Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿಯಲ್ಲಿ 13.98 ಕೋಟಿ ರೂ. ಬಂಡವಾಳ...

ಕಲಬುರಗಿಯಲ್ಲಿ 13.98 ಕೋಟಿ ರೂ. ಬಂಡವಾಳ ಹೂಡಿಕೆಯ 4 ಹೊಸ ಯೋಜನೆಗಳಿಗೆ ಅನುಮೋದನೆ

269 ಉದ್ಯೋಗ ಸೃಷ್ಟಿಗೆ ಅವಕಾಶ; ಖಾಲಿ ಕೈಗಾರಿಕಾ ನಿವೇಶನಗಳ ರದ್ದತಿಗೆ ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ15 Oct 2026 9:43 PM IST
share
ಕಲಬುರಗಿಯಲ್ಲಿ 13.98 ಕೋಟಿ  ರೂ. ಬಂಡವಾಳ ಹೂಡಿಕೆಯ 4 ಹೊಸ ಯೋಜನೆಗಳಿಗೆ ಅನುಮೋದನೆ

ಕಲಬುರಗಿ: ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ 13.98 ಕೋಟಿ ರೂ. ಬಂಡವಾಳ ಹೂಡಿಕೆಯ ನಾಲ್ಕು ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ಈ ಯೋಜನೆಗಳ ಅನುಷ್ಠಾನದಿಂದ ಭವಿಷ್ಯದಲ್ಲಿ 269 ಉದ್ಯೋಗಗಳ ಸೃಷ್ಟಿಗೆ ಅವಕಾಶ ದೊರೆಯಲಿದೆ.

ಜಿಲ್ಲೆಯಲ್ಲಿ ಬಂಡವಾಳ ಹೂಡಿಕೆಗೆ ಪೂರಕವಾದ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಆಸಕ್ತಿ ವಹಿಸಿ ಕಾರ್ಯನಿರ್ವಹಿಸಬೇಕು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ನಂದೂರ–ಕೆಸರಟಗಿ ಮೂರನೇ ಹಂತದ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಸುಮಾರು 2,000 ಉದ್ಯೋಗಗಳನ್ನು ಸೃಷ್ಟಿಸುವ ಸಿದ್ಧ ಉಡುಪುಗಳ ತಯಾರಿಕಾ ಘಟಕ ಸ್ಥಾಪನೆಗೆ ಮೆ. ಶಾಹಿ ಎಕ್ಸ್‌ಪೋರ್ಟ್ ಪ್ರೈ.ಲಿ. ಸಂಸ್ಥೆಗೆ ಈಗಾಗಲೇ 16 ಎಕರೆ ಜಮೀನು ಮಂಜೂರು ಮಾಡಲಾಗಿದೆ. ಈ ಘಟಕಕ್ಕೆ ಅಗತ್ಯವಿರುವ ಸಿಬ್ಬಂದಿಗೆ ತರಬೇತಿ ನೀಡಿ ನೇಮಕ ಮಾಡಿಕೊಳ್ಳಲು ಅನುಕೂಲವಾಗುವಂತೆ, ನಂದೂರ–ಕೆಸರಟಗಿ ಎರಡನೇ ಹಂತದಲ್ಲಿರುವ ಟೈಸ್ ಯೋಜನೆಯಡಿ ನಿರ್ಮಿಸಿರುವ ಪ್ಲಗ್‌ ಆ್ಯಂಡ್‌ ಪ್ಲೇ ಕಟ್ಟಡದ ನೆಲಮಹಡಿಯನ್ನು ಸಂಸ್ಥೆಗೆ ನೀಡಲು ಸಭೆ ಒಪ್ಪಿಗೆ ಸೂಚಿಸಿತು.

ಇದೇ ಕಟ್ಟಡದ ಮೊದಲ ಮಹಡಿಯನ್ನು ನವ ಉದ್ಯಮಿಗಳಿಗೆ ನೆರವಾಗುವ ಉದ್ದೇಶದಿಂದ ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಲಿಮಿಟೆಡ್‌ (ಕಿಟ್ಸ್) ಸಂಸ್ಥೆಗೆ ನೀಡಲಾಗಿದೆ. ಅಲ್ಲದೆ, ಉತ್ಪಾದನಾ ಬದಲಾವಣೆಗೆ ಸಂಬಂಧಿಸಿದ 10 ಪ್ರಕರಣಗಳ ಕುರಿತು ಸಭೆಯಲ್ಲಿ ಪರಿಶೀಲನೆ ನಡೆಸಿ, ಉತ್ಪಾದನಾ ಬದಲಾವಣೆಗೆ ಅನುಮೋದನೆ ನೀಡಲಾಯಿತು.

