Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Aland | ಪ್ರೀತಿಸಿದ ಯುವತಿಯೊಂದಿಗೆ...

Aland | ಪ್ರೀತಿಸಿದ ಯುವತಿಯೊಂದಿಗೆ ಮದುವೆ ಮಾಡಿಸುವಂತೆ ಒತ್ತಾಯಿಸಿ ಏರ್‌ಟೆಲ್ ಟವರ್ ಏರಿದ ಯುವಕ

ವಾರ್ತಾಭಾರತಿವಾರ್ತಾಭಾರತಿ27 Sept 2026 9:36 PM IST
share
Aland | ಪ್ರೀತಿಸಿದ ಯುವತಿಯೊಂದಿಗೆ ಮದುವೆ ಮಾಡಿಸುವಂತೆ ಒತ್ತಾಯಿಸಿ ಏರ್‌ಟೆಲ್ ಟವರ್ ಏರಿದ ಯುವಕ

ಆಳಂದ: ಪ್ರೀತಿಸಿದ ಯುವತಿಯೊಂದಿಗೆ ಮದುವೆ ಮಾಡಿಸದಿದ್ದರೆ ಟವರ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿ ಯುವಕನೊಬ್ಬ ಏರ್‌ಟೆಲ್ ಟವರ್ ಏರಿದ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ನಿಂಬರ್ಗಾ ಸಮೀಪದ ಮಾಡಿಯಾಳ ಗ್ರಾಮದಲ್ಲಿ ಶನಿವಾರ ನಡೆದಿದೆ.

ಶಹಾಬಾದ್ ತಾಲೂಕಿನ ತೊನ್ನಸಳ್ಳಿ ಗ್ರಾಮದ ಮಹೇಶ ಮಲ್ಲಪ್ಪ ಭಜಂತ್ರಿ ಟವರ್ ಏರಿದ ಯುವಕ ಎಂದು ಗುರುತಿಸಲಾಗಿದೆ.

ಮಹೇಶ ತನ್ನ ತಾಯಿಯ ತವರುಮನೆಯಾದ ಮಾಡಿಯಾಳ ಗ್ರಾಮಕ್ಕೆ ಶುಕ್ರವಾರ ಬಂದಿದ್ದು, ತಾನು ಪ್ರೀತಿಸಿದ ಯುವತಿಯೊಂದಿಗೆ ಮದುವೆ ಮಾಡಿಸಬೇಕೆಂದು ತಾಯಿಯ ಸಹೋದರರಾದ ರಾಮು ಭಜಂತ್ರಿ ಹಾಗೂ ಭೀಮಾಶಂಕರ ಭಜಂತ್ರಿ ಅವರ ಬಳಿ ಮನವಿ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇದಕ್ಕೆ ಅವರು, ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾತನಾಡೋಣ ಎಂದು ಸಮಾಧಾನಪಡಿಸಿದ್ದರು.

ಆದರೆ, ಮಾವಂದಿರ ಉತ್ತರದಿಂದ ನಿರಾಶೆಗೊಂಡ ಮಹೇಶ ಶನಿವಾರ ಯಾರ ಗಮನಕ್ಕೂ ಬಾರದಂತೆ ಗ್ರಾಮದ ಏರ್‌ಟೆಲ್ ಟವರ್ ಏರಿ ಕುಳಿತಿದ್ದಾನೆ. ಬಳಿಕ ತನ್ನ ಮಾವಂದಿರಿಗೆ ಕರೆ ಮಾಡಿ, “ನನಗೆ ನಾನು ಪ್ರೀತಿಸಿದ ಹುಡುಗಿಯೇ ಬೇಕು. ಇಲ್ಲವಾದರೆ ಟವರ್‌ನಿಂದ ಕೆಳಗೆ ಬಿದ್ದು ಸಾಯುತ್ತೇನೆ” ಎಂದು ಪಟ್ಟು ಹಿಡಿದಿದ್ದಾನೆ ಎಂದು ತಿಳಿದುಬಂದಿದೆ.

ಯುವಕ ಟವರ್ ಏರಿರುವ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸುಮಾರು ಎರಡು ಗಂಟೆಗಳ ಕಾಲ ಸಂಬಂಧಿಕರು ಹಾಗೂ ಗ್ರಾಮಸ್ಥರು ಟವರ್‌ನಿಂದ ಕೆಳಗೆ ಇಳಿಯುವಂತೆ ಮನವೊಲಿಸಲು ಪ್ರಯತ್ನಿಸಿದರು.

“ನೀನು ಪ್ರೀತಿಸಿದ ಯುವತಿಯೊಂದಿಗೆ ಮದುವೆ ಮಾಡಿಸುತ್ತೇವೆ, ಕೆಳಗೆ ಬಾ” ಎಂದು ಸಂಬಂಧಿಕರು ಮತ್ತು ಗ್ರಾಮಸ್ಥರು ಮನವಿ ಮಾಡಿದರೂ ಮಹೇಶ ಆರಂಭದಲ್ಲಿ ಕೆಳಗೆ ಇಳಿಯಲು ಒಪ್ಪಿರಲಿಲ್ಲ.

ಕೊನೆಗೆ ಆತನ ಮಾವ ದೇವರ ಹೆಸರಿನಲ್ಲಿ ಆಣೆ-ಪ್ರಮಾಣ ಮಾಡಿ, ತಾನು ಪ್ರೀತಿಸಿದ ಯುವತಿಯೊಂದಿಗೇ ಮದುವೆ ಮಾಡಿಸುವುದಾಗಿ ಭರವಸೆ ನೀಡಿದ ಬಳಿಕ ಮಹೇಶ ಸುರಕ್ಷಿತವಾಗಿ ಟವರ್‌ನಿಂದ ಕೆಳಗೆ ಇಳಿದಿದ್ದಾನೆ.

Tags

womanAlandtower
share
ವಾರ್ತಾಭಾರತಿ
ವಾರ್ತಾಭಾರತಿ
Next Story
X