Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Aland | ಮಹಿಳೆಯರ ಮೂಲಸೌಕರ್ಯಕ್ಕಾಗಿ...

Aland | ಮಹಿಳೆಯರ ಮೂಲಸೌಕರ್ಯಕ್ಕಾಗಿ ಅ.6ರಿಂದ ಏಕವ್ಯಕ್ತಿ ಪಾದಯಾತ್ರೆ

ವಾರ್ತಾಭಾರತಿವಾರ್ತಾಭಾರತಿ4 Aug 2026 6:53 PM IST
share
Aland | ಮಹಿಳೆಯರ ಮೂಲಸೌಕರ್ಯಕ್ಕಾಗಿ ಅ.6ರಿಂದ ಏಕವ್ಯಕ್ತಿ ಪಾದಯಾತ್ರೆ

ಆಳಂದ : ಮಹಿಳೆಯರಿಗೆ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಹೇಶ್ವರಿ ಎಸ್. ವಾಲಿ ಅವರು ಅಕ್ಟೋಬರ್ 6ರಿಂದ ಆಳಂದದಿಂದ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿವರೆಗೆ ಸುಮಾರು 50 ಕಿಲೋಮೀಟರ್ ಏಕವ್ಯಕ್ತಿ ಕಾಲ್ನಡಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ರಫೀಕ್ ಇನಾಮದಾರ ತಿಳಿಸಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರು ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳನ್ನು ಸರ್ಕಾರ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಯಾವುದೇ ಪಕ್ಷ, ಜಾತಿ ಅಥವಾ ರಾಜಕೀಯ ಭೇದವಿಲ್ಲದೆ ಈ ಪಾದಯಾತ್ರೆ ಆಯೋಜಿಸಲಾಗಿದೆ ಎಂದು ಹೇಳಿದರು.

ಕ್ಷೇತ್ರದ ಅನೇಕ ಗ್ರಾಮಗಳಲ್ಲಿ ಮಹಿಳೆಯರಿಗೆ ಸಮರ್ಪಕ ಶೌಚಾಲಯಗಳಿಲ್ಲದೆ ಇಂದಿಗೂ ಬಯಲು ಪ್ರದೇಶದಲ್ಲೇ ಬಹಿರ್ದೆಸೆಗೆ ತೆರಳಬೇಕಾದ ಪರಿಸ್ಥಿತಿ ಇದೆ. ರಸ್ತೆ ಬದಿಗಳು, ಮುಳ್ಳು-ಕಂಟೆಗಳು ಹಾಗೂ ಕೆಸರಿನ ನಡುವೆ ಶೌಚಕ್ರಿಯೆ ನಡೆಸಬೇಕಾಗುತ್ತಿರುವುದು ಮಹಿಳೆಯರ ಘನತೆಗೆ ಧಕ್ಕೆ ತರುತ್ತಿದೆ. ವಾಹನ ಸಂಚಾರದ ವೇಳೆ ಅವಮಾನಕರ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತಿದೆ ಎಂದು ಅವರು ಹೇಳಿದರು.

ಸರ್ಕಾರದಿಂದ ಶೌಚಾಲಯ ನಿರ್ಮಾಣಕ್ಕೆ ಬಿಡುಗಡೆಯಾದ ಅನುದಾನ ಸಮರ್ಪಕವಾಗಿ ಬಳಕೆಯಾಗಿಲ್ಲ. ಹಲವೆಡೆ ಶೌಚಾಲಯಗಳೇ ಇಲ್ಲದಿದ್ದರೆ, ನಿರ್ಮಾಣಗೊಂಡಿರುವ ಶೌಚಾಲಯಗಳಲ್ಲಿ ನೀರು ಹಾಗೂ ಅಗತ್ಯ ಮೂಲಸೌಕರ್ಯಗಳ ಕೊರತೆಯಿಂದ ಅವು ಬಳಕೆಗೆ ಯೋಗ್ಯವಾಗಿಲ್ಲ. ಇದರಿಂದ ಮಹಿಳೆಯರು ಇಂದಿಗೂ ರಾತ್ರಿ ವೇಳೆಯಲ್ಲೇ ಶೌಚಕ್ರಿಯೆ ನಡೆಸುವ ಅನಿವಾರ್ಯ ಸ್ಥಿತಿ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಅಕ್ಟೋಬರ್ 6ರಂದು ಬೆಳಿಗ್ಗೆ 10 ಗಂಟೆಗೆ ಆಳಂದ ಬಸ್ ನಿಲ್ದಾಣದಿಂದ ಪಾದಯಾತ್ರೆ ಆರಂಭವಾಗಿ ಕೊಡಲಹಂಗರಾ, ಲಾಡಚಿಂಚೋಳಿ ಹಾಗೂ ಕಡಗಂಚಿ ಮಾರ್ಗವಾಗಿ ಮೊದಲ ದಿನ ಸಾಗಲಿದೆ. ಬಳಿಕ ಅಕ್ಟೋಬರ್ 7ರಂದು ಕಲಬುರಗಿಗೆ ತಲುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಈ ಹೋರಾಟ ಪಕ್ಷಾತೀತ ಹಾಗೂ ಜನಪರವಾಗಿದ್ದು, ಮಹಿಳೆಯರು, ಯುವಕರು, ವಿದ್ಯಾರ್ಥಿಗಳು, ಸಾಮಾಜಿಕ ಕಾರ್ಯಕರ್ತರು, ಧಾರ್ಮಿಕ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಂಬಲ ನೀಡುವಂತೆ ರಫೀಕ್ ಇನಾಮದಾರ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಹೇಶ್ವರಿ ಎಸ್. ವಾಲಿ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Tags

Aland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X