Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ: ಅತಿಥಿ ಉಪನ್ಯಾಸಕರ...

ಕಲಬುರಗಿ: ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ28 Oct 2025 11:17 PM IST
share
ಕಲಬುರಗಿ: ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಲಬುರಗಿ: 2025-26ನೇ ಸಾಲಿಗೆ ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಮುಖ್ಯ ಆವರಣ ಹಾಗೂ ಆಳಂದ ಸ್ನಾತಕೋತ್ತರ ಕೇಂದ್ರದಲ್ಲಿ ಬೋಧನಾ ಕಾರ್ಯದ ನಿರ್ವಹಣೆಗಾಗಿ ಯು.ಜಿ.ಸಿ. ನಿಯಮಾನುಸಾರ ಬೋಧನಾ ಕಾರ್ಯ ಅನುಗುಣವಾಗಿ ಪೂರ್ಣಕಾಲಿಕ/ ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ (ಕಾರ್ಯಬಾಹುಳ್ಯಕ್ಕೆ ಅನುಗುಣವಾಗಿ) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವರು ತಿಳಿಸಿದ್ದಾರೆ.

ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿನ ಸ್ನಾತಕೋತ್ತರ ವಿಭಾಗಗಳಾದ ಸಸ್ಯಶಾಸ್ತ್ರ, ಜೀವರಸಾಯನಶಾಸ್ತ್ರ, ಪ್ರಾಣಿಶಾಸ್ತ್ರ, ಪರಿಸರ ವಿಜ್ಞಾನ, ಜೈವಿಕ ತಂತ್ರಜ್ಞಾನ, ರಸಾಯನಶಾಸ್ತ್ರ (ಫಿಜಿಕಲ್ ಕೆಮಿಸ್ಟ್ರಿ, ಇನ್‍ಆರ್ಗನಿಕ್ ಕೆಮಿಸ್ಟ್ರಿ, ಆರ್ಗನೆಕ್ ಕೆಮಿಸ್ಟ್ರಿ ಮತ್ತು ಅನಾಲೆಟಿಕಲ್ ಕೆಮಿಸ್ಟ್ರಿ), ಸೂಕ್ಷ್ಮ ಜೀವಶಾಸ್ತ್ರ, ಗಣಕ ವಿಜ್ಞಾನ (ಎಂ.ಸಿ.ಎ., ಎಂ.ಎಸ್ಸಿ. (ಗಣಕ ವಿಜ್ಞಾನ), ಸಂಖ್ಯಾಶಾಸ್ತ್ರ, ಭೌತಶಾಸ್ತ್ರ, ಗಣಿತಶಾಸ್ತ್ರ, ಅರ್ಥಶಾಸ್ತ್ರ, ಇತಿಹಾಸ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಸಮಾಜಕಾರ್ಯ, ಸಮಾಜಶಾಸ್ತ್ರ, ಮನೋವಿಜ್ಞಾನ, ರಾಜ್ಯಶಾಸ್ತ್ರ, ಕನ್ನಡ, ಪಾಲಿ ಮತ್ತು ಬೌದ್ಧ ಅಧ್ಯಯನ, ಇಂಗ್ಲೀಷ, ಮರಾಠಿ, ಸಂಗೀತ, ಹಿಂದಿ, ಸಂಸ್ಕೃತ, ಉರ್ದು ಮತ್ತು ಪರ್ಶಿಯನ್, ದೃಶ್ಯಕಲಾ (ಎಂ.ವಿ.ಎ. ಪೇಂಟಿಂಗ್, ಎಂ.ವಿ.ಎ. ಸ್ಕಲ್ಪಚರ್), ನಿರ್ವಹಣಾಶಾಸ್ತ್ರ, ವಾಣಿಜ್ಯ ಎಂ.ಕಾಂ., ಶಿಕ್ಷಣ ಮತ್ತು ಕಾನೂನು ಹಾಗೂ ಆಳಂದ ಸ್ನಾತಕೋತ್ತರ ಕೇಂದ್ರದಲ್ಲಿ ವಾಣಿಜ್ಯ, ಗಣಕ ವಿಜ್ಞಾನ, ಗಣಿತ, ಇಂಗ್ಲೀಷ ಹಾಗೂ ಕನ್ನಡ ವಿಭಾಗಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಅಕ್ಟೋಬರ್ 27 ರಿಂದ ಆರಂಭಗೊಂಡಿದ್ದು, ಅರ್ಜಿ ಸಲ್ಲಿಕೆಗೆ ನವೆಂಬರ್ 7 ರಂದು ಕೊನೆಯ ದಿನವಾಗಿದೆ. ವಿವಿಧ ಅಧ್ಯಯನ ವಿಭಾಗಗಳ ಮುಖ್ಯಸ್ಥರು ಮೆರಿಟ್ ಲಿಸ್ಟ್‍ನ್ನು ಆಡಳಿತ ವಿಭಾಗಕ್ಕೆ ಸಲ್ಲಿಸಲು ಕೊನೆಯ ದಿನ ನವೆಂಬರ್ 10 ರಿಂದ 12 ರವರೆಗೆ ಇರುತ್ತದೆ. ನವೆಂಬರ್ 14 ರಂದು ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸಲಾಗುತ್ತದೆ. ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಕೆಗೆ ನವೆಂಬರ್ 17 ರಂದು ಕೊನೆಯ ದಿನವಾಗಿದೆ. ನವೆಂಬರ್ 18 ರಂದು ಅಂತಿಮ ಮೆರಿಟ್ ಪಟ್ಟಿ ಪ್ರಕಟಿಸಲಾಗುತ್ತದೆ. ನವೆಂಬರ್ 24 ರಿಂದ ಸಂದರ್ಶನ ಪ್ರಾರಂಭವಾಗಲಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 600 ರೂ. ಹಾಗೂ ಪ.ಜಾ./ಪ.ಪಂ, ಪ್ರವರ್ಗ-1 ಅಭ್ಯರ್ಥಿಗಳಿಗೆ 300 ರೂ. ನಿಗದಿಪಡಿಸಲಾಗಿದೆ.

