Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ರಾಷ್ಟ್ರಕೂಟರ ಕೊಡುಗೆ...

Afzalpur | ರಾಷ್ಟ್ರಕೂಟರ ಕೊಡುಗೆ ಸಾಹಿತ್ಯ, ಸಂಸ್ಕೃತಿ ಕ್ಷೇತ್ರಗಳಲ್ಲಿ ಅಪಾರ: ಶಾಸಕ ಎಂ.ವೈ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ6 Nov 2026 10:58 PM IST
share
Afzalpur | ರಾಷ್ಟ್ರಕೂಟರ ಕೊಡುಗೆ ಸಾಹಿತ್ಯ, ಸಂಸ್ಕೃತಿ ಕ್ಷೇತ್ರಗಳಲ್ಲಿ ಅಪಾರ: ಶಾಸಕ ಎಂ.ವೈ.ಪಾಟೀಲ್

ಅಫಜಲಪುರ: ರಾಷ್ಟ್ರಕೂಟರ ಮನೆತನವು ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಿಗೆ ಬಹುದೊಡ್ಡ ಕೊಡುಗೆ ನೀಡಿದೆ ಎಂದು ಶಾಸಕ ಎಂ.ವೈ.ಪಾಟೀಲ್‌ ಹೇಳಿದರು.

ಪಟ್ಟಣದ ಆನೂರ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯ ಪತ್ರಾಗಾರ ಇಲಾಖೆ ಹಾಗೂ ಕಾಲೇಜಿನ ಇತಿಹಾಸ ಮತ್ತು ಕನ್ನಡ ವಿಭಾಗಗಳ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರಕೂಟ ಮನೆತನದ ಚರಿತ್ರೆ, ಸಾಹಿತ್ಯ ಮತ್ತು ಸಂಸ್ಕೃತಿ ಕುರಿತ ರಾಷ್ಟ್ರಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡಿಗರ ಹೋರಾಟದ ಫಲವಾಗಿ ಕನ್ನಡ ಭಾಷಿಕ ಪ್ರದೇಶಗಳು ಒಂದಾಗಿ ಕರ್ನಾಟಕ ರಾಜ್ಯ ನಿರ್ಮಾಣಗೊಂಡಿದೆ. ಇಂತಹ ಐತಿಹಾಸಿಕ ಪರಂಪರೆಯ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯ ಮಹತ್ವದ್ದಾಗಿದೆ ಎಂದರು.

ಧಾರವಾಡದ ವಿಶ್ರಾಂತ ಪ್ರಾಧ್ಯಾಪಕ ಡಾ. ಈರಣ್ಣ ಪತ್ತಾರ ಮಾತನಾಡಿ, ಎರಡು ಶತಮಾನಗಳಿಗೂ ಹೆಚ್ಚು ಕಾಲ ಆಡಳಿತ ನಡೆಸಿದ ರಾಷ್ಟ್ರಕೂಟರು ಸಾಹಿತ್ಯ, ಕೃಷಿ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅನನ್ಯ ಕೊಡುಗೆ ನೀಡಿದ್ದಾರೆ. ರಾಷ್ಟ್ರಕೂಟರ ಕಾಲದಲ್ಲಿ ಸಾಹಿತ್ಯ ಕ್ಷೇತ್ರ ಅತ್ಯಂತ ಸಮೃದ್ಧವಾಗಿತ್ತು. ಅವರ ಸಾಮ್ರಾಜ್ಯದಲ್ಲಿ 13 ಸಾಮಂತ ಅರಸರಿದ್ದ ಉಲ್ಲೇಖಗಳೂ ದೊರೆಯುತ್ತವೆ. ಶಿಕ್ಷಣ ಮತ್ತು ಸಾಹಿತ್ಯದ ಜತೆಗೆ ಸಾಮಾಜಿಕ ಜೀವನದಲ್ಲಿಯೂ ಅಂತರ್ಜಾತಿ ವಿವಾಹ, ಸತಿ ಪದ್ಧತಿ, ವಧುದಕ್ಷಿಣೆ ಹಾಗೂ ಆಡಳಿತದಲ್ಲಿ ಮಹಿಳೆಯರ ಪಾತ್ರದಂತಹ ಹಲವು ಅಂಶಗಳು ಕಂಡುಬರುತ್ತವೆ ಎಂದು ವಿವರಿಸಿದರು.

