Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ಆರೋಪ...

ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ಆರೋಪ : ಚಿಂಚೋಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ7 Aug 2026 7:44 PM IST
share
ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ಆರೋಪ : ಚಿಂಚೋಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಚಿಂಚೋಳಿ : ಸುಲೇಪೇಟ ಹೋಬಳಿ ವ್ಯಾಪ್ತಿಯ ಸುಮಾರು 40 ಗ್ರಾಮಗಳ ರೈತರಿಗೆ 2025–26ನೇ ಸಾಲಿನ ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ, ಸುಲೇಪೇಟ ನಾಗರಿಕರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ರೈತರು ಶುಕ್ರವಾರ ಬಸವೇಶ್ವರ ವೃತ್ತದಲ್ಲಿ ಬೃಹತ್ ಶಾಂತಿಯುತ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ರೈತರು, ಸಾವಿರಾರು ರೂಪಾಯಿ ವಿಮಾ ಕಂತು ಪಾವತಿಸಿದ್ದರೂ ಕೆಲ ರೈತರ ಖಾತೆಗಳಿಗೆ ಕೇವಲ 100 ರೂ. ನಿಂದ 200 ರೂ. ರವರೆಗೆ ಮಾತ್ರ ಪರಿಹಾರ ಜಮೆಯಾಗಿರುವುದು ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಬೆಳೆ ಹಾನಿಯ ಪ್ರಮಾಣಕ್ಕೆ ಅನುಗುಣವಾಗಿ ಪರಿಹಾರ ದೊರೆಯದೆ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಕಳೆದ ಸಾಲಿನಲ್ಲಿ ಅತಿವೃಷ್ಟಿ ಹಾಗೂ ಪ್ರತಿಕೂಲ ಹವಾಮಾನದಿಂದ ಈ ಭಾಗದಲ್ಲಿ ಶೇ.70ರಿಂದ 80ರಷ್ಟು ಬೆಳೆ ಹಾನಿಯಾಗಿತ್ತು. ಆದರೆ ಸಂಬಂಧಪಟ್ಟ ಅಧಿಕಾರಿಗಳು ವಿಮಾ ಕಂಪನಿಗಳಿಗೆ ಕೇವಲ ಶೇ.14ರಿಂದ 18ರಷ್ಟು ಮಾತ್ರ ಬೆಳೆ ಹಾನಿಯಾಗಿದೆ ಎಂಬ ವರದಿ ಸಲ್ಲಿಸಿರುವುದರಿಂದ ರೈತರಿಗೆ ಅಲ್ಪ ಪ್ರಮಾಣದ ವಿಮೆ ಪರಿಹಾರ ದೊರೆತಿದೆ ಎಂದು ಸಮಿತಿ ಪದಾಧಿಕಾರಿಗಳು ದೂರಿದರು.

ವಿಮೆ ಕಂಪನಿಗಳಿಗೆ ಸಲ್ಲಿಸಿರುವ ಬೆಳೆ ಹಾನಿ ವರದಿಯನ್ನು ಮರುಪರಿಶೀಲಿಸಿ, ವಾಸ್ತವಿಕ ಬೆಳೆ ನಷ್ಟದ ಆಧಾರದ ಮೇಲೆ ನ್ಯಾಯಯುತ ವಿಮೆ ಪರಿಹಾರವನ್ನು ಎಲ್ಲಾ ಅರ್ಹ ರೈತರಿಗೆ ಬಿಡುಗಡೆ ಮಾಡಬೇಕು. ಬಾಕಿ ಇರುವ ವಿಮೆ ಮೊತ್ತವನ್ನು ಕೂಡಲೇ ರೈತರ ಖಾತೆಗಳಿಗೆ ಜಮಾ ಮಾಡಬೇಕು ಎಂದು ಆಗ್ರಹಿಸಿದರು.

2026–27ನೇ ಸಾಲಿನಲ್ಲಿ ಚಿಂಚೋಳಿ ತಾಲೂಕಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದರಿಂದ ಬಿತ್ತನೆ ಮಾಡಿದ ಬೆಳೆಗಳು ಸಮರ್ಪಕವಾಗಿ ಬೆಳೆಯದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಚಿಂಚೋಳಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಿ ವಿಶೇಷ ಪರಿಹಾರ ಹಾಗೂ ಅಗತ್ಯ ನೆರವು ನೀಡಬೇಕು ಎಂದು ಒತ್ತಾಯಿಸಿದರು.

ಕಳೆದ ಎರಡು-ಮೂರು ವರ್ಷಗಳಿಂದ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ನಿರಂತರ ಬೆಳೆ ನಷ್ಟ ಅನುಭವಿಸುತ್ತಿರುವ ರೈತರ ಸಾಲದ ಹೊರೆ ಕಡಿಮೆ ಮಾಡಲು ಸರ್ಕಾರ ಸಾಲಮನ್ನಾ ಸೇರಿದಂತೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ಬಳಿಕ ತಹಶೀಲ್ದಾರ್ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರುದ್ರಸೆಟ್ಟಿ ಪಡಶೆಟ್ಟಿ, ಪ್ರಕಾಶ ಸಜ್ಜನ, ಜಹಿರೋದ್ದೀನ್ ಪಟೇಲ್, ಶರಣಪ್ಪ ದೇಸಾಯಿ, ಮಲ್ಲಿಕಾರ್ಜುನ ದೇಸಾಯಿ, ನಾಗಸೆಟ್ಟಿ ಕೊಟಗಿ, ರಮೇಶ್ ದೇಸಾಯಿ, ಶರಣಬಸಪ್ಪ ಮಮಶೆಟ್ಟಿ, ಶರಣು ಸ್ವಂತ, ರುದ್ರಮುನಿ ರಾಮತೀರ್ಥಕರ್, ನಾಮದೇವ ಪಾಟೀಲ್, ಪ್ರಕಾಶ ಮಂತ್ರಿ, ನಾರಾಯಣ ರೆಡ್ಡಿ, ಮಲ್ಲಿಕಾರ್ಜುನ ಪಾಳದಿ, ನಂದು ಪಾಟೀಲ್, ಮಲ್ಲಿಕಾರ್ಜುನ ರಾಪಗೋಡ, ಮಲ್ಲಿಕಾರ್ಜುನ ಗುಲಗುಂಜಿ, ರಾಜು ಹೊಸಳ್ಳಿ, ಜಗನ್ನಾಥ ರೆಡ್ಡಿ, ಮಲ್ಲಿಕಾರ್ಜುನ ಮಾಳಗಿ, ಸಿದ್ದಯ್ಯ ಸ್ವಾಮಿ, ಸಂಜು ಕುಮಾರ, ವೀರಶೆಟ್ಟಿ ತಾರಾಪೂರ, ವೈಜನಾಥ ದಾದಿ, ಅಣವೀರ ಗೌನಳ್ಳಿ, ಮಲ್ಲಣ್ಣ ಶೆಳಗಿ, ರಾಜಶೇಖರ ದಬ್ಬಾ, ಶಿವರಾಮ ರಾಠೋಡ್, ಅಹ್ಮದ್ ಮೊಮನಿ, ನಾಗೇಶ ಚಾಂಗಲೇರಾ, ರವಿರಾಜ ರಾಠೋಡ್, ಶೆಕಪ್ಪ ಬಗಲಿ ಸೇರಿದಂತೆ ಅನೇಕ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Tags

Chincholiprotestfarmers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X