Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ | ಗುತ್ತೇದಾರ ಸ್ಮಾರಕ ಪ್ರೌಢಶಾಲೆಯ...

ಆಳಂದ | ಗುತ್ತೇದಾರ ಸ್ಮಾರಕ ಪ್ರೌಢಶಾಲೆಯ ರಜತ ಮಹೋತ್ಸವ ಆಚರಣೆ

ವಾರ್ತಾಭಾರತಿವಾರ್ತಾಭಾರತಿ21 Dec 2025 11:22 PM IST
share
ಆಳಂದ | ಗುತ್ತೇದಾರ ಸ್ಮಾರಕ ಪ್ರೌಢಶಾಲೆಯ ರಜತ ಮಹೋತ್ಸವ ಆಚರಣೆ

ಕಲಬುರಗಿ(ಆಳಂದ): ಆಳಂದ ಪಟ್ಟಣದಲ್ಲಿರುವ ಜೀವನ ಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಮಾತೋಶ್ರೀ ಭೀಮಬಾಯಿ ಹಣಮಯ್ಯ ಗುತ್ತೇದಾರ ಸ್ಮಾರಕ ಪ್ರೌಢಶಾಲೆಯ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಗಳ ಆಯೋಜನೆಯಲ್ಲಿ ಶಾಲೆಯ ರಜತ ಮಹೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ ರವಿವಾರ ನೆರವೇರಿತು.

ಶಾಲೆಯ ಕಾರ್ಯದರ್ಶಿ ಹರ್ಷಾ ಗುತ್ತೇದಾರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, "ನಮ್ಮ ಶಾಲೆಯ ಮೊದಲ ಬ್ಯಾಚ್‌ನ ವಿದ್ಯಾರ್ಥಿಗಳು ದೇಶ-ವಿದೇಶಗಳಲ್ಲಿ ಉನ್ನತ ಹುದ್ದೆಗಳಲ್ಲಿರುವುದು ನಮಗೆ ಅತ್ಯಂತ ಹೆಮ್ಮೆಯ ಸಂಗತಿ. ಈ ರಜತ ಮಹೋತ್ಸವವು ಕೇವಲ ಒಂದು ಆಚರಣೆಯಲ್ಲ, ನಮ್ಮ ಶಾಲೆಯ ಶಿಕ್ಷಣ ಗುಣಮಟ್ಟ ಮತ್ತು ಗುರು-ಶಿಷ್ಯರ ಸಂಬಂಧದ ಗಾಢತೆಯನ್ನು ತೋರಿಸುವ ಸಂಭ್ರಮದ ಕ್ಷಣ" ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಆಡಳಿತಾಧಿಕಾರಿ ಹಣಮಂತ ಶೇರಿ ಅವರು, "2000ನೇ ಸಾಲಿನಲ್ಲಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ಇಂದು ಇಲ್ಲಿ ಸೇರಿರುವುದು ಶಾಲೆಯ ಯಶಸ್ಸಿನ ನಿಜವಾದ ಸಾಕ್ಷಿ. ಈ ಶಾಲೆಯು ಕೇವಲ ಶಿಕ್ಷಣ ನೀಡಿದ್ದಲ್ಲ, ಜೀವನದ ಮೌಲ್ಯಗಳನ್ನೂ ನೀಡಿದೆ" ಎಂದು ಹೇಳಿದರು.

ಪ್ರೌಢಶಾಲೆಯ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಮರೆಪ್ಪ ಬಡಿಗೇರ ಅವರು ಮಾತನಾಡಿದರು.

ಪಿಯು ಪ್ರಾಚಾರ್ಯ ಡಾ.ಅಪ್ಪಾಸಾಬ ಬಿರಾದಾರ, ಎಂಪಿಎಜಿ ಪಿಯು ಪ್ರಾಚಾರ್ಯ ಮಲ್ಲಿಕಾರ್ಜುನ ಬುಕ್ಕೆ ಮತ್ತು ಎಂಬಿಎಚ್‌ಜಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಲ್ಲಿನಾಥ ತುಕ್ಕಾಣೆ ಅವರು ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದರು.

ಹಳೆಯ ವಿದ್ಯಾರ್ಥಿಗಳ ಕಾರ್ಯಕ್ರಮದ ಸಂಯೋಜಕರಾದ ಕಲಬುರಗಿಯ ಕೃಷಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಸಿದ್ದಾರಾಮ ವಾಡೇದ ಅವರು ಮಾತನಾಡಿದರು.

ಸುರೇಶ ತೋಳೆ, ಶರಣು ಅಚಲೇರಿ, ರಾಜೇಂದ್ರ ಬಾವಿ, ಸಿದ್ಧರಾಮ ದೋತ್ರೆ, ವಿಜಯಲಕ್ಷ್ಮಿ ಬಿರಾದಾರ, ಸೈಯದ್‌ ಅಬಿದಲಿ, ರಾಜೇಂದ್ರ ಬೋಳಶೆಟ್ಟಿ, ಸಂತೋಷ ವೇದಪಾಠಕ, ಸಂತೋಷ ಕಾಮಣೆ, ಸಂಜಯ ಮೋರೆ, ಸುಭಾಷ ಮೈಂದರಗಿ, ಗುಂಡೇರಾವ್ ಪಾಟೀಲ ಕವಲಗಾ, ಇಶಾಕ್ ಅಲಿ, ಶಿವಾನಂದ ಚಿಲಾಮಣಿ ಸೇರಿದಂತೆ ಅನೇಕ ಹಳೆಯ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಗೌರವಾನ್ವಿತ ಅತಿಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳಿಂದ ಸಂಗೀತ, ನೃತ್ಯ, ನಾಟಕ ಮತ್ತು ಗುರುಗಳಿಗೆ ಸ್ಮರಣಾರ್ಥ ಸಮರ್ಪಣೆಗಳು ನಡೆದವು. ಕಾಶಿನಾಥ ಹಿರೇಮಠ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಪವನ ಹಿರೇಮಠ ಸ್ವಾಗತಿಸಿದರು. ಅನೀತಾ ಹತ್ತರಕಿ ಅವರು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X