Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Aland | ಜಮಗಾ ಜೆ ಸೋಲಾರ್ ಯೋಜನೆ...

Aland | ಜಮಗಾ ಜೆ ಸೋಲಾರ್ ಯೋಜನೆ ವಿರೋಧಿಸಿ 7ನೇ ದಿನಕ್ಕೆ ಕಾಲಿಟ್ಟ ರೈತರ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ16 Sept 2026 6:48 PM IST
share
Aland | ಜಮಗಾ ಜೆ ಸೋಲಾರ್ ಯೋಜನೆ ವಿರೋಧಿಸಿ 7ನೇ ದಿನಕ್ಕೆ ಕಾಲಿಟ್ಟ ರೈತರ ಸತ್ಯಾಗ್ರಹ

ಆಳಂದ: ತಾಲೂಕಿನ ಜಮಗಾ ಜೆ ಗ್ರಾಮದ ಸಮೀಪ ಸೋಲಾರ್ ಕಂಪನಿಗಳ ವಿರುದ್ಧ ರೈತರು ನಡೆಸುತ್ತಿರುವ ಸತ್ಯಾಗ್ರಹ ಬುಧವಾರ ಏಳನೇ ದಿನಕ್ಕೆ ಕಾಲಿಟ್ಟಿದೆ. ಜಮೀನು, ಭೂಹಕ್ಕು, ವಿದ್ಯುತ್ ಪ್ರಸರಣ ಕಾಮಗಾರಿ ಹಾಗೂ ಕಂಪನಿಗಳ ಕಾರ್ಯವೈಖರಿಗೆ ಸಂಬಂಧಿಸಿದ ಹಲವು ಸಮಸ್ಯೆಗಳಿಗೆ ಪರಿಹಾರ ಕೋರಿ ರೈತರು ನಿರಂತರ ಧರಣಿ ಮುಂದುವರಿಸಿದ್ದಾರೆ.

ಜಮೀನು ಮತ್ತು ವಿದ್ಯುತ್ ಪ್ರಸರಣ ಕಾಮಗಾರಿಗೆ ಸಂಬಂಧಿಸಿದಂತೆ ಹಲವು ಬಾರಿ ಅಹವಾಲು ಸಲ್ಲಿಸಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕಂಪನಿ ಪ್ರತಿನಿಧಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ.

ರೈತರ ಸಮಸ್ಯೆಗಳನ್ನು ಸ್ಥಳಕ್ಕೆ ಭೇಟಿ ನೀಡಿ ಆಲಿಸಿ, ಸಂಬಂಧಪಟ್ಟ ಇಲಾಖೆಗಳು ಮತ್ತು ಕಂಪನಿ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕಿದ್ದ ಜಿಲ್ಲಾಡಳಿತ ಇದುವರೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಏಳು ದಿನಗಳ ಸತ್ಯಾಗ್ರಹದ ಬಳಿಕವೂ ಯಾವುದೇ ಸ್ಪಷ್ಟ ಪರಿಹಾರ ದೊರೆಯದ ಹಿನ್ನೆಲೆಯಲ್ಲಿ ಪವರ್ ಸ್ಟೇಷನ್‌ಗೆ ಮುತ್ತಿಗೆ ಹಾಕುವ ಹೋರಾಟ ನಡೆಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

ರೈತರ ಹೋರಾಟದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ರೈತರ ಅಹವಾಲುಗಳನ್ನು ಆಲಿಸಿ ಕಾನೂನುಬದ್ಧವಾಗಿ ಸಮಸ್ಯೆ ಬಗೆಹರಿಸಬೇಕು ಎಂದು ಹೋರಾಟಗಾರರು ಒತ್ತಾಯಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಆಳಂದ ತಾಲೂಕಿನ ರೈತರ ಸಮಸ್ಯೆಗಳತ್ತ ಸರ್ಕಾರ ಗಮನಹರಿಸಿ, ಜಿಲ್ಲಾಡಳಿತ, ಸಂಬಂಧಪಟ್ಟ ಇಲಾಖೆಗಳು ಹಾಗೂ ಕಂಪನಿ ಪ್ರತಿನಿಧಿಗಳ ಸಮ್ಮುಖದಲ್ಲಿ ಪಾರದರ್ಶಕ ಚರ್ಚೆ ನಡೆಸಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಸತ್ಯಾಗ್ರಹದಲ್ಲಿ ಸಿದ್ದು ಹಿರೋಳಿ, ಚಂದ್ರಶೇಖರ ಹಿರೇಮಠ, ಅಜೀತ ಕುಲಕರ್ಣಿ, ಮಹೇಶ ಪವಾರ, ಚನ್ನಪ್ಪ ಹತ್ತರ್ಕಿ, ಮಹೇಶ ಕಲಬುರಗಿ, ಉಮೇಶ ಪಾಟೀಲ, ಸಂಜಯ ಮೂಲಗೆ, ಪವನ ಕಲಶೆಟ್ಟಿ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.

Tags

protestfarmersAland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X