Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅಫಜಲಪುರ ಸರ್ಕಾರಿ ಆಸ್ಪತ್ರೆಯಲ್ಲಿ...

ಅಫಜಲಪುರ ಸರ್ಕಾರಿ ಆಸ್ಪತ್ರೆಯಲ್ಲಿ ಅವ್ಯವಹಾರ ಆರೋಪ: ಸಮಗ್ರ ತನಿಖೆಗೆ ಜೆಡಿಎಸ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ5 Sept 2026 7:19 PM IST
share
ಅಫಜಲಪುರ ಸರ್ಕಾರಿ ಆಸ್ಪತ್ರೆಯಲ್ಲಿ ಅವ್ಯವಹಾರ ಆರೋಪ: ಸಮಗ್ರ ತನಿಖೆಗೆ ಜೆಡಿಎಸ್ ಆಗ್ರಹ

ಅಫಜಲಪುರ: ಪಟ್ಟಣದ ಸರ್ಕಾರಿ ಆಸ್ಪತ್ರೆ ಹಾಗೂ ಕಲಬುರಗಿಯ ಶಾಂತಾ ಆಸ್ಪತ್ರೆಯ ಹೊರರೋಗಿ ವಿಭಾಗ (ಒಪಿಡಿ) ಮತ್ತು ಒಳರೋಗಿಗಳ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ತಾಳೆ ಹಾಕುವ ಮೂಲಕ ತನಿಖೆ ನಡೆಸಬೇಕು ಎಂದು ಜೆಡಿಎಸ್ ರಾಜ್ಯ ಒಬಿಸಿ ಮೋರ್ಚಾ ಅಧ್ಯಕ್ಷ ಶಿವಕುಮಾರ ನಾಟಿಕಾರ ಆಗ್ರಹಿಸಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿ ಸೌಲಭ್ಯಗಳಿಲ್ಲ ಎಂಬ ಕಾರಣ ನೀಡಿ ಬಡ ರೋಗಿಗಳನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ರೆಫರ್ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬರುತ್ತಿದೆ. ಸರ್ಕಾರಿ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ರೆಫರ್ ಮಾಡಲಾದ ರೋಗಿಗಳ ವಿವರ, ಆಯುಷ್ಮಾನ್ ಭಾರತ ಯೋಜನೆಯಡಿ ನಡೆದ ಚಿಕಿತ್ಸೆಗಳ ದಾಖಲೆ ಹಾಗೂ ಎರಡೂ ಆಸ್ಪತ್ರೆಗಳ ಚಿಕಿತ್ಸಾ ವಿವರಗಳನ್ನು ಪರಿಶೀಲಿಸಿದರೆ ಆರೋಗ್ಯ ಸೇವೆ ಮತ್ತು ಸರ್ಕಾರಿ ಅನುದಾನ ದುರ್ಬಳಕೆಯಾಗಿದೆ ಎಂಬ ಆರೋಪಗಳ ಸತ್ಯಾಸತ್ಯತೆ ಬಹಿರಂಗವಾಗಲಿದೆ ಎಂದರು.

ಸರ್ಕಾರಿ ಆಸ್ಪತ್ರೆಯ ಕೆಲ ವೈದ್ಯರು ಹಾಗೂ ಖಾಸಗಿ ಆಸ್ಪತ್ರೆಯ ನಡುವೆ ಒಳಒಪ್ಪಂದವಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಖಾಸಗಿ ಆಸ್ಪತ್ರೆಗೆ ರೋಗಿಗಳನ್ನು ಕಳುಹಿಸುವ ವೈದ್ಯರಿಗೆ ಕರ್ತವ್ಯದಲ್ಲಿ ವಿನಾಯಿತಿ ನೀಡಲಾಗುತ್ತಿದೆ ಎಂಬ ಆರೋಪವೂ ಇದೆ. ಈ ಕುರಿತು ಆರೋಗ್ಯ ಇಲಾಖೆಯ ಉನ್ನತಾಧಿಕಾರಿಗಳು ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗದೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಸರ್ಕಾರಿ ಆಸ್ಪತ್ರೆಯಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿಲ್ಲ. ಆರ್‌ಒ ಪ್ಲಾಂಟ್ ಅಳವಡಿಸಿಲ್ಲ. ಕಳೆದ ನಾಲ್ಕು ವರ್ಷಗಳಿಂದ ಒಂದೇ ಸಂಸ್ಥೆಗೆ ಪಥ್ಯಾಹಾರ ಪೂರೈಕೆ ಟೆಂಡರ್ ನೀಡಲಾಗಿದ್ದು, ₹77 ಲಕ್ಷಕ್ಕೂ ಅಧಿಕ ಮೊತ್ತದ ಅನುದಾನದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪವಿದೆ ಎಂದು ಹೇಳಿದರು.

