Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Aland | ಪ್ರಶ್ನಿಸುವ ಮನೋಭಾವದಿಂದಲೇ...

Aland | ಪ್ರಶ್ನಿಸುವ ಮನೋಭಾವದಿಂದಲೇ ವೈಜ್ಞಾನಿಕ ಸಮಾಜ ನಿರ್ಮಾಣ ಸಾಧ್ಯ : ಬಸವರಾಜ ಪಾವಲೇ

ಉತ್ತಮ ಶಿಕ್ಷಕರಿಗೆ ಸನ್ಮಾನ ; ಉಪನ್ಯಾಸ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ26 Sept 2026 7:59 PM IST
share
Aland | ಪ್ರಶ್ನಿಸುವ ಮನೋಭಾವದಿಂದಲೇ ವೈಜ್ಞಾನಿಕ ಸಮಾಜ ನಿರ್ಮಾಣ ಸಾಧ್ಯ : ಬಸವರಾಜ ಪಾವಲೇ

ಆಳಂದ: ಪ್ರತಿಯೊಂದು ಸಮಸ್ಯೆ ಹಾಗೂ ಪ್ರಶ್ನೆಗೆ ವೈಜ್ಞಾನಿಕ ಹಿನ್ನೆಲೆಯೊಂದಿಗೆ ಉತ್ತರ ಕಂಡುಕೊಂಡು, ಸತ್ಯವನ್ನು ಸಮಾಜಕ್ಕೆ ತಿಳಿಸುವ ಕೆಲಸವಾಗಬೇಕು. ಯಾವುದೇ ಪ್ರಶ್ನೆ ತಪ್ಪಲ್ಲ. ಉತ್ತರ ತಿಳಿಯದಿದ್ದರೆ ‘ತಿಳಿದಿಲ್ಲ’ ಎಂದು ಒಪ್ಪಿಕೊಳ್ಳಬೇಕು. ತಪ್ಪಾದ ಉತ್ತರ ನೀಡುವುದಕ್ಕಿಂತ ಉತ್ತರವನ್ನು ಹುಡುಕುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಶಿಕ್ಷಕ ಬಸವರಾಜ ಪಾವಲೇ ಹೇಳಿದರು.

ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿ (BGVS) ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ವೈಜ್ಞಾನಿಕ ಮನೋಭಾವ ದಿನಾಚರಣೆ, ಶಿಕ್ಷಕರ ಸನ್ಮಾನ ಹಾಗೂ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರತಿಯೊಂದು ಸಂಪ್ರದಾಯದಲ್ಲೂ ಅಡಗಿರುವ ವೈಜ್ಞಾನಿಕ ಸತ್ಯವನ್ನು ಕಂಡುಕೊಳ್ಳುವ ಪ್ರಯತ್ನ ನಡೆಯಬೇಕು. ಪ್ರಶ್ನಿಸುವ ಹಾಗೂ ಪ್ರತಿಕ್ರಿಯಿಸುವ ವಾತಾವರಣವನ್ನು ಮನೆ, ಶಾಲೆ ಮತ್ತು ಸಮಾಜದಲ್ಲಿ ನಿರ್ಮಿಸಬೇಕು ಎಂದು ಅವರು ಕರೆ ನೀಡಿದರು.

ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸತೀಶ ಸನ್ಮುಖ ಮಾತನಾಡಿ, BGVS ಸಮಾಜದಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದರ ಜೊತೆಗೆ ಜನರಲ್ಲಿ ಅರಿವು ಮೂಡಿಸುವ ಮಹತ್ವದ ಕೆಲಸ ಮಾಡುತ್ತಿದೆ. “ಪ್ರಶ್ನೆಯೇ ಪ್ರಜ್ಞೆಯಾಗಲಿ” ಎಂಬ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಸಿಕೊಳ್ಳಬೇಕು ಎಂದರು.

ಭಾರತ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಅಧ್ಯಕ್ಷ ಶಿವಶರಣಪ್ಪ ಮೂಳೆಗಾಂವ ಮಾತನಾಡಿ, ಶಾಲೆಯಲ್ಲಿ ಪಾಠ ಮಾಡುವ ಸಂದರ್ಭದಲ್ಲಿ ವಿವಿಧ ಪ್ರಯೋಗಗಳ ಹಿಂದೆ ಅಡಗಿರುವ ವೈಜ್ಞಾನಿಕ ಸತ್ಯವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಕೆಲಸವಾಗಬೇಕು. ಈ ವಿಚಾರ ಮನೆ ಹಾಗೂ ಶಾಲೆಯಿಂದಲೇ ಆರಂಭವಾಗಬೇಕು ಎಂದು ಹೇಳಿದರು.

