Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ | ಕ್ರೀಡೆಗಳು ಒಗ್ಗಟ್ಟು, ಶಿಸ್ತು,...

ಆಳಂದ | ಕ್ರೀಡೆಗಳು ಒಗ್ಗಟ್ಟು, ಶಿಸ್ತು, ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುತ್ತವೆ: ಅರವಿಂದ್ ಭಾಸಗಿ

ವಾರ್ತಾಭಾರತಿವಾರ್ತಾಭಾರತಿ23 Aug 2025 5:21 PM IST
share
ಆಳಂದ | ಕ್ರೀಡೆಗಳು ಒಗ್ಗಟ್ಟು, ಶಿಸ್ತು, ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುತ್ತವೆ: ಅರವಿಂದ್ ಭಾಸಗಿ

ಕಲಬುರಗಿ: ಕ್ರೀಡೆಗಳು ಯುವಜನರಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಬೆಳೆಸುವುದರ ಜೊತೆಗೆ ಒಗ್ಗಟ್ಟು, ಶಿಸ್ತು ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ತರುತ್ತವೆ. ಈ ದಸರಾ ಕ್ರೀಡಾಕೂಟವು ಆಳಂದ ತಾಲೂಕಿನ ಯುವ ಕ್ರೀಡಾಪಟುಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಇರುವ ಉತ್ತಮ ವೇದಿಕೆಯ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಾಲ್ಲೂಕು ದೈಹಿಕ ಶಿಕ್ಷಣದ ಶಿಕ್ಷಣಾಧಿಕಾರಿ ಅರವಿಂದ್ ಭಾಸಗಿ ಅವರು ಕರೆ ನೀಡಿದರು.

ಆಳಂದ ಪಟ್ಟಣದ ಮಟಕಿ ರಸ್ತೆಯಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಲಬುರಗಿ ಆಶ್ರಯದಲ್ಲಿ 2025-26ನೇ ಸಾಲಿನ ತಾಲೂಕ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ದಸರಾ ಕ್ರೀಡಾಕೂಟವು ಆಳಂದ ತಾಲೂಕಿನ ಯುವ ಕ್ರೀಡಾಪಟುಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಮತ್ತು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ತಮ್ಮ ಛಾಪನ್ನು ಮೂಡಿಸಲು ಒಂದು ಅಮೂಲ್ಯ ವೇದಿಕೆಯಾಗಿದೆ," ಎಂದು ತಿಳಿಸಿದರು.

"ನಮ್ಮ ಯುವ ಕ್ರೀಡಾಪಟುಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಸೌಕರ್ಯಗಳನ್ನು ಒದಗಿಸಿದರೆ, ಅವರು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ತೋರಿಸಬಲ್ಲರು," ಎಂದು ವಿಶ್ವಾಸ ವ್ಯಕ್ತಪಡಿಸಿದರು.

"ಕ್ರೀಡೆಗಳು ಯುವಕರಿಗೆ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲು ಧೈರ್ಯ ಮತ್ತು ಸಹನೆಯನ್ನು ಕಲಿಸುತ್ತವೆ. ಈ ಕಾರ್ಯಕ್ರಮದ ಮೂಲಕ ಆಳಂದ ತಾಲೂಕಿನ ವಿದ್ಯಾರ್ಥಿಗಳು ಮತ್ತು ಯುವಕರು ತಮ್ಮ ಕೌಶಲ್ಯವನ್ನು ಹೆಚ್ಚಿಸಿಕೊಂಡು ಭವಿಷ್ಯದಲ್ಲಿ ದೊಡ್ಡ ಸಾಧನೆಗಳನ್ನು ಮಾಡಲು ಪ್ರೇರಣೆ ಪಡೆಯಬೇಕು. ಜಿಲ್ಲಾ ಆಡಳಿತ ಮತ್ತು ಕ್ರೀಡಾ ಇಲಾಖೆಯು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗ್ರಾಮೀಣ ಪ್ರತಿಭೆಗಳಿಗೆ ಬೆಳಕು ಚೆಲ್ಲುವ ಕಾರ್ಯ ಮಾಡುತ್ತಿದೆ," ಎಂದು ಹೇಳಿದರು.

ಈ ಸಂದರ್ಭಧಲ್ಲಿ ಇಲಾಖೆಯ ಕ್ರೀಡಾ ಸಂಘಟಕ ವ್ಯವಸ್ಥಾಪಕ ಸಂತೋಷ ರಾಠೋಡ, ಕಲ್ಲಪ್ಪ ಶೃಂಗೇರಿ, ದೈಹಿಕ ಶಿಕ್ಷಣದ ಶಿಕ್ಷಕ ಮಹಾದೇವ ಗುಣಕಿ, ಸಂಗೀತಾ ಪಿ.ಜಿ, ಸುವರ್ಣ ಮಂಟಗಿ, ನೂರಜಹಾ, ಬಿಸಮಿಲ್ಲಾ, ಅಕ್ಕಮಹಾದೇವಿ, ಶಂಕಲಿoಗ, ಶರಣು ವಾಲಿಕರ, ಸುರೇಶ ಕೌಲಗಿ, ವಿರೂಪಾಕ್ಷಿ ಹಿರೇಮಠ, ಮನೋಹರ ರೋಕೆ, ಅಶೋಕ ಬೋಧನ, ಯಶ್ವಂತ ಜಮಶೆಟ್ಟಿ, ರಾಜಕುಮಾರ ಕಲಶಟ್ಟಿ, ಶಾಂತಪ್ಪ ನೆಲ್ಲಗಿ ಸೇರಿ ಹಾಜರಿದ್ದು ಕ್ರೀಡಾಕೂಟವನ್ನು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಓಟ, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, ಕಬಡ್ಡಿ, ವಾಲಿಬಾಲ್, ಖೋ-ಖೋ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಂಘ, ಸಂಸ್ಥೆಗಳಿoದ ಕ್ರೀಡಾ ತಂಡಗಳು ಭಾಗವಹಿ ಕ್ರೀಡಾ ಪ್ರದರ್ಶನ ನೀಡಿದರು. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿಜೇತರಿಗೆ ಇಲಾಖೆಯ ಪ್ರಮಾಣ ಪತ್ರ ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X