್ಷ ಸಿದ್ದು ಸುಲ್ತಾನಪುರ, ಸಾಮಾಜಿಕ ಕಾರ್ಯಕರ್ತರ ವೇದಿಕೆ ತಾಲೂಕು ಅಧ್ಯಕ್ಷ ಆರ್.ಡಿ. ಪೂಜಾರಿ, ಜೈ ಕರ್ನಾಟಕ ತಾಲೂಕು ಉಪಾಧ್ಯಕ್ಷ ಮುತ್ತು ಕುರಿಮನಿ, ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಶ್ರೀಶೈಲಗೌಡ, ಕರವೇ ಕರ್ಜಿಗಿ ವಲಯದ ಅಧ್ಯಕ್ಷ ಸೋಮು ನಾಯ್ಕೋಡಿ, ರೈತ ಸಂಘದ ಚಿಂಚೋಳಿ ಗ್ರಾಮ ಘಟಕದ ಅಧ್ಯಕ್ಷ ಪ್ರಶಾಂತ ರಾಜಗೋಳ, ತಳವಾರ ಸಮಾಜದ ತಾಲೂಕು ಅಧ್ಯಕ್ಷ ಮಾಂತಗೌಡ ತಳವಾರ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.

Tags

Afzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X