Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Aland | ವೀರಯೋಧನ ಸೇವೆ ಯುವಕರಿಗೆ...

Aland | ವೀರಯೋಧನ ಸೇವೆ ಯುವಕರಿಗೆ ಪ್ರೇರಣೆ: ಅಭಿನವ ಶಿವಲಿಂಗ ಮಹಾಸ್ವಾಮಿಗಳು

ಎರಡು ದಶಕಗಳ ಸೇನಾ ಸೇವೆಯಿಂದ ನಿವೃತ್ತರಾಗಿ ಸ್ವಗ್ರಾಮಕ್ಕೆ ಮರಳಿದ ಯೋಧನಿಗೆ ಅದ್ಧೂರಿ ಸನ್ಮಾನ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ17 Nov 2026 7:39 PM IST
share
Aland | ವೀರಯೋಧನ ಸೇವೆ ಯುವಕರಿಗೆ ಪ್ರೇರಣೆ: ಅಭಿನವ ಶಿವಲಿಂಗ ಮಹಾಸ್ವಾಮಿಗಳು

ಆಳಂದ: ದೇಶಸೇವೆಯಲ್ಲಿ ತೊಡಗಿ, ಸಾವಿಗೂ ಅಂಜದೆ ಗಡಿಯಲ್ಲಿ ಕರ್ತವ್ಯ ನಿರ್ವಹಿಸಿದ ಸಮರಭೈರವಿ ಶಾಂತಲಿಂಗ ಘಂಟೆ ಅವರು ಎರಡು ದಶಕಗಳ ಸೇನಾ ಸೇವೆಯಿಂದ ನಿವೃತ್ತರಾಗಿ ಸ್ವಗ್ರಾಮಕ್ಕೆ ಮರಳಿರುವುದು ದರ್ಗಾಶಿರೂರ ಗ್ರಾಮದಲ್ಲಿ ಹಬ್ಬದ ಸಂಭ್ರಮ ಮೂಡಿಸಿದೆ ಎಂದು ಮಾದನಹಿಪ್ಪರಗಿಯ ಶ್ರೀ ಅಭಿನವ ಶಿವಲಿಂಗ ಮಹಾಸ್ವಾಮಿಗಳು ಹೇಳಿದರು.

ತಾಲೂಕಿನ ದರ್ಗಾಶಿರೂರ ಗ್ರಾಮದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ನಿವೃತ್ತ ಯೋಧ ಶಾಂತಲಿಂಗ ಎಸ್. ಘಂಟೆ ಅವರ ಅಭಿನಂದನಾ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ದೇಶದ ಗಡಿಗಳನ್ನು ಕಾಯುವ ಸೈನಿಕರ ಸೇವೆ, ತ್ಯಾಗ ಮತ್ತು ಧೈರ್ಯವನ್ನು ಸಮಾಜ ಸದಾ ಸ್ಮರಿಸಬೇಕು. ಇಂತಹ ವೀರಯೋಧರನ್ನು ಗೌರವಿಸುವುದರಿಂದ ಮುಂದಿನ ಪೀಳಿಗೆಗೆ ದೇಶಪ್ರೇಮದ ಪ್ರೇರಣೆ ನೀಡಿದಂತಾಗುತ್ತದೆ ಎಂದರು.

