Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Aland | ಶರಣರ ಚಿಂತನೆಗಳು ಇಂದಿಗೂ...

Aland | ಶರಣರ ಚಿಂತನೆಗಳು ಇಂದಿಗೂ ಸಮಾಜಕ್ಕೆ ದಾರಿದೀಪ: ಮಹೇಶ್ವರಿ ವಾಲಿ

ವಾರ್ತಾಭಾರತಿವಾರ್ತಾಭಾರತಿ14 Aug 2026 6:11 PM IST
share
Aland | ಶರಣರ ಚಿಂತನೆಗಳು ಇಂದಿಗೂ ಸಮಾಜಕ್ಕೆ ದಾರಿದೀಪ: ಮಹೇಶ್ವರಿ ವಾಲಿ

ಆಳಂದ: ಜಾತಿ-ಭೇದ, ಬಡವ-ಶ್ರೀಮಂತ ಎಂಬ ತಾರತಮ್ಯವಿಲ್ಲದೆ ಸರ್ವರೂ ಸಮಾನರು ಎಂಬ ಸಂದೇಶವನ್ನು ನಡೆ, ನುಡಿ, ಕಾಯಕ ಹಾಗೂ ದಾಸೋಹದ ಮೂಲಕ ಬದುಕಿನಲ್ಲಿ ಅಳವಡಿಸಿಕೊಂಡ ಬಸವಾದಿ ಶರಣರ ಚಿಂತನೆಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷೆ ಮಹೇಶ್ವರಿ ಎಸ್. ವಾಲಿ ಹೇಳಿದರು.

ಪಟ್ಟಣದ ಶರಣ ಏಕಾಂತರಾಮಯ್ಯ ಮಂದಿರದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಿದ್ದ 14ನೇ ವರ್ಷದ ‘ಶ್ರಾವಣ ಸಂಜೆ’ ಸರಣಿ ಉಪನ್ಯಾಸ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಬಸವಾದಿ ಶರಣರು ಸಮಾನತೆ, ಕಾಯಕ ಹಾಗೂ ದಾಸೋಹದ ತತ್ವಗಳನ್ನು ವಚನಗಳ ಮೂಲಕ ಸಮಾಜಕ್ಕೆ ನೀಡಿದ್ದಾರೆ. ಶರಣರ ವಚನಗಳನ್ನು ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಂಡರೆ ವೈಚಾರಿಕ ಪರಿವರ್ತನೆ ಸಾಧ್ಯವಾಗುತ್ತದೆ ಎಂದು ಹೇಳಿದರು.

ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದಲ್ಲಿ ಅಕ್ಕಮಹಾದೇವಿ, ಮುಕ್ತಾಯಕ್ಕ ಸೇರಿದಂತೆ ಹಲವು ಮಹಿಳಾ ವಚನಕಾರರಿಗೆ ತಮ್ಮ ವಿಚಾರಗಳನ್ನು ಮುಕ್ತವಾಗಿ ವ್ಯಕ್ತಪಡಿಸಲು ಅವಕಾಶ ನೀಡಲಾಗಿತ್ತು. ಇದು ಶರಣರ ಸಮಾನತೆಯ ದೃಷ್ಟಿಕೋನಕ್ಕೆ ಸಾಕ್ಷಿಯಾಗಿದೆ. ಮಹಿಳೆಯರ ಜ್ಞಾನ, ಪ್ರತಿಭೆ ಹಾಗೂ ಚಿಂತನಾ ಶಕ್ತಿಗೆ ಗೌರವ ನೀಡಬೇಕು ಎಂಬ ಸಂದೇಶವನ್ನು ಶರಣರು ಸಾರಿದ್ದಾರೆ ಎಂದು ತಿಳಿಸಿದರು.

