ಆಳಂದ| ಅರಿವು ಕೇಂದ್ರ ಕಟ್ಟಡಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅಡಿಗಲ್ಲು

ಕಲಬುರಗಿ: 2023-24 ನೇ ಸಾಲಿನ ಕೆಕೆಆರ್ ಡಿಬಿ ಯೋಜನೆಯಡಿಯಲ್ಲಿ 30 ಲಕ್ಷ ರೂ. ವೆಚ್ಚದಲ್ಲಿ ಆಳಂದ ತಾಲೂಕಿನ ಕಡಗಂಚಿ ಗ್ರಾಮದಲ್ಲಿ ನಿರ್ಮಾಣಗೊಳ್ಳಲಿರುವ ಅರಿವು ಕೇಂದ್ರ ( ಗ್ರಂಥಾಲಯ ) ಕಟ್ಟಡದ ಅಡಿಗಲ್ಲು ಸಮಾರಂಭವನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ಶಾಸಕ ಬಿ.ಆರ್.ಪಾಟೀಲ್, ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ್, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಹರವಾಳ, ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್, ತಾಲ್ಲೂಕು ಹಾಗೂ ಸ್ಥಳೀಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story





