Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ ರೊಟ್ಟಿಯನ್ನು ಜಾಗತಿಕ...

ಕಲಬುರಗಿ ರೊಟ್ಟಿಯನ್ನು ಜಾಗತಿಕ ಬ್ರ್ಯಾಂಡ್ ಆಗಿಸುವ ಗುರಿ: ಸಾಹಿತ್ಯ ಆಲದಕಟ್ಟಿ

ವಾರ್ತಾಭಾರತಿವಾರ್ತಾಭಾರತಿ1 July 2026 7:12 PM IST
share
ಕಲಬುರಗಿ ರೊಟ್ಟಿಯನ್ನು ಜಾಗತಿಕ ಬ್ರ್ಯಾಂಡ್ ಆಗಿಸುವ ಗುರಿ: ಸಾಹಿತ್ಯ ಆಲದಕಟ್ಟಿ
'ಕಲಬುರಗಿ ರೊಟ್ಟಿ ಗ್ಲೋಬಲ್ ಚಾಲೆಂಜ್-2026'ಗೆ ಐಡಿಯಾ ನೀಡುವವರಿಗೆ ಅಪೂರ್ವ ಅವಕಾಶ

ಕಲಬುರಗಿ : ಜಿಐ (GI) ಟ್ಯಾಗ್ ಪಡೆದಿರುವ ಕಲಬುರಗಿ ಖಡಕ್ ರೊಟ್ಟಿಯನ್ನು ಜಾಗತಿಕ ಆಹಾರ ಬ್ರ್ಯಾಂಡ್ ಆಗಿ ರೂಪಿಸುವ ಮಹತ್ವಾಕಾಂಕ್ಷೆಯ ಉದ್ದೇಶದಿಂದ ಜಿಲ್ಲಾಡಳಿತವು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ಸಹಯೋಗದಲ್ಲಿ ‘ಕಲಬುರಗಿ ರೊಟ್ಟಿ ಗ್ಲೋಬಲ್ ಚಾಲೆಂಜ್-2026’ ಕಾರ್ಯಕ್ರಮವನ್ನು ಆಯೋಜಿಸಿದೆ.

ನಗರದ ಸಹಾಯಕ ಆಯುಕ್ತರ ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ, ಕಲಬುರಗಿ ಖಡಕ್ ರೊಟ್ಟಿಯನ್ನು ದೇಶ-ವಿದೇಶಗಳಲ್ಲಿ ಮತ್ತಷ್ಟು ಜನಪ್ರಿಯಗೊಳಿಸಲು ಹೊಸ ಉದ್ಯಮ, ಉತ್ಪನ್ನ ಅಭಿವೃದ್ಧಿ ಹಾಗೂ ಮಾರುಕಟ್ಟೆ ವಿಸ್ತರಣೆಗೆ ಸಂಬಂಧಿಸಿದ ನವೀನ ಆಲೋಚನೆಗಳನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳು, ಯುವಕರು, ಗೃಹಿಣಿಯರು, ಸ್ಟಾರ್ಟ್‌ಅಪ್ ಸ್ಥಾಪಕರು ಹಾಗೂ ಉದ್ಯಮ ಆರಂಭಿಸಲು ಆಸಕ್ತಿ ಹೊಂದಿರುವವರು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಖಡಕ್ ರೊಟ್ಟಿ ಹಾಗೂ ಅದರ ಉತ್ಪನ್ನಗಳನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಗೆ ಕೊಂಡೊಯ್ಯುವ ಉದ್ಯಮ ಮಾದರಿಗಳು, ಬ್ರ್ಯಾಂಡಿಂಗ್ ತಂತ್ರಗಳು ಹಾಗೂ ಸ್ಟಾರ್ಟ್‌ಅಪ್ ಯೋಜನೆಗಳನ್ನು ಆರು ಸದಸ್ಯರ ತಂಡಗಳ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಜುಲೈ 6ರಂದು ನಗರದ ವಿಟಿಯು ಪ್ರಾದೇಶಿಕ ಕೇಂದ್ರದಲ್ಲಿ ಪ್ರಾಥಮಿಕ ಸ್ಕ್ರೀನಿಂಗ್ ನಡೆಯಲಿದ್ದು, ಜುಲೈ 12ರಂದು ಅಂತಿಮ ಸುತ್ತು ಆಯೋಜಿಸಲಾಗುತ್ತದೆ. ಆಯ್ಕೆಯಾಗುವ ತಂಡಗಳಿಗೆ ಇನ್‌ಕ್ಯುಬೇಷನ್, ಸೀಡ್ ಫಂಡಿಂಗ್ ಪಡೆಯಲು ನೆರವು ಹಾಗೂ ಉದ್ಯಮ ಸ್ಥಾಪನೆಗೆ ತಜ್ಞರಿಂದ ಮಾರ್ಗದರ್ಶನ ನೀಡಲಾಗುವುದು ಎಂದು ಹೇಳಿದರು.

ಆಸಕ್ತರು ಜುಲೈ 5ರೊಳಗೆ ಪೋಸ್ಟರ್‌ನಲ್ಲಿರುವ ಕ್ಯೂಆರ್ ಕೋಡ್ ಮೂಲಕ ಗೂಗಲ್ ನೋಂದಣಿ ನಮೂನೆಯಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ಸ್ಪರ್ಧೆಗೆ ಯಾವುದೇ ವಯೋಮಿತಿ ಇಲ್ಲ. ಹೆಚ್ಚಿನ ಮಾಹಿತಿಗಾಗಿ 7259885680 ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ‘ಕಲಬುರಗಿ ರೊಟ್ಟಿ ಗ್ಲೋಬಲ್ ಚಾಲೆಂಜ್-2026’ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಪತ್ರಿಕಾಗೋಷ್ಠಿಯಲ್ಲಿ ಪ್ರೊಬೇಷನರ್ ಐಎಎಸ್ ಅಧಿಕಾರಿ ಶಿಖರ್ ಮೋಘಾ, ಕೆಡಿಇಎಂನ ಬಿಯಾಂಡ್ ಬೆಂಗಳೂರು ಉಪಾಧ್ಯಕ್ಷ ಚೇತನ ದೀಕ್ಷಿತ್ ಹಾಗೂ ಕ್ಲಸ್ಟರ್ ಹೆಡ್ ಸುಜಯ್ ಮುದಗಲ್ ಉಪಸ್ಥಿತರಿದ್ದರು.

Tags

KalaburagiKalaburagi Rotti
share
ವಾರ್ತಾಭಾರತಿ
ವಾರ್ತಾಭಾರತಿ
Next Story
X