ಶರಣರ ನಡೆ-ನುಡಿ, ಆಚಾರ-ವಿಚಾರ ಹಾಗೂ ಕಾಯಕದ ತತ್ವಗಳನ್ನು ಯುವಜನತೆ ಅಳವಡಿಸಿಕೊಂಡರೆ ಸಮಾಜದಲ್ಲಿ ಪರಸ್ಪರ ಗೌರವ, ಸಹಬಾಳ್ವೆ ಮತ್ತು ಸಮಾನತೆಯ ವಾತಾವರಣ ನಿರ್ಮಾಣವಾಗಲಿದೆ. ಶರಣರ ವಚನಗಳನ್ನು ಮನೆ-ಮನೆಗೆ ತಲುಪಿಸುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ತೋಂಟದಾರ್ಯ ಅನುಭವ ಮಂಟಪದ ಸಂಚಾಲಕ ಶ್ರೀ ಕೋರಣೇಶ್ವರ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶರಣರ ಮಾನವೀಯತೆಯ ಸಂದೇಶ ಇಂದಿಗೂ ಪ್ರಸ್ತುತವಾಗಿದ್ದು, ಯುವಜನತೆ ಶರಣರ ವಿಚಾರಧಾರೆಗಳನ್ನು ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪರಿಷತ್ತಿನ ಅಧ್ಯಕ್ಷ ಸಂಜಯ ಪಾಟೀಲ ಕಾರ್ಯಕ್ರಮದ ಉದ್ದೇಶ ಹಾಗೂ ಸರಣಿ ಉಪನ್ಯಾಸದ ಕುರಿತು ವಿವರಿಸಿದರು. ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಶರಣಬಸಪ್ಪ ಪಾಟೀಲ ಮಾತನಾಡಿದರು.

ಈ ಸಂದರ್ಭದಲ್ಲಿ ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಚನ್ನಬಸವ ಕೊರಳ್ಳಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಶರಣರ ವಚನಗಳ ಪುಸ್ತಕಗಳನ್ನು ಹಿಡಿದು ವಚನ ಜಾಗೃತಿ ಜಾಥಾ ನಡೆಸಲಾಯಿತು. ಜೆಪಿ ಪ್ರೌಢಶಾಲೆ ಹಾಗೂ ಪ್ರಾರ್ಥನಾ ಕನ್ನಡ ಶಾಲೆಯ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ರಫೀಕ್ ಇನಾಮದಾರ, ವೈಶಾಲಿ ಪಾಟೀಲ, ಬಾಬುರಾವ ಮಡ್ಡೆ, ಪ್ರಭಾಕರ ಸಲಗರ, ರಮೇಶ ಮಾಡ್ಯಾಳಕರ್, ಅಪ್ಪಾಸಾಹೇಬ ತೀರ್ಥೆ, ಎಲ್.ಎಸ್. ಬೀದಿ, ಭೀಮಾಶಂಕರ ಜಮಗಿ, ಮಲ್ಲಿನಾಥ ಯಲಶೆಟ್ಟಿ, ಸುಭಾಷ ಪಾಟೀಲ, ಮಹಾದೇವಪ್ಪ ಪಾಟೀಲ, ಸಾಹೇಬಗೌಡ ಪಾಟೀಲ, ರಾಜೇಂದ್ರ ಗುಂಡೆ, ಗುರಪ್ಪ ಶಹಾಪುರ, ಸತೀಶ ಸನ್ಮುಖ, ಲಿಂಗರಾಜ ಪಾಟೀಲ, ಶಿವಲಿಂಗಪ್ಪ ಮಂಟಗಿ, ಮಹಾದೇವ ಜಿಡ್ಡೆ, ಸುಖಮನಿ ಪಾಟೀಲ, ಸಿದ್ದರಾಮ ನಂದಗಾಂವ, ಎಂ.ಎಸ್. ವಾಲಿ, ಸಂತೋಷ ವೇದಪಾಠಕ, ಧಾನಮ್ಮ ಶಹಾಪುರ, ಸುರೇಖಾ ಸ್ವಾಮಿ, ಮಹಾನಂದ ತುಕಾಣಿ, ವೀರಭದ್ರಪ್ಪ ಹಾರಕೆ ಹಾಗೂ ಲಕ್ಷ್ಮಿಕಾಂತ ಕೋಣೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯದರ್ಶಿ ರಾಮಣ್ಣ ಸುತಾರ ನಿರೂಪಿಸಿದರು. ಅಪ್ಪಾಸಾಹೇಬ ತೀರ್ಥೆ ಸ್ವಾಗತಿಸಿದರು. ಮಲ್ಲಿನಾಥ ವಚ್ಚೆ ವಂದಿಸಿದರು.

Tags

Aland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X