Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಬರ ಪರಿಹಾರ ವರದಿ ಸಲ್ಲಿಕೆ ವಿಳಂಬವಾಗಿದೆ...

ಬರ ಪರಿಹಾರ ವರದಿ ಸಲ್ಲಿಕೆ ವಿಳಂಬವಾಗಿದೆ ಎಂಬ ಅಮಿತ್ ಶಾ ಹೇಳಿಕೆ ಸತ್ಯಕ್ಕೆ ದೂರ : ಸಚಿವ ಪ್ರಿಯಾಂಕ್ ಖರ್ಗೆ

"ರಾಜ್ಯ ಸರಕಾರ ತನ್ನೆಲ್ಲಾ ಪ್ರಯತ್ನ ಮಾಡಿದ್ದರೂ ಗೃಹ ಸಚಿವರು ಉನ್ನತ ಮಟ್ಟದ ಸಭೆ ಕರೆಯುವ ಗೋಜಿಗೆ ಹೋಗಿಲ್ಲ"

ವಾರ್ತಾಭಾರತಿವಾರ್ತಾಭಾರತಿ3 April 2024 2:49 PM IST
share
ಬರ ಪರಿಹಾರ ವರದಿ ಸಲ್ಲಿಕೆ ವಿಳಂಬವಾಗಿದೆ ಎಂಬ ಅಮಿತ್ ಶಾ ಹೇಳಿಕೆ ಸತ್ಯಕ್ಕೆ ದೂರ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ಬರ ಪರಿಹಾರ ಮನವಿ ಸಲ್ಲಿಸಲು ರಾಜ್ಯ ಸರಕಾರ ಮೂರು ತಿಂಗಳು ವಿಳಂಬ ಮಾಡಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಸುಳ್ಳು ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದ ಅವರು,"ರಾಜ್ಯದ 236 ತಾಲೂಕಗಳ ಪೈಕಿ 223 ತಾಲೂಕುಗಳನ್ನು ಬರಪೀಡಿತ ಹಾಗೂ 223 ತಾಲೂಕುಗಳ ಪೈಕಿ 196 ತಾಲೂಕುಗಳನ್ನು ತೀವ್ರ ಬರ ಪೀಡಿತ ಎಂದು ರಾಜ್ಯ ಸರಕಾರ ಘೋಷಿಸಿ ಕೇಂದ್ರಕ್ಕೆ ಸೆಪ್ಟೆಂಬರ್ 22, 2023 ಎಂದು ವರದಿ‌ ಸಲ್ಲಿಸಿತ್ತು. ನಂತರ 10 ಸದಸ್ಯರ ಕೇಂದ್ರದ‌ ತಂಡ ಅಕ್ಟೋಬರ್ 05 ಹಾಗೂ 9 ರಂದು ಬರಪೀಡಿತ ಪ್ರದೇಶಗಳಿಗೆ ಭೇಟಿ‌ ನೀಡಿ ಬರ ಅಧ್ಯಯನ ನಡೆಸಿತ್ತು. ಆ ಬಳಿಕ, ರಾಜ್ಯದ ಮತ್ತೆ 21 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ಹೆಚ್ಚುವರಿ ಮನವಿಯನ್ನು ಅಕ್ಟೋಬರ್ 9ರಂದು ಕೇಂದ್ರಕ್ಕೆ ಸಲ್ಲಿಸಲಾಗಿತ್ತು‌ ಎಂದು ವಿವರಿಸಿದರು.

