ಕಲಬುರಗಿ | ಮೌಲಾನಾ ಆಝಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

ಕಲಬುರಗಿ : 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಝಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಈ ಮಾದರಿ ಶಾಲೆಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಶೇ.75ರಷ್ಟು ಮತ್ತು ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ ಶೇ.25 ರಷ್ಟು ಸ್ಥಾನಗಳು ಮೀಸಲಿಡಲಾಗಿದೆ.
ಅರ್ಹ ಅಭ್ಯರ್ಥಿಗಳು https://sevasindhuservice.karnataka.gov.in ವೆಬ್‍ಸೈಟ್‍ದಲ್ಲಿ 2025ರ ಮೇ 10ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಉಚಿತ ಸೇವೆ ಬಳಸಿಕೊಳ್ಳಲು ತಮ್ಮ ಸಮೀಪದ ಮೌಲಾನಾ ಆಝಾದ್ ಮಾದರಿ ಶಾಲೆ, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 827779990 ಹಾಗೂ ಕಲಬುರಗಿ ಜಿ.ಡಿ.ಎ ಕಚೇರಿ ಮೊದಲನೇ ಮಹಡಿಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-247260 ಹಾಗೂ https://sevasindhuservice.karnataka.gov.in ವೆಬ್‍ಸೈಟ್‍ಗೆ ಸಂಪರ್ಕಿಸಲು ಕೋರಲಾಗಿದೆ.