ಖಾಲಿ ನಿವೇಶನಗಳ ರದ್ದತಿಗೆ ಸೂಚನೆ :

ಜಿಲ್ಲೆಯ ವಿವಿಧ ಕೈಗಾರಿಕಾ ಪ್ರದೇಶಗಳಲ್ಲಿ ಕೈಗಾರಿಕೆ ಸ್ಥಾಪಿಸಲು ನಿವೇಶನ ಪಡೆದು ಹಲವು ವರ್ಷಗಳಿಂದ ಯೋಜನೆ ಅನುಷ್ಠಾನಗೊಳಿಸದೆ ಖಾಲಿ ಬಿಟ್ಟಿರುವ ನಿವೇಶನಗಳ ಸಮೀಕ್ಷೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಖಾಲಿ ನಿವೇಶನಗಳನ್ನು ನಿಯಮಾನುಸಾರ ಒಂದು ತಿಂಗಳ ಅವಧಿಯಲ್ಲಿ ರದ್ದುಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ರದ್ದುಗೊಳಿಸಿದ ನಿವೇಶನಗಳನ್ನು ಆಸಕ್ತ ನವ ಉದ್ಯಮಿಗಳಿಗೆ ಮರುಹಂಚಿಕೆ ಮಾಡುವಂತೆಯೂ ನಿರ್ದೇಶನ ನೀಡಿದರು.

ಕೈಗಾರಿಕೆಗಳಿಗೆ ನೀರು ಪೂರೈಕೆ :

ಕಲಬುರಗಿ ಜಿಲ್ಲೆಯ 1,919.21 ಎಕರೆ ವಿಸ್ತೀರ್ಣದ ಕಪನೂರ ಮೊದಲ, ಎರಡನೇ ಮತ್ತು ಮೂರನೇ ಹಂತ ಹಾಗೂ ನಂದೂರ–ಕೆಸರಟಗಿ ಮೊದಲ ಮತ್ತು ಎರಡನೇ ಹಂತ ಸೇರಿದಂತೆ ಒಟ್ಟು ಒಂಬತ್ತು ಕೆಐಎಡಿಬಿ ಕೈಗಾರಿಕಾ ಪ್ರದೇಶಗಳು ಮತ್ತು ನಾಲ್ಕು ಕೆಎಸ್‌ಎಸ್‌ಐಡಿಸಿ ಕೈಗಾರಿಕಾ ವಸಾಹತುಗಳಲ್ಲಿರುವ ಸುಮಾರು 1,272 ಕೈಗಾರಿಕಾ ಘಟಕಗಳಿಗೆ ಬೆಣ್ಣೆತೋರಾ ಜಲಾಶಯದಿಂದ ದಿನಕ್ಕೆ 20 ಎಂಎಲ್‌ಡಿ ನೀರು ಪೂರೈಸುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.

118 ಕೋಟಿ ರೂ. ವೆಚ್ಚದ ಈ ಅಭಿವೃದ್ಧಿ ಕಾಮಗಾರಿಯನ್ನು ಕೆಐಎಡಿಬಿ ಅನುಷ್ಠಾನಗೊಳಿಸುತ್ತಿದೆ. ಹಲವು ವರ್ಷಗಳಿಂದ ಎದುರಿಸುತ್ತಿದ್ದ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಕ್ಕೆ ಸಭೆಯಲ್ಲಿ ಉಪಸ್ಥಿತರಿದ್ದ ಕೈಗಾರಿಕೋದ್ಯಮಿಗಳ ಪ್ರತಿನಿಧಿಗಳು ಸಂತಸ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದರು.

ಸಭೆಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಅಬ್ದುಲ್ ಅಜೀಮ್, ಅಧಿಕಾರಿಗಳಾದ ರುಪಾಲಿ, ನಳಿನಿ ಮತ್ತು ಜಾಫರ್ ಅನ್ಸಾರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಕೈಗಾರಿಕಾ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X