ಆಳಂದ | ಜ.5ರಂದು ಭೀಮಾ ಕೋರೆಗಾಂವ್ 208ನೇ ವಿಜಯೋತ್ಸವ, ಬಹಿರಂಗ ಸಭೆ : ಪಿಂಟು ಸಾಲೇಗಾಂವ

ಆಳಂದ: ಪಟ್ಟಣದ ಹಳೆಯ ಚೆಕ್‌ಪೋಸ್ಟ್ ಬಳಿಯ ದೀಕ್ಷಾ ಭೂಮಿಯಲ್ಲಿ ಜ.5ರಂದು ತಾಲೂಕು ದಲಿತ ಸೇನೆಯ ಆಶ್ರಯದಲ್ಲಿ 208ನೇ ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ಆಚರಿಸಲಾಗುತ್ತಿದೆ ಎಂದು ತಾಲೂಕು ದಲಿತ ಸೇನೆ ಅಧ್ಯಕ್ಷ ಪಿಂಟು ಸಾಲೇಗಾಂವ ಅವರು ತಿಳಿಸಿದರು.
ಈ ಕುರಿತು ಪಟ್ಟಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕ್ರಮದ ವಾಲ್‌ಪೋಸ್ಟರ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಅಂದು ಬೆಳಗ್ಗೆ 10.30ಕ್ಕೆ ಬಹಿರಂಗ ಸಭೆ ಮತ್ತು ಮಧ್ಯಾಹ್ನ 1.30ಕ್ಕೆ ಭೀಮ ಕೋರೆಗಾಂವ್ ಸ್ತಂಭ ಮೆರವಣಿಗೆಯನ್ನು ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಭವ್ಯವಾಗಿ ಹಮ್ಮಿಕೊಳ್ಳಲು ಸಿದ್ಧತೆ ಕೈಗೊಳ್ಳಲಾಗಿದೆ. ಸಮಾರಂಭದ ದಿವ್ಯ ಸಾನಿಧ್ಯವನ್ನು ಕಲಬುರಗಿ ಬುದ್ಧ ವಿಹಾರದ ಧಮ್ಮ ಜ್ಯೋತಿ ಬಂತೇಜಿ ಅವರು ವಹಿಸಲಿದ್ದಾರೆ. ರಾಜ್ಯದ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ಶಾಸಕ ಬಿ.ಆರ್.ಪಾಟೀಲ್ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಭಾವಚಿತ್ರ ಪೂಜೆಯನ್ನು ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ನೆರವೇರಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ದಲಿತ ಸೇನೆಯ ರಾಜ್ಯಾಧ್ಯಕ್ಷರಾದ ನ್ಯಾಯವಾದಿ ಹನುಮಂತ ಯಳಸಂಗಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಮತ್ತು ಉಪನ್ಯಾಸಕ ಜಿತೇಂದ್ರ ತಳವಾರ ಅವರು ಉಪನ್ಯಾಸ ನೀಡುವರು ಎಂದು ಹೇಳಿದರು.
ಈ ವೇದಿಕೆಯಲ್ಲಿ ಮುಖಂಡ ದಯಾನಂದ ಶೇರಿಕಾರ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸಿದ್ದರಾಮ್ ಪ್ಯಾಟಿ, ಸೇನೆಯ ಜಿಲ್ಲಾಧ್ಯಕ್ಷ ಮಂಜುನಾಥ್ ಭಂಡಾರಿ, ಹಿರಿಯ ಮುಖಂಡ ಬಸಲಿಂಗ ಗಾಯಕ್ವಾಡ್, ಆರ್‌ಪಿಐ ರಾಜ್ಯಾಧ್ಯಕ್ಷ ಪ್ರಕಾಶ್ ಮೂಲಭಾರತಿ, ಆನಂದ ಗಾಯಕ್ವಾಡ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಆದಿಮನಿ, ಆನಂದ ಗಾಯಕವಾಡ, ಪುರಸಭೆ ನಿಕಟಪೂರ್ವ ಅಧ್ಯಕ್ಷ ಫಿರದೋಸ್ ಅನ್ಸಾರಿ, ಉದ್ಯಮೆ ಮಲ್ಲಿಕಾರ್ಜುನ ಖೇಮಜೀ, ಪರಸಭೆ ನಿಕಟಪೂರ್ವ ಸದಸ್ಯ ಶಿವುಪುತ್ರ ನಡಗೇರಿ, ಲಕ್ಷ್ಮಣ್ ಝಳಕಿ, ಸಂದೀಪ್ ಪಾತ್ರೆ, ಸಿದ್ಧು ಪೂಜಾರಿ ಮತ್ತು ಬಿಜೆಪಿ ಮುಖಂಡ ಕಿಟ್ಟಿ ಸಾಲೇಗಾಂವ ಅವರನ್ನು ಒಳಗೊಂಡಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಸೇನೆಯ ತಾಲೂಕು ಗೌರವ ಅಧ್ಯಕ್ಷ ಪಿಂಕು ಭದ್ರೆ, ಕಾರ್ಯಾಧ್ಯಕ್ಷ ಗೌತಮ ಕಾಂಬಳೆ, ವಿ.ಓ. ಅಧ್ಯಕ್ಷ ಗೌತಮ ನಿಂಬಾಳ, ಜಿಲ್ಲಾ ಮುಖಂಡ ಅಪ್ಪು ಗೋಪಾಳೆ, ಆಕಾಶ ಬಂಗರಗಾ, ಸಾಗರೆ ಗುಳಗಿ, ರಾಘವೇಂದ್ರ ಹೇಬಳಿ ಸೇರಿದಂತೆ ಇತರರು ಇದ್ದರು.







