Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ ತಾಲೂಕಿನಾದ್ಯಂತ ಕಳಪೆ ಕಾಮಗಾರಿ...

ಆಳಂದ ತಾಲೂಕಿನಾದ್ಯಂತ ಕಳಪೆ ಕಾಮಗಾರಿ ನಡೆಸಿ ಕೋಟ್ಯಂತರ ರೂ. ಹಣ ಲೂಟಿ: ಮಾಜಿ ಶಾಸಕ ಗುತ್ತೇದಾರ್ ಆರೋಪ

ವಾರ್ತಾಭಾರತಿವಾರ್ತಾಭಾರತಿ13 March 2026 4:38 PM IST
share
ಆಳಂದ ತಾಲೂಕಿನಾದ್ಯಂತ ಕಳಪೆ ಕಾಮಗಾರಿ ನಡೆಸಿ ಕೋಟ್ಯಂತರ ರೂ. ಹಣ ಲೂಟಿ: ಮಾಜಿ ಶಾಸಕ ಗುತ್ತೇದಾರ್ ಆರೋಪ

ಕಲಬುರಗಿ: "ಆಳಂದ ತಾಲೂಕಿನಾದ್ಯಂತ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಮಂಜೂರಾದ ಕಾಮಗಾರಿಗಳನ್ನು ಕಳಪೆ ಕೆಲಸ ಮಾಡಿ ಕೋಟ್ಯಂತರ ಹಣ ಲೂಟಿಗೈಯಲಾಗುತ್ತಿದೆ" ಎಂದು ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಆರೋಪಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಳಂದ ಶಾಸಕ ಹಾಗೂ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ಹಾಗೂ ಅವರ ಹೆಸರಿನಲ್ಲಿ ಗುಮುಲ್ ಅಧ್ಯಕ್ಷ ಆರ್.ಕೆ.ಪಾಟೀಲ್ ಅವರು ಹಳ್ಳಿ ರಸ್ತೆಗಳು, ಕಾಲು ದಾರಿಗಳು, ಬಂಡಿ ದಾರಿಗಳು ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಸರಕಾರದಿಂದ ಅನುದಾನ ಪಡೆದು ತಮ್ಮ ಸಂಸ್ಥೆಯಾದ ಸಮತಾ ಲೋಕ ಶಿಕ್ಷಣ ಸಮಿತಿಯಿಂದ ಕೆಲಸಗಳು ಮಾಡಲಾಗುತ್ತಿದೆ ಎಂದು ಸುಳ್ಳು ಹೇಳಿ ಜನರನ್ನು ವಂಚಿಸುತ್ತಿದ್ದಾರೆ ಎಂದರು.

ಮುಖ್ಯಮಂತ್ರಿಗಳು ಆಳಂದ ಕ್ಷೇತ್ರದ ಅಭಿವೃದ್ಧಿಗಾಗಿ ಕರ್ನಾಟಕ ಗ್ರಾಮೀಣ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ನಿಗಮದಿಂದ 12 ಕಾಮಗಾರಿಗಳಿಗೆ 866 ಲಕ್ಷ ರೂ. ಅನುದಾನ ನೀಡಿದ್ದಾರೆ, 80 ಲಕ್ಷ ರೂ. ಅನುದಾನದ ಕಾಮಗಾರಿಗಳಿಗೆ ಕೇವಲ 5 ಲಕ್ಷ ರೂ. ಹಣ ಖರ್ಚು ಮಾಡಿದ್ದಲ್ಲದೆ ತಮ್ಮ ಸಂಸ್ಥೆಯಿಂದಲೇ ಹಣ ಭರಿಸಿ ವೆಚ್ಚ ಮಾಡಲಾಗುತ್ತಿದೆ ಎಂದು ಪ್ರಚಾರ ಗಿಟ್ಟಿಸಿ, ಜನರ ಹಣ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದರು.

ಶಿರಪುರ ಮಾದರಿ ಯೋಜನೆ ಮಾಡುವುದಾಗಿ ಅನುದಾನ ತರುವ ಆಳಂದ ಶಾಸಕರು ಕೇವಲ ಪ್ರಾರಂಭದ ಕಾಮಗಾರಿ ನಡೆಸಿ, ಅದಕ್ಕೆ ಬರುವ ಕೋಟ್ಯಂತರ ಅನುದಾನವನ್ನು ಲಪಟಾಯಿಸಿದ್ದಾರೆ. ಆಣೆಕಟ್ಟಿಗೆ ನೀರು ತುಂಬಿಸುವ ನೆಪದಲ್ಲಿ ಹಣ ಲೂಟಿ ಮಾಡಿದ್ದಾರೆ. ಆದರೆ ಈವರೆಗೆ ಒಂದೂ ಕೆರೆಗೆ ಒಂದು ಹನಿ ನೀರು ಸಹ ನಿಂತಿಲ್ಲ ಎಂದು ಹೇಳಿದರು.

ತಪ್ಪು ಮಾಹಿತಿ ನೀಡಿ ತಮ್ಮ ಪ್ರಚಾರ ಗಿಟ್ಟಿಸುವುದಲ್ಲದೆ ಸರಕಾರದ ಅನುದಾನವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಕೂಡಲೇ ಶಾಸಕ ಹಾಗೂ ಆರ್.ಕೆ.ಪಾಟೀಲ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು ಎಂದು ಸುಭಾಷ್ ಗುತ್ತೇದಾರ್ ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಚಂದ್ರಕಾಂತ ಭೂಸನೂರ, ಗೌರಿ ಚಿಚಕೋಟಿ, ರಮೇಶ್ ಬಿರಾದಾರ, ಸಂತೋಷ್ ಹಾದಿಮನಿ, ಅಶೋಕ ಹತ್ತರಕಿ, ಪ್ರಶಾಂತ್ ಕಡಗಂಚಿ, ಅಪ್ಪಾರಾವ್, ಹಣಮಂತ ಶೇರಿ ಇದ್ದರು.

Tags

Alanda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X