Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Aland | ಬೆಳೆ ವಿಮೆ ಹಣಕ್ಕಾಗಿ...

Aland | ಬೆಳೆ ವಿಮೆ ಹಣಕ್ಕಾಗಿ ನಿಂಬರ್ಗಾದಲ್ಲಿ ರೈತರ ಆಕ್ರೋಶ; ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ11 Aug 2026 8:15 PM IST
share
Aland | ಬೆಳೆ ವಿಮೆ ಹಣಕ್ಕಾಗಿ ನಿಂಬರ್ಗಾದಲ್ಲಿ ರೈತರ ಆಕ್ರೋಶ; ಪ್ರತಿಭಟನೆ

ಆಳಂದ: ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಅರ್ಹ ರೈತರಿಗೆ ಇನ್ನೂ ಬೆಳೆ ವಿಮೆ ಹಣ ಜಮೆಯಾಗದಿರುವುದನ್ನು ಖಂಡಿಸಿ ಹಾಗೂ ಕೂಡಲೇ ವಿಮೆ ಮೊತ್ತ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಿಂಬರ್ಗಾದಲ್ಲಿ ಸೋಮವಾರ ನೂರಾರು ರೈತರು ಪ್ರತಿಭಟನೆ ನಡೆಸಿದರು.

ಬೆಳಿಗ್ಗೆ 10 ಗಂಟೆಗೆ ಆರಂಭವಾದ ಪ್ರತಿಭಟನೆ ಮಧ್ಯಾಹ್ನ 2.30ರವರೆಗೆ ನಡೆಯಿತು. ಹಲವು ತಿಂಗಳುಗಳಿಂದ ಬೆಳೆ ವಿಮೆ ಹಣಕ್ಕಾಗಿ ಕಾಯುತ್ತಿರುವ ರೈತರ ಸಮಸ್ಯೆಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಅರ್ಹ ಎಲ್ಲ ರೈತರ ಖಾತೆಗಳಿಗೆ ಯಾವುದೇ ವಿಳಂಬವಿಲ್ಲದೆ ವಿಮೆ ಮೊತ್ತ ಜಮೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸ್ಥಳೀಯ ಮಟ್ಟದ ಅಧಿಕಾರಿಗಳಿಗೆ ಮನವಿ ಸಲ್ಲಿಸುವ ಬದಲು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಮನವಿ ಸಲ್ಲಿಸಲು ರೈತರು ನಿರ್ಧರಿಸಿದರು. ಬಳಿಕ ಉಪ ತಹಶೀಲ್ದಾರ್ ಆರ್. ಮಹೇಶ್, ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಹಾಗೂ ತಾಲ್ಲೂಕು ಕೃಷಿ ಅಧಿಕಾರಿ ಸರೋಜಿನಿ ಅವರಿಗೆ ಮನವಿ ಸಲ್ಲಿಸಲಾಯಿತು.

15–20 ದಿನಗಳಲ್ಲಿ ಹಣ ಜಮೆ: ಅಧಿಕಾರಿಗಳ ಭರವಸೆ

ರೈತರ ಮನವಿ ಸ್ವೀಕರಿಸಿದ ಅಧಿಕಾರಿಗಳು, ಬೆಳೆ ವಿಮೆ ಹಣ ಜಮೆ ಮಾಡುವ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದ್ದು, ಇನ್ನೂ 15ರಿಂದ 20 ದಿನಗಳೊಳಗಾಗಿ ಅರ್ಹ ರೈತರ ಖಾತೆಗಳಿಗೆ ಹಣ ಜಮೆಯಾಗಲಿದೆ ಎಂದು ಭರವಸೆ ನೀಡಿದರು.

ಆದರೆ, ಅಧಿಕಾರಿಗಳ ಭರವಸೆಯಿಂದ ಸಂಪೂರ್ಣ ತೃಪ್ತರಾಗದ ಪ್ರತಿಭಟನಾಕಾರರು, ನಿಗದಿತ ಅವಧಿಯಲ್ಲಿ ಹಣ ಜಮೆಯಾಗದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಸಿದರು.

ಬೆಳೆ ನಷ್ಟದಿಂದ ಈಗಾಗಲೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಬೆಳೆ ವಿಮೆ ಹಣವೂ ಸಮಯಕ್ಕೆ ದೊರೆಯದಿರುವುದು ಮತ್ತಷ್ಟು ಸಮಸ್ಯೆ ತಂದಿದೆ. ವಿಮೆ ಹಣಕ್ಕಾಗಿ ರೈತರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ದಾಖಲೆ ಪರಿಶೀಲನೆ ಹಾಗೂ ಹಣ ಜಮೆ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಒತ್ತಾಯಿಸಿದರು.

ಗದಗೇಶ್ವರ ಮಠದ ನಿಂಬರ್ಗಾದ ಶ್ರೀ ನೀಲಕಂಠ ಶಿವಾಚಾರ್ಯರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಕ.ರ.ವೇ ನಿಂಬರ್ಗಾ ವಲಯ ಅಧ್ಯಕ್ಷ ಬಸವರಾಜ ಯಳಸಂಗಿ, ಕರ್ನಾಟಕ ರಾಜ್ಯ ರೈತ ಸಂಘದ ನಿಂಬರ್ಗಾ ಅಧ್ಯಕ್ಷ ಧರ್ಮರಾಯ ಕಾಮಣಗೊಳ, ರೈತ ಸಂಘದ ತಾಲ್ಲೂಕು ಉಪಾಧ್ಯಕ್ಷ ಮಲ್ಲಿನಾಥ ಗುಗೊಂಡ ಸೇರಿದಂತೆ ಹಲವರು ಭಾಗವಹಿಸಿದ್ದರು.

ಪ್ರತಿಭಟನೆಯಲ್ಲಿ ಮಹಿಂದ್ರ ನಿರ್ಮಲ್ಕರ, ಶ್ರೀಮಂತ ವಗ್ದರ್ಗಿ, ಉಮಾಕಾಂತ ತೋಟಪಗೊಳ, ಅಮೃತ ಬಿಬ್ರಾಣಿ, ಸೂರ್ಯಕಾಂತ ಕಂಟೇಕುರ, ಭಾಗಣ್ಣ ದುಗೊಂಡ, ಸಂಗಣ್ಣ ಗವಣಗೊಳ, ಸಿದ್ದಾರಾಮ ಅಷ್ಟಗಿ, ಮೇಘರಾಜ, ಪ್ರಭು ಬಿಬ್ರಾಣಿ, ಉಮೇಶ್ ವಗ್ದರ್ಗಿ, ಅರವಿಂದ ಬಣಗಾರ, ಶಂಕರ ನಾಗೂರ, ಗುರು ಕಾಮಣಗೊಳ, ಸಾತಣ್ಣ ಮಂಟಗಿ, ಮಹೇಶ್ ಗವಣಗೊಳ, ದಿಗಂಬರ ಕುಲಕರ್ಣಿ, ಸಿದ್ದಾರಾಮ ನಿಗಶೆಟ್ಟಿ, ಶಿವಶರಣ ವಗ್ದರ್ಗಿ, ಧರ್ಮರಾಯ ಹೊಸಮನಿ, ಬೊಮ್ಮನಳ್ಳಿ ಸೇರಿದಂತೆ ನೂರಾರು ರೈತರು ಉಪಸ್ಥಿತರಿದ್ದರು.

Tags

protestfarmersAland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X