Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Aland | ಪಿಜಿ ಪ್ರವೇಶ ಪ್ರಕ್ರಿಯೆಗೆ...

Aland | ಪಿಜಿ ಪ್ರವೇಶ ಪ್ರಕ್ರಿಯೆಗೆ ‘ಮೆರಿಟ್ ಲಿಸ್ಟ್ ಜನರೇಷನ್ ವೆಬ್ ಪೋರ್ಟಲ್’ ಚಾಲನೆ

ವಾರ್ತಾಭಾರತಿವಾರ್ತಾಭಾರತಿ17 Jun 2026 7:41 PM IST
share
Aland | ಪಿಜಿ ಪ್ರವೇಶ ಪ್ರಕ್ರಿಯೆಗೆ ‘ಮೆರಿಟ್ ಲಿಸ್ಟ್ ಜನರೇಷನ್ ವೆಬ್ ಪೋರ್ಟಲ್’ ಚಾಲನೆ

ಆಳಂದ: ತಾಲೂಕಿನ ಕಡಗಂಚಿ ಬಳಿಯಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ) 2026–27ನೇ ಶೈಕ್ಷಣಿಕ ವರ್ಷದ ಸ್ನಾತಕೋತ್ತರ (ಪಿಜಿ) ಪ್ರವೇಶ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕ ಹಾಗೂ ತಂತ್ರಜ್ಞಾನ ಆಧಾರಿತಗೊಳಿಸುವ ಉದ್ದೇಶದಿಂದ ‘ಮೆರಿಟ್ ಲಿಸ್ಟ್ ಜನರೇಷನ್ ವೆಬ್ ಪೋರ್ಟಲ್’ಗೆ ಚಾಲನೆ ನೀಡಿದೆ.

ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಅವರು ಪೋರ್ಟಲ್ ಉದ್ಘಾಟಿಸಿ ಮಾತನಾಡಿ, ಹೊಸ ವ್ಯವಸ್ಥೆಯು ಪ್ರವೇಶ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ದಕ್ಷತೆ ಹಾಗೂ ನಿಖರತೆಯನ್ನು ಹೆಚ್ಚಿಸುವುದರ ಜೊತೆಗೆ ಮಾನವೀಯ ಹಸ್ತಕ್ಷೇಪವನ್ನು ಕಡಿಮೆಗೊಳಿಸಿ, ದೋಷರಹಿತ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲು ನೆರವಾಗಲಿದೆ ಎಂದು ತಿಳಿಸಿದರು.

ವೆಬ್ ಆಧಾರಿತ ಈ ಪೋರ್ಟಲ್‌ನಲ್ಲಿ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳು, ಕೋರ್ಸುಗಳು, ಸೀಟುಗಳ ಹಂಚಿಕೆ, ಪ್ರವೇಶ ಸುತ್ತುಗಳು, ವರ್ಗ ಹಾಗೂ ಜಾತಿವಾರು ಮೀಸಲಾತಿ ಸೇರಿದಂತೆ ಅಗತ್ಯ ಮಾಹಿತಿಯನ್ನು ಸ್ವಯಂಚಾಲಿತವಾಗಿ ಸಂಗ್ರಹಿಸಿ ಅಂತಿಮ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸುವ ವ್ಯವಸ್ಥೆ ಅಳವಡಿಸಲಾಗಿದೆ.

ಈ ತಂತ್ರಾಂಶದ ಬಳಕೆಯಿಂದ ಪ್ರವೇಶ ಪ್ರಕ್ರಿಯೆಯಲ್ಲಿನ ದೋಷಗಳು ಕಡಿಮೆಯಾಗಲಿದ್ದು, ಸಮಯದ ಉಳಿತಾಯವೂ ಆಗಲಿದೆ. ವಿದ್ಯಾರ್ಥಿಗಳಿಗೆ ವೇಗವಾಗಿ ಹಾಗೂ ಪಾರದರ್ಶಕವಾಗಿ ಪ್ರವೇಶ ಪ್ರಕ್ರಿಯೆ ಪೂರ್ಣಗೊಳ್ಳಲು ಇದು ಸಹಕಾರಿಯಾಗಲಿದೆ ಎಂದು ಕುಲಪತಿಗಳು ಹೇಳಿದರು.

ಅಲ್ಲದೆ, ಅಧ್ಯಾಪಕರು ಹಾಗೂ ಪ್ರವೇಶಾತಿ ಸಂಯೋಜಕರ ಮೇಲಿನ ಕಾರ್ಯಭಾರವೂ ಗಣನೀಯವಾಗಿ ಕಡಿಮೆಯಾಗಲಿದ್ದು, ಪ್ರವೇಶ ವ್ಯವಸ್ಥೆಯ ಗುಣಮಟ್ಟ ಮತ್ತಷ್ಟು ಸುಧಾರಿಸಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಪೋರ್ಟಲ್ ಉದ್ಘಾಟನೆಯ ಬಳಿಕ ಅಧ್ಯಾಪಕರು ಮತ್ತು ಪ್ರವೇಶಾತಿ ಸಂಯೋಜಕರಿಗೆ ತರಬೇತಿ ಕಾರ್ಯಕ್ರಮವನ್ನು ಸಹ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಪ್ರವೇಶಾತಿ ವಿಭಾಗದ ಅಧ್ಯಕ್ಷರು ಹಾಗೂ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಕೆ. ಹನುಮೇಗೌಡ ಸ್ವಾಗತಿಸಿದರು. ಸಮಾಜ ಕಾರ್ಯ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಚನ್ನವೀರ ವಂದಿಸಿದರು.

ಈ ಸಂದರ್ಭದಲ್ಲಿ ಕುಲಸಚಿವ ಪ್ರೊ. ಆರ್.ಆರ್. ಬಿರಾದಾರ್, ಪರೀಕ್ಷಾ ನಿಯಂತ್ರಕ ಪ್ರೊ. ಭರತ್ ಕುಮಾರ್, ಸ್ನಾತಕೋತ್ತರ ಪ್ರವೇಶಾತಿ ಸಂಯೋಜಕ ಪ್ರೊ. ಜಿ.ಆರ್. ಅಂಗಡಿ, ಪದವಿ ಪ್ರವೇಶಾತಿ ಸಂಯೋಜಕ ಡಾ. ಪರಶುರಾಮ ಎಂ. ಕಾಂಬಳೆ, ಸಮರ್ಥ ಪೋರ್ಟಲ್ ತಾಂತ್ರಿಕ ಸಿಬ್ಬಂದಿಗಳಾದ ಶ್ರವಣಕುಮಾರ್ ಹಾಗೂ ಸುರಜಿತ್ ಸೇರಿದಂತೆ ವಿವಿಧ ವಿಭಾಗಗಳ ಡೀನ್‌ಗಳು, ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Tags

Aland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X