Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ವಿಶೇಷಚೇತನರನ್ನು ಅನುಕಂಪಕ್ಕೆ ಸೀಮಿತ...

ವಿಶೇಷಚೇತನರನ್ನು ಅನುಕಂಪಕ್ಕೆ ಸೀಮಿತ ಮಾಡದೆ ಅವಕಾಶ ಕೊಡಿ : ಅಲ್ಲಮಪ್ರಭು ಪಾಟೀಲ್

ವಿಶ್ವ ವಿಶೇಷಚೇತನರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ3 Dec 2024 9:56 PM IST
share
Photo of Program

ಕಲಬುರಗಿ : ವಿಕಲಚೇತನರನ್ನು ಇತರರಂತೆ ಕಾಣಬೇಕು. ಅನುಕಂಪಕ್ಕೆ ಸೀಮಿತವಾಗಿಸದೆ ಅವರಿಗೆ ಅವಕಾಶ ನೀಡಿ ಸಬಲರನ್ನಾಗಿಸುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಹೇಳಿದ್ದಾರೆ.

ಮಂಗಳವಾರ ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಲಬುರಗಿ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಎಲ್ಲಾ ಸಂಘ/ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಎಂ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂರವರ ಸಂಯುಕ್ತಾಶ್ರಯದಲ್ಲಿ ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಆಯೋಜಿಸಿದ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹುಟ್ಟಿನಿಂದ ಅಥವಾ ಆಕಸ್ಮಿಕ ಘಟನೆಯಿಂದ ಅಂಗವಿಕಲರಾದರು ಜೀವನದ ಉತ್ಸಾಹ ಬಿಡದೆ ಅನೇಕ ಕ್ರಿಯಾಶೀಲ ಚಟುವಟಿಕೆಯಲ್ಲಿ ತೊಡಗಿರುವ ವಿಶೇಷಚೇತನರೇ ನಮಗೆಲ್ಲ ಸ್ಪೂರ್ತಿದಾಯಕರಾಗಿದ್ದಾರೆ. ಯಾವುದೇ ಕಾರಣಕ್ಕೂ ಅಂಗವಿಕಲ ನೆಪದಿಂದ ಅವರ ಆತ್ಮ ವಿಶ್ವಾಸ ಕುಂದಿಸುವ ಕೆಲಸ ಯಾರು ಮಾಡಬಾರದು ಎಂದು ಅಲ್ಲಮಪ್ರಭು ಪಾಟೀಲ್ ಹೇಳಿದರು.

ಸಮಾಜದ ದೃಷ್ಠಿಕೋನ ಬದಲಾಗಲಿ : ಡಾ.ಸಾಬಣ್ಣಾ ತಳವಾರ

ಜಿಲ್ಲೆಯಲ್ಲಿ 60 ಸಾವಿರ ಜನರು ವಿಕಲಚೇತರಿದ್ದಾರೆ. ಅವರಿಗಾಗಿಯೇ ಅನೇಕ ಯೋಜನೆಗಳಿವೆ. ವಿಶೇಷವಾಗಿ ಶೇ.5 ಅನುದಾನ ನಿಮ್ಮ ಕಲ್ಯಾಣಕ್ಕೆ ಮೀಸಲಿದೆ. ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ನೀಡಲಾಗಿದೆ. ಇದನ್ನು ನೀವು ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಶೇಷಚೇತನರಿಗೆ ಕರೆ ನೀಡಿದ ಅವರು, ಸಮಾಜ ಇವರನ್ನು ನೋಡುವ ದೃಷ್ಟಿ ಬದಲಾಯಿಸಬೇಕಿದೆ. ಅಯ್ಯೋ ಪಾಪ ಎನ್ನುವುದನ್ನು ಬಿಟ್ಟು ಸಮನಾಗಿ ಕಾಣಬೇಕಿದೆ ಎಂದು ವಿಧಾನ ಪರಿಷತ್ ಶಾಸಕ ಡಾ.ಸಾಬಣ್ಣಾ ತಳವಾರ ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್, ಜಿಲ್ಲಾ ಅಂಗವಿಕಲರ ಕಲ್ಯಾಣಾದಿಕಾರಿ ಸಾದಿಕ್ ಹುಸೇನ್, ಹೈದ್ರಾಬಾದ ಕರ್ನಾಟಕ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ದತ್ತು ಅಗರವಾಲ, ದಕ್ಷಿಣ ಭಾರತ ದಲಿತ ಎಜುಕೇಷನ್ ಸೋಸೈಟಿ ಅಧ್ಯಕ್ಷ ರಾಜೇಶ್ ಶಿವಶರಣ್ಣಪ್ಪ, ವಿನಾಯಕ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಶ್ರೀಮಂತ ರೇವೂರ, ಮಹಾದೇವಿ ತಾಯಿ ಮಹಿಳಾ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಅನಂತರಾಜ, ದಿ.ಅಸೋಸಿಯೆಷನ್ ಆಫ್ ಪೀಪಲ್ ವಿತ್ ಡಿಸ್ಸೇಬಿಲಿಟಿ (ಎ.ಪಿ.ಡಿ) ಅಧ್ಯಕ್ಷ ಶಿವಶಂಕರ, ಲುಂಬಿಣಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ಗುರುನಂದೇಶ ಕೊಣಿ, ಸೇವಾ ಸಂಗಮ ಸಂಸ್ಥೆ ಅಧ್ಯಕ್ಷ ದೀಪಕ, ಶ್ರೀಯಾಕ ಶಿಕ್ಷಣ ಸಂಸ್ಥೆ ಅಧ್ಯಕ್ಷ ರಾಜು ಶಾಕಾಪೂರ, ಕರ್ನಾಟಕ ರಾಜ್ಯ ಅಂಗವಿಕಲರ ಆರ್.ಪಿ.ಡಿ ಟಾಸ್ಕ್ ಫೋರ್ಸ್ ಸಂಸ್ಥೆಯ ಗಾಯತ್ರಿ ಸುತಾರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X