Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅಫಜಲಪುರ ಆಸ್ಪತ್ರೆಯಲ್ಲಿ ಖೋಟಾ ಬಿಲ್‌,...

ಅಫಜಲಪುರ ಆಸ್ಪತ್ರೆಯಲ್ಲಿ ಖೋಟಾ ಬಿಲ್‌, ನಕಲಿ ರಶೀದಿಗಳ ಮೂಲಕ ಸರಕಾರಿ ಹಣ ದುರ್ಬಳಕೆ ಆರೋಪ

ವಾರ್ತಾಭಾರತಿವಾರ್ತಾಭಾರತಿ8 July 2026 9:30 PM IST
share
ಅಫಜಲಪುರ ಆಸ್ಪತ್ರೆಯಲ್ಲಿ ಖೋಟಾ ಬಿಲ್‌, ನಕಲಿ ರಶೀದಿಗಳ ಮೂಲಕ ಸರಕಾರಿ ಹಣ ದುರ್ಬಳಕೆ ಆರೋಪ
ಉನ್ನತ ಮಟ್ಟದ ತನಿಖೆಗೆ ಜೆಡಿಎಸ್ ಒತ್ತಾಯ

ಅಫಜಲಪುರ: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಇಲಾಖೆಯಿಂದ ಒದಗಿಸಲಾಗುವ ಪತ್ಯಾಹಾರ ಪೂರೈಕೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಜೆಡಿಎಸ್ ರಾಜ್ಯ ಒಬಿಸಿ ಮೋರ್ಚಾ ಅಧ್ಯಕ್ಷ ಶಿವಕುಮಾರ ನಾಟಿಕಾರ ಆರೋಪಿಸಿದರು.

ಖೋಟಾ ಬಿಲ್ ಹಾಗೂ ನಕಲಿ ರಸೀದಿಗಳನ್ನು ಸೃಷ್ಟಿಸಿ 15 ತಿಂಗಳ ಅವಧಿಯಲ್ಲಿ 77.71 ಲಕ್ಷ ರೂ. ಸರ್ಕಾರಿ ಹಣವನ್ನು ದುರ್ಬಳಕೆ ಮಾಡಲಾಗಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

2024ರ ಜನವರಿಯಿಂದ 2025ರ ಮಾರ್ಚ್‌ವರೆಗೆ ರೋಗಿಗಳಿಗೆ ಹಾಲು, ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟ ಪೂರೈಸಿದಂತೆ ದಾಖಲೆ ಸೃಷ್ಟಿಸಿ ಅನುದಾನ ಪಡೆದುಕೊಳ್ಳಲಾಗಿದೆ ಎಂದು ಅವರು ದೂರಿದರು. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಶಾರದಾ ಗ್ರಾಮೀಣಾಭಿವೃದ್ಧಿ ಹಾಗೂ ವಿವಿಧೋದ್ದೇಶ ಅಭಿವೃದ್ಧಿ ಸಂಸ್ಥೆಯ ಹೆಸರಿನಲ್ಲಿ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಅಭಯಕುಮಾರ ಅವರು ಖೋಟಾ ಬಿಲ್‌ಗಳನ್ನು ಸೃಷ್ಟಿಸಿ ಹಣ ದುರ್ಬಳಕೆ ಮಾಡಿದ್ದಾರೆ ಎಂದು ಆರೋಪಿಸಿದರು.

ಆಸ್ಪತ್ರೆಯಲ್ಲಿ ಪತ್ಯಾಹಾರ ತಯಾರಿಸಲು ಕ್ಯಾಂಟಿನ್ ವ್ಯವಸ್ಥೆಯೇ ಇಲ್ಲ. ಆಹಾರ ತಯಾರಿಕೆ ಹಾಗೂ ವಿತರಣೆಗೆ ಸಂಬಂಧಿಸಿದ ಸ್ಪಷ್ಟ ದಾಖಲೆಗಳೂ ಇಲ್ಲದಿದ್ದರೂ ಆಹಾರ ಪೂರೈಕೆ ಮಾಡಿದಂತೆ ಬಿಲ್ ಸಲ್ಲಿಸಿ ಹಣ ಪಡೆದಿರುವುದು ತನಿಖೆಯಿಂದ ಬೆಳಕಿಗೆ ಬರಲಿದೆ ಎಂದು ನಾಟಿಕಾರ ಹೇಳಿದರು.