ರಾಷ್ಟ್ರಕೂಟರ ಕುರಿತು ಇನ್ನಷ್ಟು ಆಳವಾದ ಸಂಶೋಧನೆಗಳು ನಡೆಯಬೇಕಿವೆ. ಅಂದಿನ ಕಾಲದಲ್ಲಿ ತುಪ್ಪದ ಮೇಲೆಯೂ ತೆರಿಗೆ ವಿಧಿಸಲಾಗುತ್ತಿತ್ತು ಎಂಬ ಉಲ್ಲೇಖಗಳು ದೊರೆಯುತ್ತವೆ. ಇದು ಕೃಷಿ ಮತ್ತು ಪಶುಸಂಗೋಪನೆಗೆ ನೀಡಲಾಗಿದ್ದ ಪ್ರಾಮುಖ್ಯತೆಯನ್ನು ಸೂಚಿಸುತ್ತದೆ. ಇಂದಿನ ಪೀಳಿಗೆಯೂ ಕೃಷಿ ಹಾಗೂ ಪಶುಸಂಗೋಪನೆಯ ಮಹತ್ವವನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.

ರಾಜ್ಯ ಪತ್ರಾಗಾರ ಇಲಾಖೆಯ ಉಪನಿರ್ದೇಶಕ ಡಾ. ವೀರಶೆಟ್ಟಿ ಗಾರಂಪಳ್ಳಿ ಮಾತನಾಡಿ, ರಾಷ್ಟ್ರಕೂಟರು ಸಾಹಿತ್ಯ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ವಿಶೇಷವಾಗಿ ಗಣಿತಶಾಸ್ತ್ರದ ಅಧ್ಯಯನಕ್ಕೂ ಅವರ ಕಾಲದಲ್ಲಿ ಮಹತ್ವ ದೊರೆತಿತ್ತು. ಎಲ್ಲ ಕ್ಷೇತ್ರಗಳನ್ನೂ ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ದೂರದೃಷ್ಟಿ ಮತ್ತು ಇಚ್ಛಾಶಕ್ತಿ ರಾಷ್ಟ್ರಕೂಟರ ಆಡಳಿತದಲ್ಲಿತ್ತು ಎಂದರು.

ಮೈಸೂರಿನ ಡಾ. ರಾಜೇಂದ್ರಪ್ಪ ಎಸ್. ಮಾತನಾಡಿದರು. ಇದೇ ಸಂದರ್ಭದಲ್ಲಿ ಶಾಸಕ ಎಂ.ವೈ. ಪಾಟೀಲ ಅವರು 2026–27ನೇ ಸಾಲಿನ ‘ಬೆಳ್ಳಿ ಚುಕ್ಕಿ’ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಎಪಿಎಂಸಿ ಜಿಲ್ಲಾಧ್ಯಕ್ಷ ಮಂಜುನಾಥ ಅಂಜುಟಗಿ, ಸಿಡಿಸಿ ಉಪಾಧ್ಯಕ್ಷ ಪ್ರಕಾಶ ಜಮಾದಾರ, ಸದಸ್ಯ ಶಾಂತಕುಮಾರ ದೇಸಾಯಿ, ಡಾ. ಶಾರದಾದೇವಿ ಜಾಧವ, ಡಾ. ಸೂರ್ಯಕಾಂತ ಉಮಾಪುರೆ, ಡಾ. ಮಹ್ಮದ್ ಯುನೂಸ್, ಡಾ. ಸಂಗಣ್ಣ ಸಿಂಗೆ, ಪಿಎಸ್‌ಐ ವಿಜಯಕುಮಾರ ನಾಯಕ ಸೇರಿದಂತೆ ಇತರರು ಉಪಸ್ಥಿತರಿದ್ದರು. ಡಾ. ಶಿವಶರಣಪ್ಪ ಮೊತಕಪಳ್ಳಿ ನಿರೂಪಿಸಿದರು.

Tags

M.Y.PatilAfzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X