ಆಳಂದ | ಎಸೆಸೆಲ್ಸಿ ಪರೀಕ್ಷೆ : ಸರಕಾರಿ ಕನ್ಯಾ ಪ್ರೌಢಶಾಲೆಗೆ ಉತ್ತಮ ಫಲಿತಾಂಶ

ಆಳಂದ : ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಪಟ್ಟಣದ ಸರ್ಕಾರಿ ಕನ್ಯಾ ಪ್ರೌಢಶಾಲೆ ಉತ್ತಮ ಸಾಧನೆ ಮಾಡಿದ್ದು, ಇಬ್ಬರು ವಿದ್ಯಾರ್ಥಿನಿಯರು ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಮುಖ್ಯ ಶಿಕ್ಷಕ ಶ್ರೀಮಂತ ಹತ್ತರಕಿ ತಿಳಿಸಿದ್ದಾರೆ.
ವಿದ್ಯಾರ್ಥಿನಿ ಮಹೆಜಬೀನ ತಾಹೇರಅಲಿ ಜರ್ದಿ 89.28 ಹಾಗೂ ಉಜ್ಮಾ ಫರ್ದಿನಸಾಬ ಇನಾಮದಾರ 88.16 ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಒಟ್ಟು 53 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 45 ಮಂದಿ ಉತ್ತೀರ್ಣರಾಗಿದ್ದಾರೆ. ಫಲಿತಾಂಶದಲ್ಲಿ 2 ಮಂದಿ ಅಗ್ರಶ್ರೇಣಿ, 13 ಮಂದಿ ಪ್ರಥಮ ದರ್ಜೆ, 14 ಮಂದಿ ದ್ವಿತೀಯ ದರ್ಜೆ ಹಾಗೂ 16 ಮಂದಿ ಉತ್ತೀರ್ಣರಾಗಿದ್ದಾರೆ ಎಂದು ಮಾಹಿತಿ ನೀಡಿದರು.
ವಿದ್ಯಾರ್ಥಿನಿಯರ ಸಾಧನೆಗೆ ಮುಖ್ಯ ಶಿಕ್ಷಕ ಶ್ರೀಮಂತ ಹತ್ತರಕಿ, ಶಿಕ್ಷಕ-ಶಿಕ್ಷಕಿಯರು ಹಾಗೂ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
Next Story




