Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Aland | ಸತತ ಪರಿಶ್ರಮವೇ ಸಾಧನೆಯ ರಹದಾರಿ...

Aland | ಸತತ ಪರಿಶ್ರಮವೇ ಸಾಧನೆಯ ರಹದಾರಿ : ಡಾ.ಪ್ರಮಿಳಾ ಅಂಬಾರಾಯ

ವಾರ್ತಾಭಾರತಿವಾರ್ತಾಭಾರತಿ2 Jun 2026 10:00 PM IST
share
Aland | ಸತತ ಪರಿಶ್ರಮವೇ ಸಾಧನೆಯ ರಹದಾರಿ : ಡಾ.ಪ್ರಮಿಳಾ ಅಂಬಾರಾಯ

ಆಳಂದ : ವಿದ್ಯಾರ್ಥಿ ಜೀವನದಲ್ಲಿ ಸತತ ಅಧ್ಯಯನ, ಕಠಿಣ ಪರಿಶ್ರಮ ಮತ್ತು ಗುರಿಯತ್ತ ಅಚಲ ನಿಷ್ಠೆ ಹೊಂದಿದ್ದರೆ ಮಾತ್ರ ಯಶಸ್ಸಿನ ಶಿಖರವನ್ನು ಏರಲು ಸಾಧ್ಯವಾಗುತ್ತದೆ ಎಂದು ಅಮತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರಮಿಳಾ ಅಂಬಾರಾಯ ಹೇಳಿದರು.

ಪಟ್ಟಣದ ಅಮತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ., ಬಿ.ಎಸ್ಸಿ. ಹಾಗೂ ಬಿ.ಕಾಂ. ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಓದುವ ಆಸಕ್ತಿ ಮತ್ತು ಪರಿಶ್ರಮದ ಮನೋಭಾವ ಕಡಿಮೆಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಜೀವನದಲ್ಲಿ ಸಾಧನೆಯ ಶಿಖರ ತಲುಪಲು ಯಾವುದೇ ಶಾರ್ಟ್ಕಟ್ ಗಳಿಲ್ಲ. ಕಠಿಣ ಪರಿಶ್ರಮ, ಸಮಯದ ಸದುಪಯೋಗ ಮತ್ತು ನಿರಂತರ ಅಭ್ಯಾಸದ ಮೂಲಕ ಮಾತ್ರ ಉನ್ನತ ಸ್ಥಾನಗಳನ್ನು ಅಲಂಕರಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ನಮ್ಮ ಕಾಲೇಜಿನಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿನಿಯೊಬ್ಬರು ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ 11 ಚಿನ್ನದ ಪದಕಗಳನ್ನು ಪಡೆದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅವರ ಸಾಧನೆ ಇಂದಿನ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು. ವಿದ್ಯಾರ್ಥಿಗಳು ಉತ್ತಮ ಅಧ್ಯಯನದ ಮೂಲಕ ತಮ್ಮ ಪೋಷಕರಿಗೆ, ಊರಿಗೆ ಹಾಗೂ ಶಿಕ್ಷಣ ಸಂಸ್ಥೆಗೆ ಕೀರ್ತಿ ತರುವಂತಹ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪಂಡಿತರಾವ ಪಾಟೀಲ ಮಾತನಾಡಿ, ಇಂದಿನ ಯುವಜನತೆ ಮೊಬೈಲ್ ಬಳಕೆಯಲ್ಲಿ ಹೆಚ್ಚು ಸಮಯ ಕಳೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಮಯ ವ್ಯರ್ಥ ಮಾಡುವ ಬದಲು ಪುಸ್ತಕಗಳ ಅಧ್ಯಯನಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಜ್ಞಾನಾರ್ಜನೆಯ ಮೂಲಕವೇ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಸಲಹೆ ನೀಡಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉಪನ್ಯಾಸಕ ಶ್ರೀಶೈಲ ಮಾಳಗೆ ಮಾತನಾಡಿ, ಜೀವನದಲ್ಲಿ ಅವಕಾಶಗಳು ಪದೇ ಪದೇ ದೊರೆಯುವುದಿಲ್ಲ. ಒಮ್ಮೆ ಸಿಕ್ಕ ಅವಕಾಶವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಮಾತ್ರ ಯಶಸ್ಸು ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಗುರಿಯ ಬಗ್ಗೆ ಸ್ಪಷ್ಟತೆ ಹೊಂದಿ, ಪ್ರತಿಯೊಂದು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಹುಲ್ ಬಂಡಗಾರ, ಶರಣಬಸಪ್ಪ ಪಾಟೀಲ, ಪ್ರಾಧ್ಯಾಪಕ ದಯಾನಂದ ರಟಕಲ್ ಹಾಗೂ ಸಿದ್ದರಾಮ ವಾಕಡೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳು ಕಾಲೇಜಿನಲ್ಲಿನ ತಮ್ಮ ಅನುಭವಗಳು, ನೆನಪುಗಳು ಹಾಗೂ ಭವಿಷ್ಯದ ಆಶಯಗಳನ್ನು ಹಂಚಿಕೊಂಡು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Tags

Aland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X