ಬರ ಮ್ಯಾನುವೆಲ್ ನಿಯಮಾವಳಿ ಪ್ರಕಾರ ಮುಂಗಾರು ಹಂಗಾಮಿನಲ್ಲಿನ ಬರದ ವರದಿಯನ್ನು ಅಕ್ಟೋಬರ್ 31 ಹಾಗೂ ಹಿಂಗಾರಿನ ಬರದ ವರದಿಯನ್ನು ಮಾರ್ಚ್ 31ರ ಒಳಗಾಗಿ ಸಲ್ಲಿಸಬೇಕು. ರಾಜ್ಯ ಸರಕಾದ ಮುಂಗಾರಿನ ಬರದ ವರದಿಯನ್ನು ಸೆಪ್ಟೆಂಬರ್ 22 ಕ್ಕೆ‌ಹಾಗೂ ಹೆಚ್ಚುವರಿ ಮನವಿಯನ್ನು ಅಕ್ಟೋಬರ್ 9 ಕ್ಕೆ ಸಲ್ಲಿಸಿದ್ದು, ನಿಯಮಾವಳಿ ನಿಗದಿಪಡಿಸಿದ ದಿನಾಂಕದ ಒಳಗೆ ಸಲ್ಲಿಸಲಾಗಿದೆ. ಆದರೂ ಕೂಡಾ ಕೇಂದ್ರ ಗೃಹ ಸಚಿವರು ಮನವಿಯನ್ನು ವಿಳಂಬವಾಗಿ ಸಲ್ಲಿಸಲಾಗಿದೆ ಎಂದು ಸುಳ್ಳು ಹೇಳಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದ ಒಟ್ಟು 48 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದ್ದು, 18171.44 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ‌ ಇಲಾಖೆ ಸಚಿವ ನರೇಂದ್ರ ಸಿಂಗ್ ತೋಮರ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ನವೆಂಬರ್ 15, 2023 ರಂದು ಬರೆದ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ ಎಂದರು.

ಇದಲ್ಲದೇ, ನವೆಂಬರ್ 23, 2023 ರಂದು ಕೃಷಿ ಸಚಿವ ಹಾಗೂ ಕಂದಾಯ ಸಚಿವರು ಖುದ್ದಾಗಿ ಕೇಂದ್ರ ಹಣಕಾಸು ಸಚಿವೆ ಅವರನ್ನು ಭೇಟಿಯಾಗಿ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ. ಇದಾದ ನಂತರ, ಡಿಸೆಂಬರ್ 20, 2023 ರಂದು ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರು ಕೇಂದ್ರ ಗೃಹ‌ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ನಂತರ, ಜನವರಿ 19, 2024 ರಂದು ಮುಖ್ಯಮಂತ್ರಿ ಪ್ರಧಾನಿ ಅವರಿಗೆ ಪತ್ರ ಬರೆದು ಬರ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ. ಇಷ್ಟಾದರೂ ಕೇಂದ್ರ ತನ್ನ ನಿರ್ಲಕ್ಷ್ಯ ಧೋರಣೆ ಮುಂದುವರೆಸಿರುವುದನ್ನು ವಿರೋಧಿಸಿ ರಾಜ್ಯದ ಸಚಿವರು ಫೆಬ್ರವರಿ 7, 2024 ರಂದು ದಿಲ್ಲಿಯಲ್ಲಿ ಪ್ರತಿಭಟನೆ ನಡೆಸಬೇಕಾಯಿತು ಎಂದು ಖರ್ಗೆ ವಿವರಿಸಿದರು.

ರಾಜ್ಯದಲ್ಲಿ ಭೀಕರ ಬರಗಾಲದ ಪರಿಸ್ಥಿತಿ ಇದ್ದು, ಬರಪರಿಹಾರ ಬಿಡುಗಡೆ ಮಾಡುವಂತೆ ರಾಜ್ಯ ಸರಕಾರ ಪತ್ರ ಬರೆಯುವ ಮೂಲಕ, ಸಚಿವರನ್ನು ಖುದ್ದಾಗಿ ಭೇಟಿ ಮಾಡುವ ಮೂಲಕ, ತನ್ನೆಲ್ಲ ಪ್ರಯತ್ನವನ್ನು ಮಾಡಿದ್ದರೂ ಕೂಡಾ ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಭೆ ಕರೆದು ತೀರ್ಮಾನ ಮಾಡುವ ಗೋಜಿಗೆ ಹೋಗಿಲ್ಲ. ಆದರೆ, ರಾಜ್ಯಕ್ಕೆ ಬಂದಾಗ ಸುಳ್ಳು ಹೇಳುತ್ತಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X