ಅತಿಥಿ ಉಪನ್ಯಾಸಕರನ್ನು ಯು.ಜಿ.ಸಿ. ಹಾಗೂ ಕಾಲಕಾಲಕ್ಕೆ ಹೊರಡಿಸುವ ಸರ್ಕಾರಿ ನಿಯಮಾವಳಿಯ ಪ್ರಕಾರ ನೇಮಕ ಮಾಡಲಾಗುತ್ತದೆ. ಈ ಹುದ್ದೆಗಳು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, 2025-26ನೇ ಶೈಕ್ಷಣಿಕ ಸಾಲಿಗೆ ಮಾತ್ರ ಸೀಮಿತವಾಗಿದ್ದು, ಯಾವುದೇ ಕಾರಣವನ್ನು ನೀಡದೇ ಯಾವುದೇ ಸಮಯದಲ್ಲಿ ರದ್ದುಗೊಳಿಸಲಾಗುತ್ತದೆ.

ವಿವಿಧ ವಿಭಾಗಗಳ ವಿವರವನ್ನು ಹಾಗೂ ನಿಗದಿತ ಅರ್ಜಿ ನಮೂನೆಯನ್ನು ವಿಶ್ವವಿದ್ಯಾಲಯದ www.gug.ac.in ವೆಬ್‍ಸೈಟ್‍ದಿಂದ ಡೌನ್‍ಲೋಡ್ ಮಾಡಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿ ನಿಗದಿತ ಶುಲ್ಕ ಮತ್ತು ಲಗತ್ತುಗಳೊಂದಿಗೆ ಶೈಕ್ಷಣಿಕ ಅರ್ಹತೆ, ಅನುಭವದ ವಿವರ, ಜಾತಿ, ವರ್ಗ ಪ್ರಮಾಣ ಪತ್ರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಗೆಜೆಟೆಡ್ ಅಧಿಕಾರಿಯಿಂದ ದೃಢೀಕರಿಸಿದ ಪ್ರತಿಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು.

ಸಂದರ್ಶನದ ದಿನಾಂಕ ಮತ್ತು ಸಮಯವನ್ನು ಹಾಗೂ ಇದಕ್ಕೆ ಸಂಬಂಧಿಸಿದ ಇನ್ನಿತರೆ ಮಾಹಿತಿಯನ್ನು ವಿಶ್ವವಿದ್ಯಾಲಯದ ವೆಬ್‍ಸೈಟ್‍ದಲ್ಲಿ ಪ್ರಕಟಿಸಲಾಗುತ್ತದೆ. ಅಭ್ಯರ್ಥಿಗಳು ವಿಶ್ವವಿದ್ಯಾಲಯದ ವೆಬ್‍ಸೈಟ್ ಗಮನಿಸಬೇಕು. ಅತಿಥಿ ಉಪನ್ಯಾಸಕರ ನೇಮಕಾತಿಗಳು ಷರತ್ತಿಗೆ ಒಳಪಟ್ಟಿರುತ್ತವೆ. ಹಾಗೆ ನೇಮಕಗೊಂಡ ಅತಿಥಿ ಉಪನ್ಯಾಸಕರು ತಮ್ಮ ಸೇವೆಯನ್ನು ಕ್ರಮಬದ್ಧಗೊಳಿಸಲು ಯಾವುದೇ ಹಕ್ಕನ್ನು ಹೊಂದಿರುವುದಿಲ್ಲ.

ಭರ್ತಿ ಮಾಡಿದ ಅರ್ಜಿಯೊಂದಿಗೆ ಎಲ್ಲಾ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ ಕಲಬುರಗಿ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿನ ವಿಭಾಗದ ಮುಖ್ಯಸ್ಥರ ಕಚೇರಿಗೆ ಖುದ್ದಾಗಿ/ ರಜಿಸ್ಟರ್ಡ್ ಅಂಚೆ ಮೂಲಕ 2025ರ ನವೆಂಬರ್ 7 ರೊಳಗಾಗಿ ತಲುಪುವಂತೆ ಸಲ್ಲಿಸಬೇಕು. ಅಪೂರ್ಣವಾದ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X