ಆಳಂದ | ಜೂನ್10ರಂದು ಭೂಸನೂರದಲ್ಲಿ ಪ್ರಥಮ ಗಡಿನಾಡು ಕನ್ನಡಿಗರ ಉತ್ಸವ

ಆಳಂದ: ನಮ್ಮ ಕರ್ನಾಟಕ ಸೇನೆ ಆಶ್ರಯದಲ್ಲಿ ಪ್ರಥಮ ಗಡಿನಾಡು ಕನ್ನಡಿಗರ ಉತ್ಸವ ಜೂನ್10ರಂದು ಭೂಸನೂರ ಸಕ್ಕರೆ ಕಾರ್ಖಾನೆ ಬಳಿಯ ನೀಲಾಂಬಿಕ ಕಲ್ಯಾಣ ಮಂಟಪದಲ್ಲಿ ಸಂಜೆ 6ಗಂಟೆಗೆ ಅದ್ಧೂರಿಯಾಗಿ ಜರುಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕನ್ನಡಾಭಿಮಾನಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸೇನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ರಮೇಶ ಜಿ. ಜಗತಿ ಅವರು ಮನವಿ ಮಾಡಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಉತ್ಸವ ಕುರಿತು ಪ್ರಚಾರ ಪೋಸ್ಟರ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಶಾಸಕ ಬಿ.ಆರ್. ಪಾಟೀಲ್ ಅವರು ನಾಡದೇವಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವರು. ಮಾಜಿ ಶಾಸಕ ಸುಭಾಷ ಗುತ್ತೇದಾರ ಸಮಾರಂಭದ ಉದ್ಘಾಟನೆ ನೆರವೇರಿಸಲಿದ್ದಾರೆ. ನಮ್ಮ ಕರ್ನಾಟಕ ಸೇನೆ ರಾಜ್ಯಾಧ್ಯಕ್ಷ ಎಂ. ಬಸವರಾಜ ಪಡಕೋಟಿ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.
ಕೃಷಿಕ ಸಮಾಜ ಅಧ್ಯಕ್ಷ ಗುರುಶರಣ ಪಾಟೀಲ ಕೊರಳ್ಳಿ, ಪಿಕೆಪಿಎಸ್ ಅಧ್ಯಕ್ಷ ಬಾಬುರಾವ್ ಪಾಟೀಲ, ಧರ್ಮರಾಜ ಸಾಹು, ಜಿಪಂ ಮಾಜಿ ಸದಸ್ಯ ಹರ್ಷಾನಂದ ಗುತ್ತೇದಾರ, ಉದ್ಯಮಿ ಸಂತೋಷ ಗುತ್ತೇದಾರ, ಚಿತ್ರನಟ ಗಣೇಶರಾವ್ ಕೇಸರ್ಕರ, ಜಿಪಂ ಮಾಜಿ ಅಧ್ಯಕ್ಷ ನಿತೀನ ವಿ. ಗುತ್ತೇದಾರ, ಗ್ರಾಮೀಣ ಶಾಸಕ ಬಸವರಾಜ ಮುತ್ತಿಮುಡ್, ಬಿಜೆಪಿ ಮುಖಂಡ ಚಂದು
ಈ ಸಮಾರಂಭದಲ್ಲಿ ತಾಲೂಕು ಹಾಗೂ ಜಿಲ್ಲೆಯ ರಾಜಕೀಯ ಮುಖಂಡರು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಕನ್ನಡಾಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಸೇನೆಯ ಸಾಮಾಜಿಕ ಜಾಲತಾಣದ ರಾಜ್ಯ ಉಪಾಧ್ಯಕ್ಷ ಶರಣು ವಿ. ಮುನ್ನೊಳ್ಳಿ, ಜಿಲ್ಲಾಧ್ಯಕ್ಷ ಪುನೀತರಾಜ ಕವಡೆ ಸೇರಿದಂತೆ ಇತರರು ಉಪಸ್ಥಿತರಿದ್ದರು.