ಈ ಪ್ರಕರಣದಲ್ಲಿ ಶಾಸಕ ಎಂ.ವೈ. ಪಾಟೀಲ ಹಾಗೂ ಅವರ ಪುತ್ರ ಅರುಣಕುಮಾರ ಪಾಟೀಲ ಅವರ ಕೈವಾಡವೂ ಇರಬಹುದೆಂಬ ಅನುಮಾನ ವ್ಯಕ್ತಪಡಿಸಿದ ಅವರು, ಈ ಸಂಬಂಧದ 54 ಪುಟಗಳ ದಾಖಲೆಗಳನ್ನು ಶಾಸಕರ ನಿವಾಸ ಹಾಗೂ ಅಫಜಲಪುರ ಕಾಂಗ್ರೆಸ್ ಕಚೇರಿಗೆ ಅಂಚೆ ಮೂಲಕ ಕಳುಹಿಸುತ್ತಿರುವುದಾಗಿ ತಿಳಿಸಿದರು.

ಶಾಸಕರಿಗೆ ಈ ಪ್ರಕರಣದೊಂದಿಗೆ ಯಾವುದೇ ಸಂಬಂಧವಿಲ್ಲದಿದ್ದರೆ ಸ್ವತಃ ಉನ್ನತ ಮಟ್ಟದ ತನಿಖೆ ನಡೆಸಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಅವರ ಮೇಲಿನ ಅನುಮಾನ ಮತ್ತಷ್ಟು ಬಲಗೊಳ್ಳಲಿದೆ ಎಂದು ಸವಾಲು ಹಾಕಿದರು.

ಈ ಕುರಿತು ಸಂಬಂಧಿತ ಇಲಾಖೆಯ ಹಿರಿಯ ಅಧಿಕಾರಿಗಳು, ಲೆಕ್ಕಪರಿಶೋಧನಾ ಇಲಾಖೆ ಹಾಗೂ ಆಹಾರ ಇಲಾಖೆಯ ಆಯುಕ್ತರಿಗೆ ಈಗಾಗಲೇ ದೂರು ಸಲ್ಲಿಸಲಾಗಿದೆ. ಶೀಘ್ರ ತನಿಖೆ ಆರಂಭಿಸದಿದ್ದರೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಎದುರು ಸತ್ಯಾಗ್ರಹ ಹಾಗೂ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಡಾ. ಅಭಯಕುಮಾರ ಅವರು ಆಡಳಿತ ವೈದ್ಯಾಧಿಕಾರಿಯಾಗಿ ಕರ್ತವ್ಯ ವಹಿಸಿಕೊಂಡ ಬಳಿಕವೇ ಹಣಕಾಸು ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ ನಾಟಿಕಾರ, ನಕಲಿ ಬಿಲ್ ಹಾಗೂ ರಸೀದಿಗಳ ಮೂಲಕ ಸರ್ಕಾರಕ್ಕೆ ವಂಚನೆ ಎಸಗಲಾಗಿದೆ. ಹಿರಿಯ ಅಧಿಕಾರಿಗಳಿಂದ ಸಮಗ್ರ ತನಿಖೆ ನಡೆಸಿ ಆರೋಪ ಸಾಬೀತಾದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಸಿಂಗೆ, ರಾಜು ಉಕಲಿ, ಮರೇಪ್ಪ ಜಮಾದಾರ, ಶ್ರೀಶೈಲ ಪಾಟೀಲ, ಅಮೂಲ ಮೊರೆ ಇದ್ದರು

Tags

hospitalAfzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X