Kalgi | ರಟಕಲ್ ಗ್ರಾ.ಪಂ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಕಲಬುರಗಿ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಕಾಳಗಿ ತಾಲ್ಲೂಕಿನ ರಟಕಲ್ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಮಂಗಳವಾರ ಸಿಬ್ಬಂದಿಗಳು ಸಂವಿಧಾನ ಪಿತಾಮಹ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜ್ಞಾನದೇವ್ ಹೋಲ್ಕರ್, ಸಿಬ್ಬಂದಿಗಳಾದ ಶ್ರವಣಕುಮಾರ್, ರಮೇಶ್, ಧೋಳಪ್ಪ, ಭೀಮರಾಯ ಸ್ವಚ್ಚತಾ ಸಿಬ್ಬಂದಿಗಳು ಸೇರಿದಂತೆ ಇತರರು ಇದ್ದರು.
Next Story




