ಕಲಬುರಗಿ ಪಿಡಬ್ಲ್ಯೂಡಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಆಗಿ ಅಮೀನ್ ಮುಕ್ತಾರ್ ಅಹ್ಮದ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ವೃತ್ತದ ಲೋಕೋಪಯೋಗಿ ಇಲಾಖೆಯ ಸೂಪರಿಂಟೆಂಡೆಂಟ್ ಇಂಜಿನಿಯರ್ ಆಗಿ ಅಮೀನ್ ಮುಕ್ತಾರ್ ಅಹ್ಮದ್ ಅವರು ಶುಕ್ರವಾರ ಸಂಜೆ ಅಧಿಕಾರ ಸ್ವೀಕರಿಸಿದರು.
ಅವರು ಇದಕ್ಕೂ ಮುನ್ನ ಬಳ್ಳಾರಿ ವೃತ್ತದ ಲೋಕೋಪಯೋಗಿ ಇಲಾಖೆ ಎಸ್ಇ ಆಗಿದ್ದರು. ಈಗ ವರ್ಗಾವಣೆಯಾಗಿ ಕಲಬುರಗಿಗೆ ಬಂದು ಈ ವಿಭಾಗದ ಸೂಪರಿಂಟೆಂಡೆಂಟ್ ಇಂಜಿನಿಯರ್ ಆಗಿ ನೇಮಕಗೊಂಡರು.
ಅಮೀನ್ ಅವರು ಈ ಹಿಂದೆ ಪಿಡಬ್ಲ್ಯೂಡಿ ಇಲಾಖೆಯ ಬೀದರ್‌ನ ಕಾರ್ಯನಿರ್ವಾಹಕ ಇಂಜಿನಿಯರ್, ಕಲಬುರಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿಯೂ ಸೇವೆ ಸಲ್ಲಿಸಿದ್ದರು.
Next Story





