Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ| ಬಸವೇಶ್ವರ ಪ್ರತಿಮೆ ಯಥಾಸ್ಥಿತಿ...

ಆಳಂದ| ಬಸವೇಶ್ವರ ಪ್ರತಿಮೆ ಯಥಾಸ್ಥಿತಿ ಕಾಪಾಡಲು ಶಿವಪ್ರಕಾಶ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ16 Aug 2025 8:59 PM IST
share
ಆಳಂದ| ಬಸವೇಶ್ವರ ಪ್ರತಿಮೆ ಯಥಾಸ್ಥಿತಿ ಕಾಪಾಡಲು ಶಿವಪ್ರಕಾಶ ಆಗ್ರಹ

ಕಲಬುರಗಿ: ಆಳಂದ ತಾಲ್ಲೂಕಿನ ರುದ್ರವಾಡಿ ಗ್ರಾಮದಲ್ಲಿ ತೆರವುಗೊಳಿಸಿದ ಸ್ಥಳದಲ್ಲೇ ಪುನ: ಬಸವೇಶ್ವರ ಪ್ರತಿಮೆ ಪ್ರತಿಷ್ಠಾಪಿಸಿ ವಿವಾದ ಇತ್ಯರ್ಥವಾಗುವವರೆಗೆ ಯಥಾಸ್ಥಿತಿ ಕಾಪಾಡುವಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಿವಪ್ರಕಾಶ ಹೀರಾ ಆಳಂದ ತಹಶೀಲ್ದಾರರಿಗೆ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ರುದ್ರವಾಡಿ ಗ್ರಾಮದಲ್ಲಿ ಆ.11ರ 2025ರಂದು ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಜಗಜ್ಯೋತಿ ಬಸವೇಶ್ವರ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿರುತ್ತದೆ. ಆದರೆ ಕೆಲವು ಮತೀಯ ಶಕ್ತಿಗಳು ಗ್ರಾಮದಲ್ಲಿ ಸೌಹಾರ್ದ ವಾತಾವರಣ ಕೆಡಿಸಲು ಈ ಜಾಗಕ್ಕೆ ತಕರಾರು ತೆಗೆದು ಇದು ಅಲ್ಪಸಂಖ್ಯಾತ ಸಮುದಾಯದವರಿಗೆ ಸೇರಿದ ಜಾಗವೆಂದು ಆಕ್ಷೇಪಣೆ ಸಲ್ಲಿಸಿ ಪ್ರತಿಮೆಯನ್ನು ತೆಗೆಯಲು ಅರ್ಜಿ ಸಲ್ಲಿಸಿರುತ್ತಾರೆ. ಸದರಿ ವಿಷಯದ ಕುರಿತು ತಹಸೀಲದಾರರು ಗ್ರಾಮಕ್ಕೆ ಆಗಮಿಸಿ ಎಲ್ಲ ಸಮುದಾಯದವರ ಜೊತೆ ಮಾತುಕತೆ ನಡೆಸಿ ಸದರಿ ಜಾಗವನ್ನು ತಹಶೀಲ್ದಾರ್ ಕಚೇರಿಯಿಂದ ಸರ್ವೇ ಮಾಡಿಸಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಹೇಳಿ ಹೋಗಿರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಆದರೆ‌, 14ನೇ ಆಗಷ್ಟ್ 2025ರ ಗುರುವಾರದಂದು ತಾಲೂಕು ಸರ್ವೇಯರ್ ಅಕ್ಷಯ, ಕಂದಾಯ ನಿರೀಕ್ಷಕ ಅಲ್ಲಾವುದ್ದೀನ್ ಅವರು ಬೆಳಿಗ್ಗೆ 11 ಗಂಟೆಗೆ ಬಂದು ಎಲ್ಲ ಸಮುದಾಯದ ಮುಖಂಡರೊಂದಿಗೆ ಶಾಲೆಯ ಕೋಣೆಯಲ್ಲಿ ಕುಳಿತು ಚರ್ಚಿಸಿದಾಗ ತಾಲೂಕು ಸರ್ವೇಯರ್ ಅವರು ಸರ್ವೇ ಜಾಗದಲ್ಲಿ ಕಟ್ಟಡ ಇರುವುದರಿಂದ ಸಾಕಳಿ( ಚೈನ್) ಮುಖಾಂತರ ಸರ್ವೇ ಬರುವುದಿಲ್ಲ ಎಂದು, ಇನ್ನೊಂದು ವಿಧಾನ ಇರುತ್ತದೆ ಎಂದಾಗ ಮಶೀನ್ ಮುಖಾಂತರ ಸರ್ವೇ ಮಾಡಲು ಬರುತ್ತದೆ ಎಂದು ಹೇಳಿ ಅದಕ್ಕಾಗಿ ಒಂದು ವಾರ ಕಾಲಾವಕಾಶ ಬೇಕು ಎಂದು ಕೇಳಿದಾಗ ಅದಕ್ಕೆ ಎಲ್ಲ ಸಮುದಾಯದವರು ಅವರ ಮಾತಿಗೆ ಒಪ್ಪಿಗೆ ಸೂಚಿಸಿರುತ್ತಾರೆ. ನಂತರ ಅದೇ ದಿನ ಸಾಯಂಕಾಲ 5 ಗಂಟೆಗೆ ತಹಶೀಲ್ದಾರ್‌ ಮತ್ತು ಸರ್ಕಲ್ ಇನ್ಸ್ಪೆಕ್ಟರ್ ಅವರು ಯಾರಿಗೂ ತಿಳಿಸದೇ ಏಕಾಏಕಿ ಗ್ರಾಮಕ್ಕೆ ಬಂದು ಪ್ರತಿಮೆಯನ್ನು ತೆರವುಗೊಳಿಸಿ ಗ್ರಾಮ ಪಂಚಾಯತ್‌ ಕಚೇರಿಯಲ್ಲಿ ಇಟ್ಟಿರುತ್ತಾರೆ ಇದು ತಹಶೀಲ್ದಾರ್‌ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ಅವರು ಎಲ್ಲ ಸಮುದಾಯದ ಜನರಿಗೆ ಮಾಡಿದ ದ್ರೋಹವಾಗಿರುತ್ತದೆ ಎಂದು ದೂರಿದ್ದಾರೆ.

ಸದರಿ ಜಾಗದ ಸರ್ವೇ ಸಂಪೂರ್ಣವಾಗಿ ಇತ್ಯರ್ಥವಾಗುವವರೆಗೆ ಬಸವೇಶ್ವರ ಪ್ರತಿಮೆಯನ್ನು ಪ್ರತಿಷ್ಠಾಪಿಸಿ ಯಥಾಸ್ಥಿತಿ ಕಾಪಾಡುವಂತೆ ತತಹಶೀಲ್ದಾರರಿಗೆ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X