Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Aland | ಗಡಿಭಾಗದಲ್ಲಿ ಜಾನುವಾರು ಕಳ್ಳರ...

Aland | ಗಡಿಭಾಗದಲ್ಲಿ ಜಾನುವಾರು ಕಳ್ಳರ ಹಾವಳಿ; ರೈತರಲ್ಲಿ ಆತಂಕ

ವಾರ್ತಾಭಾರತಿವಾರ್ತಾಭಾರತಿ5 July 2026 8:13 PM IST
share
Aland | ಗಡಿಭಾಗದಲ್ಲಿ ಜಾನುವಾರು ಕಳ್ಳರ ಹಾವಳಿ; ರೈತರಲ್ಲಿ ಆತಂಕ
ತೊಡೋಳ–ಖಂಡಾಳದಲ್ಲಿ ಸರಣಿ ಕಳ್ಳತನ; ರಾತ್ರಿ ಗಸ್ತು ಹೆಚ್ಚಿಸಲು ಆಗ್ರಹ

ಆಳಂದ: ಗಡಿಭಾಗದ ತೊಡೋಳ ಹಾಗೂ ಖಂಡಾಳ ಗ್ರಾಮಗಳಲ್ಲಿ ಜಾನುವಾರು ಕಳ್ಳತನದ ಪ್ರಕರಣಗಳು ಹೆಚ್ಚುತ್ತಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ. ಕಳೆದ ಕೆಲ ದಿನಗಳಿಂದ ನಡೆದ ಸರಣಿ ಕಳ್ಳತನಗಳಿಂದ ಗ್ರಾಮೀಣ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಶನಿವಾರ ಹಾಗೂ ಭಾನುವಾರ ಮಧ್ಯರಾತ್ರಿ ಖಂಡಾಳ ಗ್ರಾಮದ ರೈತ ಸಿದ್ದಪ್ಪ ಭೀಮಶ್ಯಾ ಗುರವ್ ಅವರ ಮನೆ ಮುಂಭಾಗದಲ್ಲಿ ಕಟ್ಟಿದ್ದ ಮೂರು ಹಸುಗಳನ್ನು ಕಳ್ಳರು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ. ಇದೇ ವೇಳೆ ತೊಡೋಳ ಗ್ರಾಮದ ರೈತ ವಿಜಯ ಅವರಿಗೆ ಸೇರಿದ ಎರಡು ಎತ್ತುಗಳನ್ನೂ ಕಳ್ಳರು ಕದ್ದೊಯ್ದಿದ್ದಾರೆ. ಇದಕ್ಕೂ ಮುನ್ನ ತೊಡೋಳ ಗ್ರಾಮದಲ್ಲಿಯೇ ಎರಡು ಎಮ್ಮೆಗಳನ್ನು ಕಳ್ಳತನ ಮಾಡಲಾಗಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ರಾತ್ರಿ ವೇಳೆ ವಾಹನಗಳಲ್ಲಿ ಜಾನುವಾರುಗಳನ್ನು ತುಂಬಿಕೊಂಡು ಕಳ್ಳರು ಪರಾರಿಯಾಗುತ್ತಿರುವ ಹಿನ್ನೆಲೆಯಲ್ಲಿ ಗಡಿಭಾಗದಲ್ಲಿ ಸಂಘಟಿತ ಜಾನುವಾರು ಕಳ್ಳರ ಜಾಲ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದೆ.

ಮಳೆ ಕೊರತೆ, ಬಿತ್ತನೆ ವಿಳಂಬ ಹಾಗೂ ಬೆಳೆ ನಷ್ಟದಿಂದ ಈಗಾಗಲೇ ಸಂಕಷ್ಟದಲ್ಲಿರುವ ರೈತರಿಗೆ ಜಾನುವಾರು ಕಳ್ಳತನ ಮತ್ತೊಂದು ಆರ್ಥಿಕ ಹೊಡೆತ ನೀಡಿದೆ. ಕೃಷಿ ಚಟುವಟಿಕೆಗಳಿಗೆ ಆಧಾರವಾಗಿರುವ ಜಾನುವಾರುಗಳನ್ನು ಕಳೆದುಕೊಂಡ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ಶೀಘ್ರ ಬಂಧಿಸಬೇಕು. ಗಡಿಭಾಗದಲ್ಲಿ ರಾತ್ರಿ ಗಸ್ತು ಹೆಚ್ಚಿಸಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು. ಜಾನುವಾರು ಕಳೆದುಕೊಂಡ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ತೊಡೋಳ ಗ್ರಾಮದ ರೈತ ವಿಶ್ವನಾಥ್ ಪಾಟೀಲ್ ಹಾಗೂ ಖಂಡಾಳ ಗ್ರಾಮದ ಗುರುನಾಥ್ ಬಿರಾಜ್ದಾರ್ ಒತ್ತಾಯಿಸಿದ್ದಾರೆ.

ಈ ಸಂಬಂಧ ರೈತರು ಆಳಂದ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Tags

Aland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X