Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Aland | ಸಂವಿಧಾನದ ಮೌಲ್ಯಗಳ ಅರಿವು...

Aland | ಸಂವಿಧಾನದ ಮೌಲ್ಯಗಳ ಅರಿವು ಯುವಜನರಲ್ಲಿ ಮೂಡಬೇಕು: ಚಂದ್ರಶೇಖರ್ ಕಟ್ಟಿಮನಿ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ16 Sept 2026 7:00 PM IST
share
Aland | ಸಂವಿಧಾನದ ಮೌಲ್ಯಗಳ ಅರಿವು ಯುವಜನರಲ್ಲಿ ಮೂಡಬೇಕು: ಚಂದ್ರಶೇಖರ್ ಕಟ್ಟಿಮನಿ

ಆಳಂದ: ಪ್ರಜಾಪ್ರಭುತ್ವ ವ್ಯವಸ್ಥೆಯ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ನಾಗರಿಕರ ಹಕ್ಕು-ಕರ್ತವ್ಯಗಳ ಕುರಿತು ಯುವಜನರಲ್ಲಿ ಅರಿವು ಮೂಡಿಸುವುದು ಅತ್ಯಗತ್ಯ ಎಂದು ಬಿಆರ್‌ಪಿ ಚಂದ್ರಶೇಖರ್ ಕಟ್ಟಿಮನಿ ಹೇಳಿದರು.

ಪಟ್ಟಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವವು ಕೇವಲ ಚುನಾವಣೆ ಮತ್ತು ಮತದಾನಕ್ಕೆ ಸೀಮಿತವಾಗಿಲ್ಲ. ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶ, ಸ್ವಾತಂತ್ರ್ಯ, ಹಕ್ಕು ಹಾಗೂ ನ್ಯಾಯ ದೊರೆಯುವ ವ್ಯವಸ್ಥೆಯೇ ಪ್ರಜಾಪ್ರಭುತ್ವದ ಮೂಲ ಆಶಯವಾಗಿದೆ. ವಿದ್ಯಾರ್ಥಿಗಳು ಸಂವಿಧಾನದ ಮೌಲ್ಯಗಳನ್ನು ಅರಿತು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಹೇಳಿದರು.

ಗ್ರೇಡ್-2 ತಹಶೀಲ್ದಾರ್ ಮಲ್ಲಿಕಾರ್ಜುನ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಿದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ ಹೋಳ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಜಾಪ್ರಭುತ್ವದ ಬಲವರ್ಧನೆಯಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ. ಸಂವಿಧಾನ ನೀಡಿರುವ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನೂ ಅರಿತು ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.

ಸಮನ್ವಯಾಧಿಕಾರಿ ಅಣ್ಣಪ್ಪ ಹಾದಿಮನಿ ಅವರು ಪ್ರಜಾಪ್ರಭುತ್ವದ ಮಹತ್ವ, ಸಂವಿಧಾನಾತ್ಮಕ ಮೌಲ್ಯಗಳು ಹಾಗೂ ನಾಗರಿಕರ ಹಕ್ಕು-ಕರ್ತವ್ಯಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಗೆ ಸಂವಿಧಾನ ಪುಸ್ತಕ ವಿತರಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜೆಸ್ಕಾಂ ಎಇಇ ಪ್ರಭು ಮಾಡಿತೋಟ, ಹಿರಿಯ ಮುಖಂಡ ದಯಾನಂದ್ ಶೇರಿಕಾರ್, ಮಲ್ಲಿಕಾರ್ಜುನ ಬೋಳಣಿ, ಜಯ ಕರವೇ ತಾಲೂಕು ಅಧ್ಯಕ್ಷ ಪ್ರವೀಣ ಮೊದಲೆ, ಆಕಾಶ ದೇಗಾಂವ, ಎಸಿಎಸ್ಟಿ ನೌಕರ ಸಂಘದ ಅಧ್ಯಕ್ಷ ರಮೇಶ ಪಾತ್ರೆದೈಹಿಕ ಶಿಕ್ಷಣ ಉಪನ್ಯಾಸಕ ಡಾ. ಶಂಕರ್, ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯ ಅಣವೀರ್, ಸಮಾಜ ಕಲ್ಯಾಣ ಇಲಾಖೆಯ ರಮೇಶ್ ವಾಗ್ದರ್ಗಿ, ನಿಂಗಣ್ಣ ದೊಡ್ಡಮನಿ, ಸಿದ್ಧರಾಮ ವಡಗಾಂವ, ಗುಂಡೇರಾವ್ ವಾರ್ಡನ್, ಆಶಾ, ನಶ್ರೀನ್, ಪಾರ್ವತಿ, ಇಂದುಬಾಯಿ, ಅಶ್ವಿನಿ, ಸುವರ್ಣ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸರ್ಕಾರಿ ಡಿಗ್ರಿ ಕಾಲೇಜು ಹಾಗೂ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ಸಂತೋಷ್ ಶಿಂದೆ ಕಾರ್ಯಕ್ರಮ ನಿರೂಪಿಸಿದರು. ಗುಂಡೇರಾವ್ ಗುಬ್ಬ್ಯಾಡ ವಂದಿಸಿದರು.

Tags

youthAland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X