Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Aland | ವಿವಿಧ ಬೇಡಿಕೆಗಳ ಈಡೇರಿಕೆಗೆ...

Aland | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐ, ಎಐಟಿಯುಸಿ ಪಾದಯಾತ್ರೆ

ವಾರ್ತಾಭಾರತಿವಾರ್ತಾಭಾರತಿ19 Aug 2026 7:36 PM IST
share
Aland | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐ, ಎಐಟಿಯುಸಿ ಪಾದಯಾತ್ರೆ

ಆಳಂದ: ನಿಂಬರ್ಗಾ ಹೋಬಳಿ ಹಾಗೂ ಗ್ರಾಮಗಳ ವಿವಿಧ ಬಡಾವಣೆಗಳ ಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಹಾಗೂ ನಿಂಬರ್ಗಾ ವಲಯ ಕಟ್ಟಡ ಕಾರ್ಮಿಕ ಸಂಘಟನೆ (ಎಐಟಿಯುಸಿ) ಜಂಟಿ ವಲಯ ಸಮಿತಿ ವತಿಯಿಂದ ಬುಧವಾರ ಪಾದಯಾತ್ರೆ ನಡೆಸಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಸಿಪಿಐ ಹಾಗೂ ಎಐಟಿಯುಸಿ ರಾಷ್ಟ್ರೀಯ ಮಂಡಳಿಯ ಕರೆಯ ಮೇರೆಗೆ ಆ.6ರಿಂದ 31ರವರೆಗೆ ದೇಶಾದ್ಯಂತ ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ ಅವುಗಳ ಪರಿಹಾರಕ್ಕಾಗಿ ಪಾದಯಾತ್ರೆ ಹಾಗೂ ಹೋರಾಟ ನಡೆಸಲಾಗುತ್ತಿದೆ. ಇದರ ಭಾಗವಾಗಿ ನಿಂಬರ್ಗಾ ಭಾಗದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.

ನಿಂಬರ್ಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡವರು ಹಾಗೂ ಕಟ್ಟಡ ಕಾರ್ಮಿಕರಿಗೆ ವಸತಿ ಕಲ್ಪಿಸಲು ಸರ್ಕಾರಿ ಜಮೀನು ಮೀಸಲಿಡಬೇಕು. ಮನೆ ಇಲ್ಲದವರಿಗೆ ಮನೆ ನಿರ್ಮಿಸಿಕೊಡುವುದರ ಜತೆಗೆ ಮನೆ ನಿರ್ಮಾಣಕ್ಕೆ ಕನಿಷ್ಠ 5 ಲಕ್ಷ ರೂ. ಆರ್ಥಿಕ ನೆರವು ನೀಡಬೇಕು ಎಂದು ಮುಖಂಡರು ಆಗ್ರಹಿಸಿದರು.

ಕಳೆದ ನಾಲ್ಕೈದು ತಿಂಗಳಿಂದ ಸ್ಥಗಿತಗೊಂಡಿರುವ ವಿಧವಾ ವೇತನ, ವೃದ್ಧಾಪ್ಯ ವೇತನ, ವಿಶೇಷಚೇತನರ ಪಿಂಚಣಿ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಸಹಾಯಧನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಪಿಂಚಣಿ ಮೊತ್ತವನ್ನು ಕನಿಷ್ಠ 3,000 ರೂ. ಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ನಿಂಬರ್ಗಾ ಮುಖ್ಯ ರಸ್ತೆಯಲ್ಲಿರುವ ಕಂಬದ ದ್ವೀಪವನ್ನು ದುರಸ್ತಿ ಮಾಡಬೇಕು. ಅಂಬೇಡ್ಕರ್ ವೃತ್ತದಿಂದ ಬಸ್ ನಿಲ್ದಾಣದವರೆಗೆ ಹಾಳಾಗಿರುವ ಚರಂಡಿಗಳನ್ನು ದುರಸ್ತಿ ಮಾಡಿ ಕೊಳಚೆ ನೀರು ರಸ್ತೆಗೆ ಹರಿಯದಂತೆ ಕ್ರಮ ಕೈಗೊಳ್ಳಬೇಕು. ನಿಂಬರ್ಗಾ ತಾಂಡಾದ ವಾರ್ಡ್ ನಂ.5ರಲ್ಲಿಯೂ ಚರಂಡಿ ಸ್ವಚ್ಛಗೊಳಿಸಿ ರಸ್ತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಮಹಿಳೆಯರಿಗಾಗಿ ಶೌಚಾಲಯ ನಿರ್ಮಿಸಿ ಸಮರ್ಪಕ ನಿರ್ವಹಣೆಗೆ ವ್ಯವಸ್ಥೆ ಮಾಡಬೇಕು. ವಿವಿಧ ಬಡಾವಣೆಗಳು ಹಾಗೂ ಬುಳ್ಳನವರ ಓಣಿಯಲ್ಲಿ ಸಿಸಿ ರಸ್ತೆ ನಿರ್ಮಿಸಬೇಕು. ಜೈಭೀಮ ನಗರದ ಯಲ್ಲಮ್ಮ ಗುಡಿಯಿಂದ ಹಿತ್ತಲಶಿರೂರು ರಸ್ತೆಯವರೆಗೆ ಸಿಸಿ ರಸ್ತೆ ನಿರ್ಮಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ನಿಂಬರ್ಗಾ ನಾಡ ಕಚೇರಿಯ ಆಧಾರ್ ಸೇವಾ ಕೇಂದ್ರ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕೂಡಲೇ ಆಧಾರ್ ಸೇವಾ ಕೇಂದ್ರವನ್ನು ಪುನರಾರಂಭಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಭೀಮಾಶಂಕರ ಮಾಡಿಯಾಳ, ಯಲ್ಲಪ್ಪ ಎಸ್. ಕಟ್ಟಿಮನಿ, ಪ್ರಭುದೇವ ಯಳಸಂಗಿ, ಮೌಲಾ ಮುಲ್ಲಾ, ಯಂಕಪ್ಪ ಬನಪಟ್ಟಿ, ಬಸವರಾಜ ಅರ್ಜುಣಗಿ, ರಮೇಶ್ ರಾಠೋಡ್, ಜಗನ್ನಾಥ, ಶಿವಲಿಂಗಮ್ಮ ಲೇಂಗಟಿಕರ್, ಸೇರಿದಂತೆ ಸಿಪಿಐ ಹಾಗೂ ಎಐಟಿಯುಸಿ ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯರು ಪಾಲ್ಗೊಂಡಿದ್ದರು.

Tags

AITUCCPIAland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X