ವಿಜಯಕುಮಾರ ಜಿಡಗೆ ಮಾತನಾಡಿ, ಸಮಾಜದಲ್ಲಿರುವ ಮೂಢನಂಬಿಕೆಗಳನ್ನು ಹೋಗಲಾಡಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಚಂದ್ರಶೇಖರ್ ಪೂಜಾರಿ ಮಾತನಾಡಿ, ವ್ಯಕ್ತಿ ಯಾರೇ ಆಗಿರಲಿ ಅವರ ತಪ್ಪು ಹಾಗೂ ಅನ್ಯಾಯವನ್ನು ಖಂಡಿಸುವ ಎದೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಂದು ತಂತ್ರಜ್ಞಾನದ ಹಿಂದೆ ವಿಜ್ಞಾನವಿದ್ದು, ವಿಜ್ಞಾನ ಚಳವಳಿಯನ್ನು ಜನರ ಮಧ್ಯೆ ಕೊಂಡೊಯ್ಯುವ ಕೆಲಸವನ್ನು ಎಲ್ಲರೂ ಮಾಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರವೀಂದ್ರ ಕಂಟೆಕುರ್ ಮಾತನಾಡಿ, ಸಾಮಾಜಿಕ ಕಳಕಳಿಯ ಕೆಲಸವನ್ನು ಸಂಘಟನೆಗಳು ನಿರಂತರವಾಗಿ ಮಾಡಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಶಿಕ್ಷಕರ ಮೇಲೆ ಮಹತ್ವದ ಜವಾಬ್ದಾರಿ ಇದ್ದು, ರಾಜ್ಯ ಹಾಗೂ ಜಿಲ್ಲಾ ಪ್ರಶಸ್ತಿ ಪಡೆದ ಶಿಕ್ಷಕರನ್ನು ಗುರುತಿಸಿ ಗೌರವಿಸುವುದು ಸಂಘಟನೆಯ ಮಹತ್ವದ ಕಾರ್ಯವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ ಪಡೆದ ಲಿಂಗಪ್ಪ ಮಂಗೊಂಡಿ, ರಾಜೀವ ಗಾಂಧಿ ರಾಜ್ಯ ಪ್ರಶಸ್ತಿ ಪಡೆದ ಕಾಲೇಜು ವಿಭಾಗದ ರಮೇಶ್ ಕುಲಕರ್ಣಿ, ಪ್ರೌಢಶಾಲಾ ವಿಭಾಗದ ಮಲ್ಲಿಕಾರ್ಜುನ ಪಟ್ಟಣ, ಪ್ರಾಥಮಿಕ ಶಾಲಾ ವಿಭಾಗದ ರೇವಣಸಿದ್ಧಪ್ಪ ಯಾದವಾಡ ಹಾಗೂ ಜಿಲ್ಲಾ ಪ್ರಶಸ್ತಿ ಪಡೆದ ಲಕ್ಷ್ಮಿ ಪಾಟೀಲ, ಚಂದ್ರಕಾಂತ ಬಬಲಾದಕರ, ದೈಹಿಕ ಶಿಕ್ಷಕ ಮಹಾದೇವ ಗುಣಕಿ ಹಾಗೂ ಬಸವರಾಜ ಪಾವಲೇ ಅವರನ್ನು ಸನ್ಮಾನಿಸಲಾಯಿತು.

ಕಲ್ಯಾಣಪ್ಪ ಬಿಜ್ಜರಗಿ ವಂದಿಸಿದರು. ಕಾರ್ಯಕ್ರಮದಲ್ಲಿ ಪ್ರಮುಖರಾದ ಶ್ರೀಶೈಲ ಮಾಡಿಯಾಳ, ಅಪ್ಪಾಸಾಬ್ ತೀರ್ಥೆ ಸೇರಿದಂತೆ ಸಮಿತಿಯ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

SocietyAland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X