ಡಾ. ಮೋನಪ್ಪ ಎಲ್. ಸುತಾರ ಪ್ರಾಸ್ತಾವಿಕವಾಗಿ ಮಾತನಾಡಿ, ದೇಶಸೇವೆಯಲ್ಲಿ ತೊಡಗಿರುವ ಯೋಧರನ್ನು ಗೌರವಿಸುವುದು, ದೇಶಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ವೀರರಿಗೆ ಕೃತಜ್ಞತೆ ಸಲ್ಲಿಸುವುದು ಹಾಗೂ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಆಶಯದೊಂದಿಗೆ ಅಭಿನಂದನಾ ಸಮಾರಂಭವನ್ನು ಅದ್ಧೂರಿಯಾಗಿ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಪ್ರಾಚಾರ್ಯ ಸಂಜಯ ಎಸ್. ಪಾಟೀಲ ಮಾತನಾಡಿ, ಆಳಂದ ತಾಲೂಕಿನಲ್ಲಿ ಭಾರತೀಯ ಸೇನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕರನ್ನು ಕಳುಹಿಸಿದ ಗ್ರಾಮಗಳಲ್ಲಿ ದರ್ಗಾಶಿರೂರ ಪ್ರಮುಖ ಸ್ಥಾನ ಪಡೆದಿದೆ. ಕಾರ್ಗಿಲ್ ಯುದ್ಧದಲ್ಲಿ ವೀರಮರಣವನ್ನಪ್ಪಿದ ಯೋಧ ಗುರುಬಸಪ್ಪ ಘಂಟೆ ಅವರ ಹೆಸರನ್ನು ಗ್ರಾಮದ ಪ್ರೌಢಶಾಲೆಗೆ ನಾಮಕರಣ ಮಾಡಿರುವುದು ಗ್ರಾಮಸ್ಥರ ದೇಶಭಕ್ತಿ ಹಾಗೂ ಸೈನಿಕರ ಬಗೆಗಿನ ಗೌರವಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮೈಂದರ್ಗಿಯ ಶ್ರೀ ಮಹಾಂತ ಮಹಾಸ್ವಾಮಿಗಳು ಹಾಗೂ ಚಲಗೇರಿಯ ಶ್ರೀ ಶಾಂತವೀರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಮಾತನಾಡಿದರು. ಈ ವೇಳೆ ಬಾಲ್ಯದ ಸ್ನೇಹವನ್ನು ಸ್ಮರಿಸಿದರು. ರತ್ನಾಬಾಯಿ ಜಿ. ಘಂಟೆ ಅಧ್ಯಕ್ಷತೆ ವಹಿಸಿದ್ದರು.

ಬೀದರ್ ಪಿಐ ಸಂಗಮೇಶ ಘಂಟೆ, ನಿವೃತ್ತ ಸೈನಿಕರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬೀರಾದಾರ, ತಾಲೂಕು ಅಧ್ಯಕ್ಷ ಸಿದ್ಧಲಿಂಗ ಮಲಶೆಟ್ಟಿ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನಿವೃತ್ತ ಯೋಧರನ್ನು ಸನ್ಮಾನಿಸಿ ಗೌರವಿಸಲಾಯಿತು.

ಆಯೋಜಕರಾದ ಸಿದ್ಧಲಿಂಗ ಸುತಾರ, ಗುರು ಬಟ್ಟರಕಿ, ರಾಮೇಶ್ವರ ಪಾಟೀಲ, ರಾಚಣ್ಣ ಗೋಗಾಯಿ, ಶಿವಬಸವ ಪಾಟೀಲ, ಶಿವಾನಂದ ಸುತಾರ, ಸಂಜಯ ಮುಲಗೆ, ಅನಿಲಕುಮಾರ ಜಕಾಪುರೆ, ಭೀಮಾಶಂಕರ ಜಕಾಪುರೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಭೀಮಾಶಂಕರ ಘಂಟೆ, ಶಿವಲಿಂಗಪ್ಪ ಪಾಟೀಲ, ಬಸವರಾಜ ಬಟ್ಟರಕಿ ಹಾಗೂ ಶಾಂತಲಿಂಗ ಬಿಲಗುಂದಿ ಸಂಗೀತ ಸೇವೆ ಸಲ್ಲಿಸಿದರು. ಶಿವಲಿಂಗಪ್ಪ ಮಂಟಗಿ ನಿರೂಪಿಸಿದರು. ಸುರೇಶ ಘಂಟೆ ವಂದಿಸಿದರು.

Tags

KalaburagiyouthAland
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X