Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ | ಬುದ್ಧ–ಬಸವ–ಅಂಬೇಡ್ಕರ್...

ಆಳಂದ | ಬುದ್ಧ–ಬಸವ–ಅಂಬೇಡ್ಕರ್ ತತ್ವಗಳಿಂದ ಸಮಾನತೆ ಸಾಧ್ಯ : ನಿಜಗುಣಾನಂದ ಮಹಾಸ್ವಾಮಿಗಳು

ವಾರ್ತಾಭಾರತಿವಾರ್ತಾಭಾರತಿ25 May 2026 6:35 PM IST
share
ಆಳಂದ | ಬುದ್ಧ–ಬಸವ–ಅಂಬೇಡ್ಕರ್ ತತ್ವಗಳಿಂದ ಸಮಾನತೆ ಸಾಧ್ಯ : ನಿಜಗುಣಾನಂದ ಮಹಾಸ್ವಾಮಿಗಳು

ಆಳಂದ : ಬುದ್ಧ, ಬಸವಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ ಮತ್ತು ಆದರ್ಶಗಳಿಂದಲೇ ದೇಶದಲ್ಲಿ ಸಮಾನತೆ, ಸಹೋದರತೆ ಮತ್ತು ಸಮೃದ್ಧಿ ಸಾಧ್ಯವಾಗುತ್ತದೆ ಎಂದು ಮಂಡರಗಿ ತೋಂಟದಾರ್ಯ ಮಠ ಹಾಗೂ ಬೈಲೂರ ನಿಷ್ಕಲ ಮಂಟಪದ ನಿಜಗುಣಾನಂದ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.

ತಾಲೂಕಿನ ಹೋಬಳಿ ಕೇಂದ್ರ ನರೋಣಾ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಹಾಗೂ ಡಿಎಸ್‌ಎಸ್ ಘಟಕದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಬುದ್ಧ, ಬಸವ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಜಯಂತ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಮಾಜವನ್ನು ಗುಲಾಮಗಿರಿಯಲ್ಲಿ ಇಡಲು ಬಯಸುವ ಬಂಡವಾಳಶಾಹಿ ಮತ್ತು ಪಟಭದ್ರ ಹಿತಾಸಕ್ತಿಗಳ ಕಪ್ಪಿಮುಷ್ಟಿಯಿಂದ ಹೊರಬರಲು ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಾರ್ಗವನ್ನು ಜನರು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸಮಾಜದಲ್ಲಿ ಇನ್ನೂ ಅಂಧಶ್ರದ್ಧೆ, ಮೂಢನಂಬಿಕೆ ಮತ್ತು ಕಂದಾಚಾರಗಳು ಜನರ ಮನಸ್ಸನ್ನು ಕತ್ತಲೆಯಲ್ಲೇ ಇಟ್ಟುಕೊಂಡಿವೆ. ದೇವರನ್ನು ಮನುಷ್ಯರೇ ಸೃಷ್ಟಿಸಿದ್ದಾರೆ. ಆದರೆ ತಂದೆ–ತಾಯಿಯಂತಹ ನಿಜವಾದ ದೇವರನ್ನು ಮರೆತು ಮೂಢನಂಬಿಕೆಗಳ ಹಿಂದೆ ಓಡುವುದು ವಿಷಾದನೀಯ ಸಂಗತಿ ಎಂದು ಹೇಳಿದರು.

ಶಿಕ್ಷಣವೇ ಮನುಷ್ಯನ ಬದುಕನ್ನು ಬದಲಾಯಿಸುವ ಮಹಾಶಕ್ತಿ. ಪ್ರತಿಯೊಬ್ಬ ಪೋಷಕರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವತ್ತ ಹೆಚ್ಚಿನ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ಸಾನ್ನಿಧ್ಯ ವಹಿಸಿದ್ದ ಗುರು ಮಹಾಂತ ಮಹಾಸ್ವಾಮಿಗಳು ಮಾತನಾಡಿ, ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ಸಂದೇಶಗಳು ಸಮಾಜದಲ್ಲಿ ಶಾಂತಿ, ಸಮಾನತೆ ಮತ್ತು ಸೌಹಾರ್ದತೆಯನ್ನು ಬೆಳೆಸುವ ಮಹತ್ವದ ಚಿಂತನೆಗಳಾಗಿವೆ. ಯುವಜನತೆ ಈ ಮಹನೀಯರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ದೇಶದ ಭವಿಷ್ಯ ಉಜ್ವಲವಾಗುತ್ತದೆ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಡಿಎಸ್‌ಎಸ್ ರಾಜ್ಯ ಸಂಚಾಲಕ ಡಾ. ಡಿ.ಜಿ. ಸಾಗರ ಅವರು, ಹಲವು ವರ್ಷಗಳಿಂದ ನರೋಣಾ ಗ್ರಾಮದಲ್ಲಿ ಬುದ್ಧ, ಬಸವ ಹಾಗೂ ಅಂಬೇಡ್ಕರ್ ಜಯಂತಿಗಳನ್ನು ಭಾವೈಕ್ಯತೆಯಿಂದ ಆಚರಿಸಲಾಗುತ್ತಿದೆ. ಈ ಭಾಗದ ಜನರು ಮಹನೀಯರ ಕನಸುಗಳನ್ನು ನನಸಾಗಿಸುವ ಉದ್ದೇಶದಿಂದ ಪ್ರತಿವರ್ಷ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಮಾದರಿಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಎಸ್.ಪಿ. ಸುಳ್ಳದ, ಬಾಬುರಾವ್ ವಾಲಿ, ಜಿಪಂ ಮಾಜಿ ಸದಸ್ಯ ಚಂದ್ರಕಾoತ ಸಂಗೋಳಗಿ, ಸುರೇಶ ಹಾದಿಮನಿ, ಬಿ.ಸಿ. ವಾಲಿ, ಬಸವರಾಜ ಚಕ್ಕಿ, ನಿವೃತ್ತ ಎಇಇ ಅಶೋಕ ಅಂಬಲಗಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ವೇದಿಕೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಸಮಾರಂಭದುದ್ದಕ್ಕೂ ದಲಿತ ಕಲಾಮಂಡಳಿಯ ಕ್ರಾಂತಿಕಾರಿ ಹಾಗೂ ಜಾಗೃತಿ ಗೀತೆಗಳು ಜನಮನ ಸೆಳೆದವು. ಅಂಬಣ್ಣಾ ಜೀವಣಗಿ ಹಾಗೂ ರಘುನಾಥ ಬಾಯಿ ಅವರ ಗಾಯನ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದಿತು.

Tags

AlandBuddhaBasavaAmbedkar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X