ಆಸ್ಪತ್ರೆಯ ತಜ್ಞ ವೈದ್ಯರ ಸಮಯ ಪಾಲನೆ, ರಾತ್ರಿ ಕರ್ತವ್ಯದಲ್ಲಿರುವ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳ ಹಾಜರಾತಿ, ಐಸಿಯು ಸೌಲಭ್ಯ ಹಾಗೂ ಕರ್ನಾಟಕ ಅಟೆಂಡೆನ್ಸ್ ಮ್ಯಾನೇಜ್‌ಮೆಂಟ್ ಸಿಸ್ಟಂ (CAMS) ಹಾಜರಾತಿಯನ್ನು ಪರಿಶೀಲಿಸಬೇಕು ಎಂದು ನಾಟಿಕಾರ ಆಗ್ರಹಿಸಿದರು.

ಔಷಧಿ ಖರೀದಿಯಲ್ಲೂ ಕಮಿಷನ್ ಆರೋಪ :

ಆಸ್ಪತ್ರೆಯ ಔಷಧಿ ಖರೀದಿಯಲ್ಲಿಯೂ ಅಕ್ರಮದ ಆರೋಪಗಳಿವೆ. ಕಲಬುರಗಿಯಲ್ಲಿ ಕಡಿಮೆ ದರಕ್ಕೆ ದೊರೆಯುವ ಔಷಧಿಗಳನ್ನು ತುಮಕೂರು, ರಾಮನಗರ ಹಾಗೂ ಬೆಂಗಳೂರು ಭಾಗಗಳಿಂದ ಖರೀದಿಸುವ ಅಗತ್ಯವೇನಿತ್ತು ಎಂಬುದನ್ನು ಪರಿಶೀಲಿಸಬೇಕು. ಈ ಖರೀದಿ ಪ್ರಕ್ರಿಯೆಯಲ್ಲಿ ಕಮಿಷನ್ ವ್ಯವಹಾರ ನಡೆದಿದೆಯೇ ಎಂಬುದನ್ನು ತನಿಖಾ ಅಧಿಕಾರಿಗಳು ಪತ್ತೆಹಚ್ಚಬೇಕು ಎಂದು ನಾಟಿಕಾರ ಹೇಳಿದರು.

ಕಳೆದ ಎರಡು ತಿಂಗಳಿಂದ ಪಥ್ಯಾಹಾರಕ್ಕೆ ಸಂಬಂಧಿಸಿದ ಅವ್ಯವಹಾರದ ಆರೋಪಗಳು ಕೇಳಿಬರುತ್ತಿದ್ದರೂ ಶಾಸಕ ಎಂ.ವೈ. ಪಾಟೀಲ್ ಅವರು ಈ ಕುರಿತು ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಸಿಂಗೆ, ಅಮೂಲ್ ಮೋರೆ, ರಾಜು ಉಕ್ಕಲಿ, ಶರಣಗೌಡ ಪಾಟೀಲ, ಮರೆಪ್ಪ ಜಮಾದಾರ, ಭಾಗಣ್ಣ ಕುಂಬಾರ, ಪ್ರಕಾಶ ಖೈರಾಟ್, ಅಮರಸಿಂಗ ರಜಪೂತ, ಬಾಬುರಾವ್ ಕೋಬಾಳ, ಸಿಂಧೂರ ರಾಠೋಡ, ಶ್ರೀಶೈಲ್ ಮಾಲಿಪಾಟೀಲ, ಸಿದ್ದು ನ್ಯಾವನೂರ, ಸಿದ್ದು ಪಾಯದ, ಸುರೇಶ ಮಾತಾರಿ, ಶರಣು ಬಳೂರ್ಗಿ, ಗುರು ಘಾಣೂರ ಆನೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Afzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X