ಅಫಜಲಪುರ| ಅಧ್ಯಯನ ನೌಕರಿಗಾಗಿ ಅಲ್ಲ, ಜ್ಞಾನ ಸಂಪಾದನೆಗಾಗಿ ಮಾಡಿ : ಬಡದಾಳ ಶ್ರೀ

ಕಲಬುರಗಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ಸಂಸ್ಕಾರ ನೀಡುವಲ್ಲಿ ಶಿಕ್ಷಣ ಸಂಸ್ಥೆಗಳು ಮುಂದಾಗಬೇಕು. ಪುಸ್ತಕ ಪ್ರೇಮಿಗಳಾಗಿ ಮೊಬೈಲ್ ಬಳಕೆ ಒಳ್ಳೆಯ ಕಾರ್ಯಕ್ಕೆ ಉಪಯೋಗಿಸಿ ನೌಕರಿಗಾಗಿ ಯಾರು ಓದಬೇಡಿ ಜ್ಞಾನ ಸಂಪಾದನೆಗಾಗಿ ಓದಿ ಎಂದು ಬಡದಾಳ ತೇರಿನ ಮಠ ಷ.ಬ.ಶ್ರೀಚನ್ನಮಲ್ಲ ಶಿವಾಚಾರ್ಯರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಅಫಜಲಪುರ ಪಟ್ಟಣದ ಶಾರದಾ ಸಭಾ ಭವನದಲ್ಲಿ ಶ್ರೀ ಸಾಯಿ ಎಜುಕೇಶನ್ ಟ್ರಸ್ಟ್ ಶ್ರೀ ಎಪಿಜೆ ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜು ವತಿಯಿಂದ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಹಾಗೂ 85 ಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಲಬುರಗಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯರಾದ ಧರ್ಮರಾಯ ಜವಳಿ, ಸರ್ಕಾರವು ಜಾರಿಗೆ ತಂದಿರುವ ವೆಬ್ ಕಾಸ್ಟಿಂಗ್ ವ್ಯವಸ್ಥೆ ಇಂದು ಕಠಿಣ ಎನಿಸಬಹುದು, ಮುಂದಿನ 10 ವರ್ಷಗಳಲ್ಲಿ ಇದರ ಮೌಲ್ಯ ಹೆಚ್ಚಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ರಮೇಶ ಬಲೀದ ಅವರು ವಿದ್ಯಾರ್ಥಿಗಳಿಗೆ ಪ್ರೇರಣಾ ನುಡಿಯನ್ನು ಹೇಳಿದರು. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರು ಹಾಗೂ ಪ್ರಾಚಾರ್ಯರಾದ ಶಿವಾನಂದ ಚಿಂಚೋಳಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾಂತೇಶ ಡಿ ಪಾಟೀಲ ಮಾಜಿ ಸದಸ್ಯರು ಹಿಂದುಳಿದ ವರ್ಗಗಳ ಆಯೋಗ ಬೆಂಗಳೂರು ಅವರು ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಿವಾನಂದ ಕಾಚಾಪುರ ಇತರರು ವೇದಿಕೆಯ ಮೇಲೆ ಉಪಸ್ಥಿತರಿದ್ದರು. ನಗರದ ಗಣ್ಯರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.







