Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಬಸವಣ್ಣನವರ ತತ್ವ ಸಿದ್ಧಾಂತ ಅಳವಡಿಸಿದರೆ...

ಬಸವಣ್ಣನವರ ತತ್ವ ಸಿದ್ಧಾಂತ ಅಳವಡಿಸಿದರೆ ಆದರ್ಶ ಸಮಾಜ ನಿರ್ಮಾಣ ಸಾಧ್ಯ: ಅಮರನಾಥ ಪಾಟೀಲ

ವಾರ್ತಾಭಾರತಿವಾರ್ತಾಭಾರತಿ5 July 2025 11:45 PM IST
share
ಬಸವಣ್ಣನವರ ತತ್ವ ಸಿದ್ಧಾಂತ ಅಳವಡಿಸಿದರೆ ಆದರ್ಶ ಸಮಾಜ ನಿರ್ಮಾಣ ಸಾಧ್ಯ: ಅಮರನಾಥ ಪಾಟೀಲ

ಕಲಬುರಗಿ: ಬಸವಣ್ಣನವರ ತತ್ವ ಸಿದ್ಧಾಂತವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಆದರ್ಶ ಸಮಾಜ ನಿರ್ಮಾಣ ಸಾಧ್ಯ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ ಹೇಳಿದರು.

ನಗರದ ಬಸವ ಮಂಟಪದಲ್ಲಿ ಶನಿವಾರ ಆಯೋಜಿಸಿದ್ದ ಗುರುಬಸವ ಸೇವಾ ಪ್ರತಿಷ್ಠಾನ ದ ನಾಲ್ಕನೇ ವಾರ್ಷಿಕೋತ್ಸವ ಹಾಗೂ ಲಿಂ.‌ ಶರಣ ಬಸವರಾಜ ನಾಗೂರ ಅವರ ಐದನೇ ಸ್ಮರಣೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಷ್ಠಾನದ ಮೂಲಕ ವಿದ್ಯಾರ್ಥಿ ವೇತನ, ವಚನ ಗ್ರಂಥಗಳ ಪ್ರಕಟಣೆ ಮಾಡುತ್ತಿರುವುದು ಸ್ತುತ್ಯರ್ಹ ಕೆಲಸ ಎಂದು ಶ್ಲಾಘಿಸಿದರು.

ಎಲ್ಲರನ್ನು ಅಪ್ಪಿಕೊಳ್ಳುವ, ಒಪ್ಪಿಕೊಳ್ಳುವ ತಥವ ಬಸವತತ್ವವಾಗಿದೆ.‌ ಬಸವಾದಿ ಶರಣರ ವಚನ ವಿಚಾರಗಳು ಸಮುದ್ರದಾಚೆಗೂ ಹಬ್ಬಿದೆ.‌ ಒಂದು ಕಾಲದಲ್ಲಿ ರಾಜ್ಯದಲ್ಲಿ

ಮುಕ್ಕೋಟಿ ಜನಸಂಖ್ಯೆ ಇದ್ದ ಲಿಂಗಾಯತರ ಸಂಖ್ಯೆ ಜಾತಿ ಜನಗಣತಿಯಲ್ಲಿ ಕ್ಷೀಣವಾಗಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ನಾವೆಲ್ಲ ಮತ್ತೆ ಒಂದಾಗಿ, ಒಗ್ಗಟ್ಟಾಗಿ ಶಕ್ತಿ ಪ್ರದರ್ಶಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.

ವಿಶೇಷ ಉಪನ್ಯಾಸ ನೀಡಿದ ಡಾ.‌ ನೀಲಾಂಬಿಕಾ ಪೊಲೀಸ್ ಪಾಟೀಲ ಮಾತನಾಡಿ, ಶರಣ ಪರಿವಾರದ ಸದಸ್ಯರಾದವರು ಒಂದಾದರೆ ಸಮಾಜದಲ್ಲಿ ಒಗ್ಗಟ್ಟು ಬರಲು ಸಾಧ್ಯ. ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ದೊರೆತರೆ ಸಮಾಜದ ಮಕ್ಕಳ ಭವಿಷ್ಯ ಉಜ್ವಲವಾಗಲಿದೆ ಎಂದು ತಿಳಿಸಿದರು.

ಸದಾಚಾರಿಗಳಾಗಿದ್ದ ಬಸವರಾಜ ನಾಗೂರ ಅವರು ಸಮಾಜದಲ್ಲಿ ಉತ್ತಮ ಸಂಸ್ಕೃತಿಯನ್ನು ಬಿತ್ತಿದ್ದಾರೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಶರಣ ಚಿಂತಕ ಪ್ರೊ. ಸಂಜಯ ಮಾಕಲ್ ಮಾತನಾಡಿ, ವೈದಿಕ ಪರಂಪರೆಯ ಕಟ್ಟು ಪಾಡುಗಳನ್ನು ಮುರಿದ ಬಸವಣ್ಣನವರು ಸೋಹಂ, ಶಿವೋಂ ಬದಲಾಗಿ ದಾಸೋಹ ಪರಂಪರೆಯನ್ನು ಹುಟ್ಟು ಹಾಕಿದರು ಎಂದು ತಿಳಿಸಿದರು.

