Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ | ಗ್ರಾಪಂಗಳಲ್ಲಿನ ವಾಸ್ತವ್ಯ ಅರಿತು...

ಆಳಂದ | ಗ್ರಾಪಂಗಳಲ್ಲಿನ ವಾಸ್ತವ್ಯ ಅರಿತು ಸಮಸ್ಯೆ ನಿವಾರಣೆಗೆ ಇಓ ಕಟ್ಟಿಮನಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ15 July 2025 10:49 PM IST
share
ಆಳಂದ | ಗ್ರಾಪಂಗಳಲ್ಲಿನ ವಾಸ್ತವ್ಯ ಅರಿತು ಸಮಸ್ಯೆ ನಿವಾರಣೆಗೆ ಇಓ ಕಟ್ಟಿಮನಿ ಸೂಚನೆ

ಕಲಬುರಗಿ: ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಕೇಂದ್ರಸ್ಥಾನಕ್ಕೆ ತೆರಳಿ ವಾಸ್ತವ್ಯ ಅರಿತು ಸಮಸ್ಯೆಗಳ ನಿವಾರಣೆಗೆ ಮುಂದಾಗಬೇಕು ಎಂದು ಆಳಂದ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಆಳಂದ ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಗ್ರಾಮ ಪಂಚಾಯತ್‌ಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ಅವರು, ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳ ಕುರಿತು ಮಹತ್ವದ ಸೂಚನೆಗಳನ್ನು ನೀಡಿ ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸರಬರಾಜು, ಶೌಚಾಲಯ ನಿರ್ಮಾಣ, ತೆರಿಗೆ ಸಂಗ್ರಹಣೆ, ವಿದ್ಯುತ್ ಶುಲ್ಕ ಪಾವತಿ, ಶಾಲೆಗಳ ದಾಖಲಾತಿ ಮತ್ತು ರೋಗ ನಿರೋಧಕ ಚುಚ್ಚುಮದ್ದು ಕಾರ್ಯಕ್ರಮಗಳ ಕುರಿತು ಮಾಹಿತಿಯನ್ನು ಆಲಿಸಿದರು.

ಅಲ್ಲದೆ ಸಭೆಯಲ್ಲಿ ಹಾಜರಿದ್ದ ಸಿಬ್ಬಂದಿಗಳಿಗೆ ಗ್ರಾಮ ಪಂಚಾಯತ್‌ಗಳು ತಮಗೆ ನಿಗದಿಪಡಿಸಿದ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ವಿಳಂಬವಾದ ಕಾಮಗಾರಿಗಳಿಗೆ ಕಾರಣಗಳನ್ನು ಗುರುತಿಸಿ, ತಕ್ಷಣ ಪರಿಹಾರ ಕಂಡುಕೊಳ್ಳಲು ಅವರು ಸೂಚಿಸಿದರು.

ಪ್ರತಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಕನಿಷ್ಠ 40 ಲೀಟರ್ ದೈನಂದಿನ ನೀರು ಸರಬರಾಜು ಖಾತರಿಪಡಿಸುವಂತೆ ಮತ್ತು ವೈಯಕ್ತಿಕ ಹಾಗೂ ಸಾಮುದಾಯಿಕ ಶೌಚಾಲಯಗಳ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ಹಿಂದೇಟು ಹಾಕಬಾರದು. ಗ್ರಾಪಂಗಳ ಆದಾಯ ವೃದ್ಧಿಗಾಗಿ ತೆರಿಗೆ, ಶುಲ್ಕ ಮತ್ತು ದರಗಳ ಸಂಗ್ರಹಣೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ಗ್ರಾಮ ಸಭೆಗಳನ್ನು ನಿಯಮಿತವಾಗಿ ಆಯೋಜಿಸಿ, ಸಾರ್ವಜನಿಕರ ಭಾಗವಹಿಸುವಿಕೆಯನ್ನು ಹೆಚ್ಚಿಸುವಂತೆ ಮಾಡಿ ಅರ್ಹ ಫಲಾನುಭವಿಗಳ ಆಯ್ಕೆಯಾಗಬೇಕು ಇದರಿಂದ ಯೋಜನೆಗಳ ಯಶಸ್ಸಿಗೆ ಸ್ಥಳೀಯರ ಸಹಕಾರ ದೊರೆಯುತ್ತದೆ ಎಂದರು.

ಸಭೆಯಲ್ಲಿ ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳ ಅಭಿವೃದ್ಧಿ ಅಧಿಕಾರಿಗಳು, ಕಂಪ್ಯೂಟರ್ ಆಪರೇಟರ್ ಸಿಬ್ಬಂದಿಗಳು ಸೇರಿದಂತೆ ರುದ್ರವಾಡಿ ಪಿಡಿಒ ಬಸವರಾಜ ಮಲಶೆಟ್ಟಿ, ಮುನ್ನೊಳ್ಳಿ ಪಿಡಿಓ ನಾಗೇಶ ಮೂರ್ತಿ, ನರೇಗಾ ವಿನೋಧ ಕಲಕೇರಿ, ದಣ್ಣೂರ, ಸುಂಟನೂರ ಪಿಡಿಓ ಪ್ರವೀಣ ಉಡಗಿ, ಭೂಸನೂರ ಪಿಡಿಒ ಧರ್ಮಣ್ಣಾ, ಮಾಡಿಯಾಳ ಪಿಡಿಓ ಶಿವಾನಂದ ಮಾನಿಂಗ, ಉಷಾ ಪಾಟೀಲ, ಸುಕನ್ಯ ಇತರರು ಇದ್ದರು ಅಲ್ಲದೆ ಕೆಲವು ಪಿಡಿಓಗಳ ಗೈರು ಹಾಜರಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಇಓ ಸೂಚನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X