Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Aland | ಸಾಮಾಜಿಕ ಪರಿವರ್ತನೆಗೆ ಶಿಕ್ಷಕರ...

Aland | ಸಾಮಾಜಿಕ ಪರಿವರ್ತನೆಗೆ ಶಿಕ್ಷಕರ ಪಾತ್ರ ಮಹತ್ವದ್ದು: ಸುಭಾಷ್ ಗುತ್ತೇದಾರ

ವಾರ್ತಾಭಾರತಿವಾರ್ತಾಭಾರತಿ14 July 2026 8:23 PM IST
share
Aland | ಸಾಮಾಜಿಕ ಪರಿವರ್ತನೆಗೆ ಶಿಕ್ಷಕರ ಪಾತ್ರ ಮಹತ್ವದ್ದು: ಸುಭಾಷ್ ಗುತ್ತೇದಾರ
ನಿವೃತ್ತ ಶಿಕ್ಷಕಿ ನೀಲಾವತಿ ಪಾಟೀಲರಿಗೆ ಅಭಿನಂದನೆ, ‘ಹೃದಯಾಂತರಾಳದ ಮಾತುಗಳು’ ಕೃತಿ ಲೋಕಾರ್ಪಣೆ

ಆಳಂದ, ಜು.14: ಸಾಮಾಜಿಕ ಸ್ವಾಸ್ಥ್ಯ ಹಾಗೂ ಪರಿವರ್ತನೆಗೆ ಶಿಕ್ಷಕರಿಂದಲೇ ಸಾಧ್ಯ ಎಂದು ಮಾಜಿ ಶಾಸಕ ಸುಭಾಷ್ ಆರ್. ಗುತ್ತೇದಾರ ಹೇಳಿದರು.

ತಾಲೂಕಿನ ಭೂಸನೂರ ಗ್ರಾಮದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ನೀಲಾವತಿ ಬಿ. ಪಾಟೀಲ ಅವರ ಅಭಿನಂದನಾ ಸಮಾರಂಭ ಹಾಗೂ ‘ಹೃದಯಾಂತರಾಳದ ಮಾತುಗಳು’ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದ ಬಗ್ಗೆ ಕಾಳಜಿ ಹೊಂದಿರುವವರಿಂದ ಮಾತ್ರ ನಿಜವಾದ ಪ್ರಗತಿ ಸಾಧ್ಯವಾಗುತ್ತದೆ ಎಂದು ಹೇಳಿದರು.

ನೀಲಾವತಿ ಪಾಟೀಲ ಅವರು ಮೂರು ದಶಕಗಳ ಕಾಲ ಶಿಕ್ಷಣ ಕ್ಷೇತ್ರದ ಜೊತೆಗೆ ಸಾಮಾಜಿಕ, ಧಾರ್ಮಿಕ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲೂ ವಿಶಿಷ್ಟ ಸೇವೆ ಸಲ್ಲಿಸಿದ್ದಾರೆ. ಅವರ ಆದರ್ಶ ವ್ಯಕ್ತಿತ್ವ, ಸಮಾಜಮುಖಿ ಚಿಂತನೆ ಮತ್ತು ದಾಸೋಹ ಮನೋಭಾವವು ಅವರನ್ನು ಆದರ್ಶ ಶಿಕ್ಷಕಿಯನ್ನಾಗಿ ರೂಪಿಸಿದೆ ಎಂದು ಶ್ಲಾಘಿಸಿದರು.

ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ, ಸಮಾಜಕ್ಕೆ ಉತ್ತಮ ನಾಗರಿಕರನ್ನು ರೂಪಿಸುವ ಶಿಲ್ಪಿಗಳಾಗಿದ್ದು, ಅವರ ಸೇವೆ ಸಮಾಜದ ಅಭಿವೃದ್ಧಿಗೆ ಪ್ರಮುಖ ಕೊಡುಗೆಯಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಹೃದಯಾಂತರಾಳದ ಮಾತುಗಳು ಕೃತಿಯನ್ನು ಚೌಡಾಪೂರದ ಶ್ರೀ ವೀರ ಮಹಾಂತೇಶ್ವರ ಶಿವಾಚಾರ್ಯರು ಜನಾರ್ಪಣೆಗೊಳಿಸಿ, ಬಹುಮುಖ ವ್ಯಕ್ತಿತ್ವದ ನೀಲಾವತಿ ಪಾಟೀಲ ಅವರ ಶಿಕ್ಷಕ ವೃತಿ ಜೀವನ ತುಂಬಾ ಅಪರೂಪವಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಶ್ರೀ ಅಭಿನವ ಶಿವಲಿಂಗ ಮಹಾಸ್ವಾಮಿಗಳು, ಶೀ ಶ್ರೀಕಂಠ ಶಿವಾಚಾರ್ಯರು, ಶ್ರೀ ಬಸವಲಿಂಗ ಶಿವಾಚಾರ್ಯರು, ಸಾಹಿತಿ ಧರ್ಮಣ್ಣ ಎಚ್ ಧನ್ನಿ, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಭರತರಾಜ ಸಾವಳಗಿ, ಕರ್ನಾಟಕ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ರೇಣುಕಾ ಡಾಂಗೆ, ಸಾವಿತ್ರಿಬಾಯಿ ಫುಲೆ ಶಿಕ್ಷಕಿರಿಯರ ಸಂಘಧ್ಯಕ್ಷೆ ಶೈಲಜಾ ಪೋಮಾಜಿ, ಮುಖಂಡರಾದ ಬಾಬುರಾವ ಪಾಟೀಲ, ರಾಜಶೇಖರ ಪಾಟೀಲ, ನರಸಪ್ಪ ಬಿರಾದಾರ, ರೇವಣಸಿದ್ದಪ್ಪ ಪಟ್ನೆ, ರಾಜಶೇಖರ ಯಂಕoಚಿ ಸೇರಿದಂತೆ ಅನೇಕ ಗಣ್ಯರು, ಕಲಾವಿದರು ಭಾಗವಹಿಸಿದರು.

ನಂತರ ಶಿಕ್ಷಕಿ ನೀಲಾವತಿ ಬಿ ಪಾಟೀಲ ಅವರಿಗೆ ಶಿಕ್ಷಣ ಇಲಾಖೆ ಹಾಗೂ ಭೂಸನೂರ ಗ್ರಾಮಸ್ಥರಿಂದ ಅದ್ಧೂರಿಯಾಗಿ ಸನ್ಮಾನಿಸಿ ಗೌರವಿಸಿದರು.

Tags

Aland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X