ಜೀವಿಗಳ ಏಳಿಗೆಯೇ ದೇವರ ಪೂಜೆ ಎಂಬುದು ಶರಣ ಸಿದ್ಧಾಂತವಾಗಿದೆ.‌ ಲಿಂಗಾಯತರ ಅಸ್ಮಿತೆ ದಾಸೋಹ ಪರಂಪರೆಯಲ್ಲಿದೆ. ಆ ಪರಂಪರೆಯನ್ನು ನಾಗೂರ ಶರಣರು ಮುಂದುವರಿಸಿಕೊಂಡು ಬಂದಿದ್ದರು ಎಂದರು.

ರಾಷ್ಟ್ರೀಯ ಬಸವ ದಳದ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಜಿ. ಶೆಟಗಾರ, ವಚನೋತ್ಸವ ಪ್ರತಿಷ್ಠಾನದ ಕಾರ್ಯದರ್ಶಿ ಬಸವರಾಜ ಧೂಳಾಗುಂಡಿ ಅತಿಥಿಗಳಾಗಿದ್ದರು.

ಸಾನ್ನಿಧ್ಯವಹಿಸಿದ್ದ ಬೆಳವಿಯ ಚರಂತೇಶ್ವರ ವಿರಕ್ತಮಠದ ಶರಣಬಸವ ಮಹಾಸ್ವಾಮೀಜಿ ಮಾತನಾಡಿ, ಬಸವಣ್ಣ ಈ ಜಗದ ಬೆಳಕು. ವಚನ ವೈಚಾರಿಕತೆ ನಮ್ಮ ಅಂತರಂಗದ ಕದ ತೆಗೆಯಬಲ್ಲದು ಎಂದು ತಿಳಿಸಿದರು.

ಪ್ರತಿಷ್ಠಾನದ ಅಧ್ಯಕ್ಷ ಶರಣಬಸಪ್ಪ ನಾಗೂರ ಅಧ್ಯಕ್ಷತೆ ವಹಿಸಿದ್ದರು.

ಪ್ರಧಾನ ಕಾರ್ಯದರ್ಶಿ ರವೀಂದ್ರ ಶಾಬಾದಿ ಪ್ರಾಸ್ತಾವಿಕ ಮಾತನಾಡಿದರು. ಬಸವರಾಜ ಬಾವಿ ನಿರೂಪಿಸಿದರು. ಬಸವರಾಜ ಶಾಬಾದಿ ಸ್ವಾಗತಿಸಿದರು. ಕಲ್ಯಾಣಿ ಬಿರಾದಾರ ಪ್ರಾರ್ಥನೆಗೀತೆ ಹಾಡಿದರು.

ಇದೇವೇಳೆಯಲ್ಲಿ ಬಸವತತ್ವ ಪರಿಪಾಲಕ ಡಾ. ಮಲ್ಲಿಕಾರ್ಜುನ ಪಾಲಾಮೂರ ಅವರನ್ನು ವಿಶೇಷವಾಗಿ ಸತ್ಕರಿಸಲಾಯಿತು.

ಕಮಲಾಬಾಯಿ ಶಾಬಾದಿ, ಶಾರದಾ ಜಾಕಾ, ಶಿವಕುಮಾರ ಶಾಬಾದಿ, ಬಸವರಾಜ ಪಾರಶೆಟ್ಟಿ, ಡಾ. ಶಿವರಂಜನ ಸತ್ಯಂಪೇಟೆ, ಮಹಾದೇವಿ ಪರಶೆಟ್ಟಿ, ಶಿವರಾಯ ಬಳಗಾನೋರ, ಮಹಾಂತೇಶ ಕಲ್ಬುರ್ಗಿ, ಸತೀಶ ಸಜ್ಜನ್, ಹಣಮಂತ ಗುಡ್ಡಾ, ಮಲ್ಲಿಕಾರ್ಜುನ ಗೋಳಾ, ಇತರರಿದ್ದರು.

ಇದೇವೇಳೆಯಲ್ಲಿ ಉಮಾಶ್ರೀ, ಸಂಜಯ, ಮೇಘನ, (ಮೆಡಿಕಲ್ ವ್ಯಾಸಾಂಗ), ಪ್ರಭಾಕರ, ಶರತ್, ಪ್ರಭಾಕರ ಸಾಹೇಬಗೌಡ, ಶಾಂತಾ (ಇಂಜಿನಿಯರಿಂಗ್ ವ್ಯಾಸಾಂಗ), ಜಯಶ್ರೀ (ಬಿಎಸ್ ಸಿ ಅಗ್ರಿ ವ್ಯಾಸಾಂಗ) ಅವರಿಗೆ ಮೆಡಿಕಲ್ ವಿದ್ಯಾರ್ಥಿಗಳಿಗೆ ತಲಾ 40 ಸಾವಿರ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 25 ಸಾವಿರ ರೂ. ವಿದ್ಯಾರ್ಥಿ ವೇತನ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X